ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

60 ವರ್ಷಗಳ ಕಾಂಗ್ರೆಸ್ ದುರಾಡಳಿತವೇ ನಿರುದ್ಯೋಗ ಸಮಸ್ಯೆಗೆ ಕಾರಣ: ಶ್ರೀರಾಮುಲು ಟೀಕೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 18: "ದೇಶದಲ್ಲಿ 60 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ಪರಿಣಾಮವಾಗಿ ದೇಶದ ನಿರುದ್ಯೋಗ ಸಮಸ್ಯೆಗೆ ಕಾರಣ," ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.

ಚಿತ್ರದುರ್ಗ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಅವರು ಏನೇ ಹಗಲು ಕನಸು ಕಂಡರೂ, 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದರ ಮೂಲಕ ನಮ್ಮ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ," ಎಂದು ಸ್ಪಷ್ಟವಾಗಿ ತಿಳಿಸಿದರು.

"ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಕಡಿಮೆಯಾಗಲಿದೆ. ಇದಕ್ಕೆ ಸಾಕ್ಷಿ ಈ ಹಿಂದೆ ನಡೆದ ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಫಲಿತಾಂಶ. ಈ ಚುನಾವಣೆಗಳ ಫಲಿತಾಂಶ ಮುಂಬರುವ ಚುನಾವಣೆಗಳ ದಿಕ್ಸೂಚಿ," ಎಂದು ಸಚಿವ ಶ್ರೀರಾಮುಲು ಹೇಳಿದರು.

The Unemployment Problem Is The Result Of 60 Years Of Congress Misadministration: Minister B Sriramulu

"ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಲುವಾಗಿ ನಿರುದ್ಯೋಗ ದಿವಸ್ ಆಚರಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ನಮ್ಮ ಸರ್ಕಾರ ಬಡವರ ಪರವಾಗಿ, ನಿರ್ಗತಿಕರ ಪರವಾಗಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಪ್ರಧಾನಮಂತ್ರಿ ನರೇಂದ್ರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡತನ, ನಿರುದ್ಯೋಗ ಸಮಸ್ಯೆ, ನೆರೆಹಾವಳಿ ಮತ್ತು ಕೋವಿಡ್ ಮಹಾಮಾರಿಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ," ಎಂದರು.

"ರಾಜ್ಯದಲ್ಲಿ ಶುಕ್ರವಾರ ಒಂದೇ ದಿನದಲ್ಲಿ 23,01,639 ಜನರಿಗೆ ಕೊವಿಡ್ -19 ಲಸಿಕೆ ನೀಡಿದ್ದೇವೆ ಎಂದ ಅವರು, ಈಗಾಗಲೇ ಶಾಲಾ- ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಮಾಡಲಾಗುವುದು," ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.

"ಇನ್ನು ಇತ್ತೀಚಿಗೆ ನಡೆದ ಮೂರು ಮಹಾನಗರ ಪಾಲಿಕೆಗಳ ಫಲಿತಾಂಶ ಪ್ರಕಟಗೊಂಡಿದ್ದು, ಮೂರರಲ್ಲಿಯೂ ಬಿಜೆಪಿ ಪಕ್ಷ ಅಧಿಕಾರ ಹಿಡಿಯಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪೆಟ್ರೋಲ್, ಡಿಸೇಲ್ ಹಾಗೂ ದಿನನಿತ್ಯದ ವಸ್ತುಗಳ ಬಳಕೆ ಬೆಲೆ ಆಗುತ್ತಿವೆ. ಅದಕ್ಕೆ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಬೆಲೆಯ ಬದಲಾವಣೆ ಕಾರಣವಾಗಿದೆ ಎಂದು ಹೇಳಿದರು.

"ನಿಮ್ಮ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಯಾವ ಮಟ್ಟದ ಬೆಲೆಗಳಿವೆ ಎಂಬುದನ್ನು ಪರಿಶೀಲನೆ ಮಾಡಿಕೊಳ್ಳಲಿ," ಎಂದು ಕಾಂಗ್ರೆಸ್ ಪಕ್ಷಕ್ಕೆ ಸಚಿವರು ಮರು ಪ್ರಶ್ನೆ ಹಾಕಿದರು.

The Unemployment Problem Is The Result Of 60 Years Of Congress Misadministration: Minister B Sriramulu

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶ್ರೀರಾಮುಲು, "ಸರ್ಕಾರದ ಗಮನಕ್ಕೆ ಬಾರದೆ ದೇವಸ್ಥಾನಗಳನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ," ಎಂದರು.

"ಜೆಡಿಎಸ್ ಪಕ್ಷ ಅಧಿಕಾರದ ಅವಧಿಯಲ್ಲಿ ಒಳ್ಳೆ ಕೆಲಸ ಮಾಡಿದೆ ಎಂದು ಜೆಡಿಎಸ್ ಪಕ್ಷವನ್ನು ಹೊಗಳಿದರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಾರದು. ಮುಂದಿನ ದಿನಗಳಲ್ಲಿ ಯಾರು ಯಾರ ಮನೆಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡೋಣ," ಎಂದು ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಮೀನು ಕೃಷಿಕರಿಗೆ ಪ್ರೋತ್ಸಾಹ: ಸಚಿವ ಎಸ್. ಅಂಗಾರ
"ಮೀನು ಕೃಷಿಕರಿಗೆ ಇಲ್ಲಿಯೇ ಮೀನು ಮರಿಗಳನ್ನು ಉತ್ಪಾದನೆ ಮಾಡಲು, ಮೀನು ಕೃಷಿಗೆ ಪ್ರೋತ್ಸಾಹ ಕೊಡುವುದರಿಂದ ನಮ್ಮ ಮೀನುಗಾರಿಕೆ ಉತ್ಪಾದನೆಯು ಕೂಡ ಹೆಚ್ಚಾಗುತ್ತದೆ," ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಅವರು ಶುಕ್ರವಾರ ಸಂಜೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿ ಸಾಗರ ಮೀನುಮರಿ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹೊರನಾಡು ಮೀನುಗಾರಿಕೆ ಸಂಬಂಧಿಸಿದಂತೆ ಮೀನುಮರಿ ಪಾಲನಾ ಕೇಂದ್ರ ಇಲ್ಲದೆ. ಉತ್ಪಾದನೆ ಕಡಿಮೆ ಆದಾಗ ಮಹಾರಾಷ್ಟ್ರ, ಆಂಧ್ರಪ್ರದೇಶದ ಬೇರೆ ಬೇರೆ ರಾಜ್ಯಗಳಿಂದ ಮೀನು ಮರಿಗಳನ್ನು ತಂದು ಕೊಡಲಾಗುತ್ತಿದೆ. ಇಲ್ಲಿಯೇ ಮೀನುಮರಿ ಉತ್ಪಾದನೆ ಮಾಡಿದರೆ ನಮ್ಮ ರಾಜ್ಯದಲ್ಲಿ ಉತ್ಪಾದನೆ ಹೆಚ್ಚಾಗಲು ಸಾಧ್ಯವಾಗುತ್ತದೆ," ಎಂದರು.

ಕರಾವಳಿ ಭಾಗದ ಎಲ್ಲ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಜೊತೆ ಏನೇನು ಸಮಸ್ಯೆಗಳು ಇದಾವೆ, ಸಮಸ್ಯೆಯನ್ನು ಯಾವ ರೀತಿಯಲ್ಲಿ ಪರಿಹಾರ ಮಾಡಬೇಕು, ಮೀನುಗಾರಿಕೆ ಇಲಾಖೆ ಮತ್ತು ಬೋಟ್‌ಗಳಿಗೆ ಸಂಬಂಧಪಟ್ಟಂತೆ ಏನು ಅಭಿವೃದ್ಧಿಗಳು ಆಗಬೇಕು ಇದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಯನ್ನು ಮಾಡಲಾಗಿದೆ.

ಸಭೆಯಲ್ಲಿ ಚರ್ಚಿಸಿದ ನಂತರ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನು ನೀಡಲು ಸಿಎಂ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ನಾನು ಈ ಭಾಗಕ್ಕೆ ಬಂದು ವೀಕ್ಷಣೆ ಮಾಡಿದ ಸಮಯದಲ್ಲಿ ಸುಮಾರು 12 ಎಕರೆ ಜಾಗ ಜಮೀನು ಇದೆ. ಇಲ್ಲಿ 100 ಮೀನುಮರಿ ಉತ್ಪಾದನೆ ಕೊಳಗಳು ಇವೆ. ಇದರಲ್ಲಿ 40 ಕೊಳಗಳಲ್ಲಿ ಉತ್ಪಾದನೆ ನಡೆಯುತ್ತಿದ್ದು, ಉಳಿದ 60 ಕೊಳಗಳು ಹಾಳಾಗಿವೆ ಎಂದು ತಿಳಿಸಿದರು.

Recommended Video

IPL ನಲ್ಲಿ 100 ಕೋಟಿ ಕ್ಲಬ್ ಸೇರಿ ಶೈನ್ ಆದ ಆಟಗಾರರು ಇವರೇ ನೋಡಿ | Oneindia Kannada

English summary
Congress Party's ruling in the country for 60 years is cause the unemployment problem in India, Transport Minister B Sriramulu criticized the Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X