• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರಿನಲ್ಲಿ ನೆಲೆಕಂಡ ಪವಾಡಪುರುಷ ತೇರುಮಲ್ಲೇಶ್ವರನ ಬ್ರಹ್ಮರಥೋತ್ಸವ

|

ಚಿತ್ರದುರ್ಗ, ಫೆಬ್ರವರಿ 09: ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿಯಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಾಳೆ ನಡೆಯಲಿದೆ. ಪಾಳೇಗಾರ ವಂಶಸ್ಥ ರಾಜ ಕೆಂಚಪ್ಪ ನಾಯಕ 1446ರಲ್ಲಿ ನಿರ್ಮಿಸಿರುವ ತೇರುಮಲ್ಲೇಶ್ವರ ಸ್ವಾಮಿ ದೇಗುಲ ಐತಿಹಾಸಿಕ ಕಾರಣದಿಂದಷ್ಟೇ ಅಲ್ಲ, ಕೆಲವು ನಂಬಿಕೆಯ ಕಾರಣದಿಂದಲೂ ಜನಪ್ರಿಯತೆ ಪಡೆದುಕೊಂಡಿದೆ.

ದೇವರ ಮೂಲ ವಿಗ್ರಹ ಕಾಶಿಯಲ್ಲಿರುವಂತೆ ದಕ್ಷಿಣ ದಿಕ್ಕಿಗೆ ಮುಖ ಮಾಡಿದ ಕಾರಣಕ್ಕೆ ದೇಗುಲವನ್ನು ದಕ್ಷಿಣ ಕಾಶಿ ಎಂದು ಕರೆಯಲಾಗುತ್ತದೆ. ಶ್ರೀಶೈಲ ಮಲ್ಲಿಕಾರ್ಜುನನ ಪರಮ ಭಕ್ತೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮ ತನ್ನ ಇಳಿ ವಯಸ್ಸಿನಲ್ಲಿ ಶ್ರೀಶೈಲಕ್ಕೆ ನಡೆದುಕೊಂಡು ಹೋಗಿ ದರ್ಶನ ಮಾಡಿ ಬರುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಆಕೆಯ ಕನಸಿನಲ್ಲಿ ಕಾಣಿಸಿಕೊಂಡ ಮಲ್ಲಿಕಾರ್ಜುನ ಸ್ವಾಮಿ ತಾನೇ ಇಲ್ಲಿ ನೆಲೆ ನಿಲ್ಲುವುದಾಗಿ ಹೇಳುತ್ತಾನೆ. ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆ ಇಲ್ಲಿದೆ...

 ಕಲ್ಲಾಗಿ ಮನೆಗೆ ಬಂದ ಮಲ್ಲಿಕಾರ್ಜುನ

ಕಲ್ಲಾಗಿ ಮನೆಗೆ ಬಂದ ಮಲ್ಲಿಕಾರ್ಜುನ

ಹಿರಿಯೂರಿನಲ್ಲಿ ನೆಲೆಸಿದ್ದ ಮಲ್ಲಮ್ಮ ಆಗಾಗ ಕಾಲ್ನಡಿಗೆಯಲ್ಲಿ ಶ್ರೀಶೈಲಕ್ಕೆ ಹೋಗಿ ತನ್ನ ಇಷ್ಟದೈವ ಚೆನ್ನಮಲ್ಲಿಕಾರ್ಜುನನ ದರ್ಶನ ಮಾಡಿ ಬರುತ್ತಿದ್ದಳು. ಒಮ್ಮೆ ಹೀಗೆಯೇ ಶ್ರೀಶೈಲಕ್ಕೆ ಪ್ರಯಾಣಿಸುವಾಗ ದಣಿವಾದಂತಾಗಿ ಎಲೆ ಅಡಿಕೆ ಮೆಲ್ಲಲು ಆರಂಭಿಸಿದಳು. ಅಡಿಕೆ ಪುಡಿ ಮಾಡಿಕೊಳ್ಳಲು ಕಲ್ಲೊಂದನ್ನು ಎತ್ತಿಕೊಂಡು ಪುಡಿಮಾಡಿ ನಂತರ ಬಿಸಾಡಿದಳು. ಮುಂದೆ ದಾರಿಯಲ್ಲಿ ಎರಡು ಮೂರು ಬಾರಿ ಅಡಿಕೆ ಪುಡಿ ಮಾಡುವಾಗಲೂ ಅದೇ ಕಲ್ಲು ಸಿಕ್ಕಿದ್ದಲ್ಲದೆ ಮನೆಗೆ ಮರಳಿ ಬಂದಾಗಲೂ ತನ್ನ ಅಡಿಕೆ ಚೀಲದಲ್ಲಿ ಆ ಕಲ್ಲು ಗೋಚರಿಸುತ್ತದೆ. ಅಚ್ಚರಿಗೊಂಡ ಮಲ್ಲಮ್ಮ ಅದನ್ನು ಹೊರಗೆ ಬಿಸಾಡಿದಾಗ ಅದು ಮನೆಯ ಒಳಗಿದ್ದ ಒಳ ಕಲ್ಲಿನಲ್ಲಿ ಬಂದು ಕುಳಿತುಕೊಳ್ಳುತ್ತದೆ.

ಕರ್ನಾಟಕದ ವಿವಿಧೆಡೆ ಫೆಬ್ರುವರಿಯಲ್ಲಿ ನಡೆಯುವ ಜಾತ್ರೆಗಳು

ಮಲ್ಲಮ್ಮನಿಗೆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ಚೆನ್ನಮಲ್ಲಿಕಾರ್ಜುನ, "ನಿನಗೆ ವಯಸ್ಸಾಯಿತು. ಶ್ರೀಶೈಲಕ್ಕೆ ಬರುವ ತೊಂದರೆ ತೆಗೆದುಕೊಳ್ಳಬೇಡ. ಕಲ್ಲಿನ ರೂಪದಲ್ಲಿ ಬಂದವನು ನಾನೇ. ಇಲ್ಲಿ ನನ್ನನ್ನು ಪೂಜಿಸು" ಎಂದು ಹೇಳಿ ಮಾಯವಾದಂತೆ. ಈ ಘಟನೆ ನಂತರ ಮಲ್ಲಮ್ಮನ ಮನೆಯೇ ಮಲ್ಲೇಶ್ವರ ದೇಗುಲವಾಯಿತು ಎಂಬ ಪ್ರತೀತಿ ಇದೆ.

 ವೇದಾವತಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ರಥ

ವೇದಾವತಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ರಥ

ಮಲ್ಲೇಶ್ವರ ದೇಗುಲವಾದ ಕೆಲವು ವರ್ಷಗಳ ಬಳಿಕ ನೆರೆಯ ಹೊಸದುರ್ಗ ತಾಲ್ಲೂಕಿನ ಯಗಟಿ ಎಂಬಲ್ಲಿ ಮಲ್ಲೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿತ್ತು. ಆಗ ಭೀಕರ ಗಾಳಿ ಮಳೆ ಆರಂಭವಾಗಿ ವೇದಾವತಿ ನದಿ ಪ್ರವಾಹ ಹರಿದಿತ್ತು. ಅದರಲ್ಲಿ ಮಲ್ಲೇಶ್ವರನ ರಥ ಕೊಚ್ಚಿಹೋಗಿತ್ತು. ಹಿರಿಯೂರಿನ ಮಲ್ಲೇಶ್ವರ ದೇವಸ್ಥಾನ ಹತ್ತಿರ ಭಕ್ತರು ಆ ರಥವನ್ನು ತಂದರು. ಅಂದಿನಿಂದ ಮಲ್ಲೇಶ್ವರನನ್ನು ತೇರುಮಲ್ಲೇಶ್ವರ ಎಂದು ಕರೆಯಲಾಗುತ್ತಿದೆ. ಅಂದಿನಿಂದ ಪ್ರತಿವರ್ಷ ಮಾಘ ಮಾಸದ ಮಾಘ ನಕ್ಷತ್ರದಲ್ಲಿ ರಥೋತ್ಸವ ನಡೆಯುತ್ತದೆ. ಅಲ್ಲದೆ ಅಂದೇ ಚಂದ್ರಮೌಳೇಶ್ವರ, ಉಮಾಮಹೇಶ್ವರ ಸ್ವಾಮಿಗಳ ರಥೋತ್ಸವ ನಡೆಯುತ್ತದೆ.

ತೇರುಮಲ್ಲೇಶ್ವರ ರಥೋತ್ಸವ ಜರುಗಿದ ಎರಡು ದಿನಗಳ ನಂತರ ರಾತ್ರಿ 9 ಗಂಟೆಗೆ ಕರ್ಪೂರದ ಆರತಿ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ದೇಗುಲದ ಒಳ ಆವರಣದಲ್ಲಿ ಗರ್ಭಗುಡಿಯ ಮುಂಭಾಗದ ಕಲ್ಲು ಕಂಬದ ಮೇಲೆ 8 ಅಡಿ ಎತ್ತರದ ಬಸವ ಮಂಟಪದಲ್ಲಿ ಒಳಗೆ ಚಿಕ್ಕ ನಂದಿ ವಿಗ್ರಹವಿದೆ. ಇದಕ್ಕೆ ಆರು ಅಡಿ ಉದ್ದವಿರುವ ಕಬ್ಬಿಣದ ಸೌಟುಗಳನ್ನು (ಉದ್ದನೆಯ ಹಿಡಿ ಇರುವ ದೀಪ) ಜೋಡಿಸಲಾಗಿದ್ದು, ಕರ್ಪೂರದಾರತಿಯ ದಿನ 56 ನುಣುಪಾದ ಕೆತ್ತನೆಯಿಂದ ಕೂಡಿರುವ ದೀಪಸ್ತಂಭದ ಮೇಲೆ ಏರಿ ಬತ್ತಿ ಎಣ್ಣೆ ಹಾಕಿ ಕರ್ಪೂರ ಬಳಸಿ ದೀಪ ಹಚ್ಚುವ ದೃಶ್ಯ ಭಕ್ತರನ್ನು ರೋಮಾಂಚಿತರನ್ನಾಗಿ ಮಾಡುತ್ತದೆ.

 ಎರಡು ಹೋಳಾದ ಸ್ತಂಭ

ಎರಡು ಹೋಳಾದ ಸ್ತಂಭ

ಸುಮಾರು 56 ಅಡಿ ಎತ್ತರವಿರುವ ಸ್ತಂಭದ ಕಲ್ಲನ್ನು ಆಂಧ್ರಪ್ರದೇಶದಿಂದ ಹಿರಿಯೂರಿಗೆ ತರುವಾಗ ತಾಲೂಕಿನ ಅಂಬಲಗೆರೆ ಗ್ರಾಮದ ಬಳಿ ಬಿದ್ದು ಎರಡು ಹೋಳಾಯಿತು. ಅದರಲ್ಲಿ ಉದ್ದವಿದ್ದ ಕಂಬವನ್ನು ಹಿರಿಯೂರಿಗೆ ತಂದು ಮತ್ತೊಂದು ಭಾಗವನ್ನು ಅದೇ ಗ್ರಾಮದ ರಂಗನಾಥಸ್ವಾಮಿ ದೇಗುಲದ ಮುಂದೆ ಸ್ಥಾಪಿಸಲಾಯಿತು ಎನ್ನುತ್ತಾರೆ ಹಿರಿಯರು.

ಉಳವಿ ಚೆನ್ನಬಸವೇಶ್ವರ ಮಹಾರಥೋತ್ಸವ ಫೆ. 10 ಕ್ಕೆ

ಹಿಂದೆ ನಾಡನ್ನು ಆಳುತ್ತಿದ್ದ ದೊರೆಗಳು ಕರ್ಪೂರದ ಆರತಿ ಕಾರ್ಯಕ್ರಮವನ್ನು ಪುರುಷರ ಶೌರ್ಯದ ಪ್ರತೀಕವನ್ನಾಗಿ ಪರಿಗಣಿಸಿದ್ದರು. ಧೀರ ಪುರುಷರು 56 ಅಡಿ ಎತ್ತರದ ದೀಪಸ್ತಂಭವನ್ನು ಚಕಚಕನೆ ಏರಿ ಕರ್ಪೂರ ಹಚ್ಚಿ ನೆರೆದಿದ್ದ ಹೆಂಗಳೆಯರ ಮನ ಗೆಲ್ಲುವುದು ವಾಡಿಕೆಯಾಗಿತ್ತು. ಕಾರ್ತಿಕ ಮಾಸ ಹಾಗೂ ಜಾತ್ರೆಯ ಸಂದರ್ಭದಲ್ಲಿ ಸೌಟುಗಳಲ್ಲಿ ದೀಪ ಹಚ್ಚುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ. ದೀಪದ ಬೆಳಕು ರಾತ್ರಿವೇಳೆ ಮೂರು ಕಿಲೋಮೀಟರ್ ದೂರದವರೆಗೂ ಕಾಣುತ್ತದೆ. ಹಿರಿಯೂರು ತಾಲೂಕು ಸೇರಿದಂತೆ ಚಿತ್ರದುರ್ಗ, ಚಳ್ಳಕೆರೆ, ದಾವಣಗೆರೆ, ಹೊಸದುರ್ಗ ಮೊದಲಾದ ನಗರಗಳಿಂದ ಸಾವಿರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

 ವೀರ ಕರಿಯಣ್ಣ ದೇವರು ಬರುವವರೆಗೂ ರಥ ಮುಂದೆ ಹೋಗುವುದಿಲ್ಲ

ವೀರ ಕರಿಯಣ್ಣ ದೇವರು ಬರುವವರೆಗೂ ರಥ ಮುಂದೆ ಹೋಗುವುದಿಲ್ಲ

ಬುಡಕಟ್ಟು ಕಾಡುಗೊಲ್ಲರ ಆರಾಧ್ಯದೈವನಾದ ವೀರಕರಿಯಣ್ಣ ದೇವರು ಬರುವವರೆಗೂ ತೇರು ಮಲ್ಲೇಶ್ವರನ ರಥ ಮುಂದಕ್ಕೆ ಚಲಿಸುವುದಿಲ್ಲ. ಹಿರಿಯೂರು ತಾಲೂಕಿನ ಬೀರನಹಳ್ಳಿ ಮುಜರೆ ಗ್ರಾಮದ ಕರಿಮುದ್ದನಹಟ್ಟಿ ಗ್ರಾಮದ ವೀರ ಕರಿಯಣ್ಣ ದೇವರು ತೇರುಮಲ್ಲೇಶ್ವರನ ಆಸ್ಥಾನಕ್ಕೆ ಬಂದಾಗ ರಥೋತ್ಸವ ವಿಜೃಂಭಣೆಯಿಂದ ಜರುಗುತ್ತದೆ. ಈ ಹಿಂದೆ ಹೊಸದುರ್ಗ ತಾಲೂಕಿನ ಯಗಟಿ ಎಂಬಲ್ಲಿ ಮಲ್ಲೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿದ್ದಾಗ ಭೀಕರ ಗಾಳಿ ಮಳೆ ಆರಂಭವಾಗಿ ವೇದಾವತಿ ನದಿಯಲ್ಲಿ ಪ್ರವಾಹದಲ್ಲಿ ಕೊಚ್ಚಿ ಬಂದ ರಥವನ್ನು ಕರಿಯಣ್ಣ ನೋಡುತ್ತಾನೆ. ಪಶುಪಾಲಕನಾಗಿದ್ದ ವೀರ ಕರಿಯಣ್ಣ ಹೆಗಲ ಮೇಲಿನ ಕಂಬಳಿ ತೆಗೆದು ಅದನ್ನು ಹಗ್ಗವನ್ನಾಗಿ ಮಾಡಿ ರಥಕ್ಕೆ ಕಟ್ಟಿ ಎಳೆಯುತ್ತಾನೆ. ಅಂದಿನಿಂದ ಇಂದಿನವರೆಗೂ ಕರಿಯಣ್ಣನ ಮುಂದಾಳತ್ವದಲ್ಲಿ ರಥೋತ್ಸವ ನಡೆಯುತ್ತದೆ.

ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಸಿಡಿ ಉತ್ಸವಕ್ಕೆ ಬಿತ್ತು ಬ್ರೇಕ್

ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಪೀಠ- ದೈವಜ್ಞ ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ ಉದ್ಯೋಗದಲ್ಲಿ ತೊಂದರೆ, ಮದುವೆ ವಿಳಂಬ, ಸತಿ- ಪತಿ ಕಲಹ, ಡೈವರ್ಸ್ ಪ್ರಾಬ್ಲಮ್, ಶತ್ರು ಪೀಡೆ, ಅತ್ತೆ -ಸೊಸೆ ಕಲಹ, ಸಂತಾನ ಸಮಸ್ಯೆ, ಆರೋಗ್ಯ ಸಮಸ್ಯೆ, ರಾಜಕೀಯದಲ್ಲಿ ಶತ್ರುಗಳ ಕಾಟ, ಸಿನಿಮಾ ಪ್ರವೇಶ ಇನ್ನೂ ಯಾವುದೇ ಗುಪ್ತ ಸಮಸ್ಯೆಗೆ ಗುರೂಜಿ ಅವರನ್ನು ನೇರವಾಗಿ ಭೇಟಿಯಾಗಬಹುದು. ಗುರೂಜಿ ಅವರ ಸಲಹೆ ಮತ್ತು ಪರಿಹಾರ ಪಡೆದುಕೊಂಡಂಥ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ವಿಳಾಸ # 37, 4th block, ಜಯನಗರ, ಬೆಂಗಳೂರು- 9986623344

English summary
The Therumalleswara Swamy Brahmarathotsava of Chitradurga district will be held tomorrow. Built in 1446 by King Kanchappa Nayaka, the Terumalleswara Swamy Temple is popular not only for historical reasons but also for some beliefs
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X