ಚಳ್ಳಕೆರೆ: ಭೀಕರ ಕಾರು ಅಪಘಾತದಲ್ಲಿ ಮೂರು ಕಂದಮ್ಮಗಳು ಸೇರಿ ಸ್ಥಳದಲ್ಲೇ ನಾಲ್ವರು ಸಾವು
ಚಿತ್ರದುರ್ಗ, ಜನವರಿ, 25: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಕಂದಮ್ಮಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸಿಂಧುಶ್ರೀ (2), 5 ತಿಂಗಳ ಕೂಸು ಅಯ್ಯಾಳಪ್ಪ, 3 ತಿಂಗಳ ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಸಾಣಿಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಣಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.












Click it and Unblock the Notifications