ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದು ಕಾಲದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ; ವಿಜಯೇಂದ್ರ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 15: "ಒಂದು ಕಾಲದಲ್ಲಿ ರಾಷ್ಟ್ರೀಯ ಪಕ್ಷ ಎಂದು ಅನ್ನಿಸಿಕೊಂಡಿದ್ದ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ," ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೆಲವು ರಾಜ್ಯಗಳಲ್ಲಿ ಅವಶೇಷಗಳ ರೀತಿಯಲ್ಲಿ ಉಳಿದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ಇನ್ನು ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಎರಡರಲ್ಲೂ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, "ಕಾಂಗ್ರೆಸ್ ಪಕ್ಷದಲ್ಲಿರುವ ಆಂತರಿಕ ಬೇಗುದಿ ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಮುಗಿಸುವುದಕ್ಕೆ ಯಾವುದೇ ವಿರೋಧ ಪಕ್ಷ ಬೇಕಾಗಿಲ್ಲ, ಕಾಂಗ್ರೆಸ್ ಪಕ್ಷದಲ್ಲಿರುವ ಮುಖಂಡರೇ ಸಾಕು," ಎಂದರು.

 ಕಾಂಗ್ರೆಸ್ ಪಕ್ಷ ಒಡೆದು ಮೂರು ಬಾಗಿಲು

ಕಾಂಗ್ರೆಸ್ ಪಕ್ಷ ಒಡೆದು ಮೂರು ಬಾಗಿಲು

"ಕಾಂಗ್ರೆಸ್ ಮುಕ್ತ ಭಾರತಕ್ಕೆ ಅವರೇ ಸಾಕು, ಬೇರೆ ಯಾವ ಪಕ್ಷ ಬೇಕಾಗಿಲ್ಲ. ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಒಡೆದು ಮೂರು ಬಾಗಿಲಾಗಿದೆ. ಅದೇ ರೀತಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಮೂರು ಬಾಗಿಲಾಗುತ್ತದೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು. ಕಾಂಗ್ರೆಸ್ ಪಕ್ಷ ಉಪ ಚುನಾವಣೆಯಲ್ಲಿ ತಾವೇ ಜಯಗಳಿಸುವುದು ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಇತ್ತೀಚೆಗೆ ನಡೆದಂತಹ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ಸ್ಥಳೀಯ ಚುನಾವಣೆಗಳಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಕೈ ಹಿಡಿದಿದ್ದಾರೆ," ಎಂದು ಹೇಳಿದರು.

ಇದೇ ವೇಳೆ ಮಾತು ಮುಂದುವರೆಸಿ, "ಐಟಿ ದಾಳಿ ಸಾಮಾನ್ಯ ಪ್ರಕ್ರಿಯೆ, ಐಟಿ ದಾಳಿಗೂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರಿಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಮೇಲೆ ರಾಜ್ಯಾದ್ಯಂತ ಸಂಚರಿಸಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ," ಎಂದು ತಿಳಿಸಿದರು.

 ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು

ವಿಪಕ್ಷ ನಾಯಕ ಸಿದ್ದರಾಯ್ಯ ಹಾಗೂ ಬಿಎಸ್‌ವೈ ಗುಪ್ತವಾಗಿ ಭೇಟಿಯಾಗಿದ್ದರು ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ವೈ. ವಿಜಯೇಂದ್ರ, "ಈಗಾಗಲೇ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲ, ರಾಜಕೀಯ ಪ್ರೇರಿತ ಹೇಳಿಕೆ ಕೊಟ್ಟಿದ್ದಾರೆ. ಅದದರಲ್ಲಿ ಯಾವುದೇ ಹುರುಳಿಲ್ಲ," ಎಂದು ಮಾಧ್ಯಮಗಳಿಗೆ ತಿಳಿಸಿದರು.

ಒಂದೇ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಜೊತೆ ಅಕ್ಕಪಕ್ಕದಲ್ಲಿ ಕುಳಿತಿರುವ ವಿಚಾರವಾಗಿ ಸುದ್ದಿಗಾರರಿಗೆ ಉತ್ತರಿಸಿದ ವಿಜಯೇಂದ್ರ, "ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆತ್ಮೀಯ ಮಿತ್ರರು. ಅವರೊಂದಿಗೆ ಯಾವುದೇ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದನ್ನು ಚರ್ಚೆ ಮಾಡಿಲ್ಲ. ಕೇವಲ ನಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಮಾತಾಡಿದ್ದೇವೆ," ಎಂದು ತಿಳಿಸಿದರು.

 ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಚಿತ್ರದುರ್ಗ ನಗರದ ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಹಾನಗಲ್ ಹಾಗೂ ಸಿಂದಗಿ ಎರಡು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದೆ," ಎಂದು ತಿಳಿಸಿದರು.

"ಬಿಜೆಪಿ ಸರ್ಕಾರ ರೈತರಿಗೆ, ವರ್ತಕರಿಗೆ, ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ, ಪೆಟ್ರೋಲ್, ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮೂಲಕ ಅನ್ಯಾಯವೆಸಗಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡಿದೆ. ಹೊಸದಾಗಿ ಬಂದಂತಹ ಮುಖ್ಯಮಂತ್ರಿಗಳು ಜನರಿಗೆ ಉಪಯೋಗವಾಗುವಂತಹ, ಗುರುತರವಾದ ಕೆಲಸವೇನು ಮಾಡಿಲ್ಲ," ಎಂದರು.

 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ

2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಇಷ್ಟವಿಲ್ಲ ಎಂಬ ಸಚಿವ ಬಿ. ಶ್ರೀರಾಮುಲು ಹೇಳಿಕೆ ಪ್ರತಿಕ್ರಿಯಿಸಿದ ಡಿಕೆಶಿ, "ಮನಸೋ ಇಚ್ಚೆ ತಲೆ ಕೆಟ್ಟವರ ರೀತಿ ಮಾತನಾಡುತ್ತಾರೆ, ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು," ಎಂದು ಒಂದೇ ಮಾತಿನಲ್ಲಿ ಉತ್ತರಿಸಿ ಸುಮ್ಮನಾದರು.

"ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶ ಇದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಯುವಕರು ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕು. 2023ರಲ್ಲಿ ಕಾಂಗ್ರೆಸ್ ಪಕ್ಷ ಯಾರ ಬೆಂಬಲವಿಲ್ಲದೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸ ನನಗೆ ಇದೆ. ಎಲ್ಲರೂ ಪಕ್ಷ ಸಂಘಟನೆ ಕಡೆ ಗಮನ ಹರಿಸಬೇಕು," ಎಂದು ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಕರೆ ನೀಡಿದರು.

Recommended Video

IPL ಟ್ರೋಫಿ ಗೆಲ್ಲೋದಕ್ಕೆ ಅರ್ಹವಾಗಿರೋರು ನಾವಲ್ಲ ಎಂದ ಧೋನಿ!ಮತ್ಯಾರು? | Oneindia Kannada

English summary
The Congress which was once a national party, is losing its existence, State BJP vice-president BY Vijayendra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X