"ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇವಕ"

ಚಿತ್ರದುರ್ಗ, ಆಗಸ್ಟ್‌, 19: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಅದರಂತೆಯೇ ಇತ್ತ ಕೋಟೆನಾಡು ಚಿತ್ರದುರ್ಗದಲ್ಲೂ ಸಚಿವರು, ಶಾಸಕರು, ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಸೇವಕನಾಗಿರುವ ಕರ್ನಾಟಕ ರಾಜ್ಯಪಾಲರಾದ ಥಾವೋರ್ ಚಂದ್ ಗೆಹ್ಲೋಟ್‌ಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Thawar Chand Gehlot slave of PM Narendra Modi and Amit Shah Congress

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಬಿಜಿ ಗೋವಿಂದಪ್ಪ, ಎಸ್‌.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಮಾಜಿ ಸಚಿವ ಹೆಚ್ ಆಂಜನೇಯ, ಮಾಜಿ ಸಂಸದ ಬಿಎನ್ ಚಂದ್ರಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ರಸ್ತೆ ತಡೆದು ಪ್ರತಿಭಟನೆ: ಮುಡಾ ಹಗರಣ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್‌ಗೆ ಅನುಮತಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರಿಂದ ರಾಷ್ಟ್ರೀಯ ಹೆದ್ದಾರಿ ತಡೆದು, ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಐಯ್ಯನಹಳ್ಳಿ ಬಳಿ ಸೇರಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ ಗೆ ಬೆಂಕಿ ಹಚ್ಚಿ, ರಾಜ್ಯಪಾಲರು ಸತ್ತು ಹೋದ್ರು ಅಂತಾ ಬಾಯಿ ಬಡೆದುಕೊಂಡರು. ಅಲ್ಲದೆ ರಾಜ್ಯಪಾಲರ ವಿರುದ್ಧ ಗೋಬ್ಯಾಕ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೃಹತ್‌ ಪ್ರತಿಭಟನಾ ಜಾಥಾ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಶಾಸಕರು, ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲದಿಂದ ಬೃಹತ್‌ ಪ್ರತಿಭಟನಾ ಜಾಥಾ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇನ್ನು ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆ ರೀತಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.

ಈ ವೇಳೆ ಶಾಸಕರಾದ ಸಿ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಚೂಡಾ ಅಧ್ಯಕ್ಷ ಮಹಮದ್ ಆಸ್ಗರ್ ಮುನ್ನಾ ಸೇರಿದಂತೆ ಮತ್ತಿತರರು ಉಪಸ್ಥಿತರುದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+