ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಂಟೈನ್ಮೆಂಟ್ ವಲಯದಲ್ಲಿ ಪರೀಕ್ಷಾ ಕೇಂದ್ರ ಇರಲ್ಲ: ಸಚಿವ ಸುರೇಶ್ ಕುಮಾರ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 31: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯದಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಉಚಿತ ಮಾಸ್ಕ್ ವಿತರಣೆ ಮಾಡುತ್ತೇವೆ, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗುವುದು ಹಾಗೂ ಶಿಕ್ಷಕರ ಸ್ವಚ್ಛತೆಗೆ ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತದೆ ಎಂದರು.

SSLC ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳುವುದೇನು?SSLC ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳುವುದೇನು?

ಸುಮಾರು ಎಂಟೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಕ್ಕಳಿಗೆ ಉಚಿತ ಮಾಸ್ಕ್ ನೀಡಲು, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ಮುಂದೆ ಬಂದಿವೆ. ಈಗಾಗಲೇ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

There Is No SSLC Exam Center In Containment Zone: Minister Suresh Kumar

ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿಶೇಷವಾದ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 10.30 ರಿಂದ ಪರೀಕ್ಷೆ ಆರಂಭವಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳು 9:30 ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಹೇಳಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮೊದಲೇ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗುತ್ತದೆ, ಒಂದು ಕೊಠಡಿಯಲ್ಲಿ ಕೇವಲ 18 ವಿದ್ಯಾರ್ಥಿಗಳು ಪರೀಕ್ಷೆ ಅವಕಾಶ ನೀಡಲಾಗುವುದು. ತಮ್ಮ ಊರುಗಳಿಗೆ ವಾಪಸ್ ಹೋಗಿರುವ ವಲಸಿಗರ ಮಕ್ಕಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು ಎಂದರು.

There Is No SSLC Exam Center In Containment Zone: Minister Suresh Kumar

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು "ಚೇಂಜ್ ಆಫ್ ಸೆಂಟರ್" ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ಇನ್ನು ಶಾಲೆಗಳ ಪುನರಾರಂಭದ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದ ನಂತರ ನಿರ್ಧಾರ ಪ್ರಕಟಿಸಲಾಗುವುದು. ಕಂಟೈನ್ಮೆಂಟ್ ವಲಯದಲ್ಲಿರುವ ಮಕ್ಕಳಿಗೆ ಜುಲೈನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

English summary
Education Minister Suresh Kumar said there were no Exam centers in the containment sector in the wake of the coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X