ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾನವ ರಹಿತ ಯುದ್ಧ ವಿಮಾನ ಉತ್ಪಾದನಾ ಘಟಕ ತೆರೆಯಲು ಚಿಂತನೆ: ನಾರಾಯಣಸ್ವಾಮಿ

|
Google Oneindia Kannada News

ಚಿತ್ರದುರ್ಗ ಜುಲೈ.4: ಜಿಲ್ಲೆಯ ಡಿಆರ್‌ಡಿಓ ವೈಮಾನಿಕ ಪರೀಕ್ಷಾ ಕೇಂದ್ರದ ಕಾರ್ಯಗಳ ಬಗ್ಗೆ ಗೌರವವಿದೆ. ಸಂಶೋಧನಾ ಕೇಂದ್ರದ ಜೊತೆಗೆ ಸ್ಥಳೀಯವಾಗಿ ಉದ್ಯೋಗ ಅವಕಾಶ ನೀಡಬೇಕಾದರೆ, ವೈಮಾನಿಕ ರಕ್ಷಣಾ ಕೇತ್ರಕ್ಕೆ ಸಂಬಂಧಿಸಿದ ಬೃಹತ್ ಉತ್ಪಾದನಾ ಘಟಕಗಳನ್ನು ಸ್ಥಾಪನೆ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಡಿಆರ್‌ಡಿಓ ವೈಮಾನಿಕ ಪರೀಕ್ಷಣಾ ಕ್ಷೇತ್ರಕ್ಕೆ ಸೋಮವಾರ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ದೇಶದ ಯಾವ ಸ್ಥಳಗಳಲ್ಲಿ ವೈಮಾನಿಕ ಕ್ಷೇತ್ರದ ಕೈಗಾರಿಕೆಗಳಿವೆ. ಸಾಗಣಿಕೆ ವೆಚ್ಚವೇನು? ಬೆಂಗಳೂರಿನ ಎಚ್‍ಎಎಲ್ ಮೇಲಿನ ಒತ್ತಡ ಏನಿದೆ ? ಚಿತ್ರದುರ್ಗ ಜಿಲ್ಲೆಯಲ್ಲಿ ಘಟಕ ಸ್ಥಾಪನೆ ಸಾಧಕ ಬಾಧಕಗಳ ಸಂಪೂರ್ಣ ವರದಿ ತಯಾರಿಸಿ ಸರಕಾರದಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ವಿಡಿಯೋ; ಚಿತ್ರದುರ್ಗದಲ್ಲಿ ಚಾಲಕ ರಹಿತ ಯುದ್ಧ ವಿಮಾನದ ಹಾರಾಟವಿಡಿಯೋ; ಚಿತ್ರದುರ್ಗದಲ್ಲಿ ಚಾಲಕ ರಹಿತ ಯುದ್ಧ ವಿಮಾನದ ಹಾರಾಟ

ಆರ್ಥಿಕ ಬೆಳವಣಿಗೆ, ವೈಮಾನಿಕ ಸಂಚಾರ ದಟ್ಟಣೆ ಕಡಿಮೆ ಮಾಡಲು, ಮೇಕ್ ಇನ್ ಇಂಡಿಯಾ ಮುಖಾಂತರ ರಫ್ತು ಹೆಚ್ಚಿಸಲು, ಉತ್ಪಾದನಾ ಹಾಗೂ ಸಾಗಾಣಿಕೆ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ರೈಲು ಹಾಗೂ ವೈಮಾನಿಕ ಸೌಲಭ್ಯ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯೋಜನೆ ರೂಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ನಾಗರಿಕ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸವ ಕುರಿತು, ರಾಜ್ಯದ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ.

 ಕೆಲವೇ ದೇಶಗಳಿಂದ ಮಾತ್ರ ಈ ಸಾಧನೆ

ಕೆಲವೇ ದೇಶಗಳಿಂದ ಮಾತ್ರ ಈ ಸಾಧನೆ

ಮಾನವ ರಹಿತ ಯುದ್ಧ ವಿಮಾನ ಹಾರಟ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಜ್ಞಾನಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಾಧನೆ ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ. ಡಿಆರ್‌ಡಿಓ ವಿಜ್ಞಾನಿಗಳಿಗೆ ವಿಶೇಷ ಅಭಿನಂದನೆಗಳು. ವಿಶ್ವದಲ್ಲೇ ಈ ತಂತ್ರಜ್ಞಾನ ಹೊಂದಿದ ಕೆಲವೇ ದೇಶಗಳ ಸಾಲಿಗೆ ಭಾರತ ಸೇರಿದೆ. ಹೊಸ ಮೈಲುಗಲ್ಲು ಸ್ಥಾಪನೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಕೇಶ್ ಒಡೆತನದ ಅಕಾಶ ಏರ್ ಸಿಬ್ಬಂದಿ ಯೂನಿಫಾರ್ಮ್ ಲುಕ್ ಹೇಗಿದೆ?ರಾಕೇಶ್ ಒಡೆತನದ ಅಕಾಶ ಏರ್ ಸಿಬ್ಬಂದಿ ಯೂನಿಫಾರ್ಮ್ ಲುಕ್ ಹೇಗಿದೆ?

1000 ಕಿ.ಮೀ ಹಾರಾಟದ ಸಾಮರ್ಥ್ಯ

ಜುಲೈ 01ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟಿಟ್ವರ್‌ನಲ್ಲಿ ಆಟೋನೋಮಸ್ ಫೈಯಿಂಗ್ ವಿಂಗ್ ಟೆಕ್ನಾಲಜಿ ಹೊಂದಿದ ಮಾನವ ರಹಿತ ಯುದ್ಧ ವಿಮಾನದ ಯಶಸ್ವಿ ಪ್ರಾಯೋಗಿಕ ಹಾರಾಟ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪವಿರುವ ಡಿಆರ್‌ಡಿಒ ವೈಮಾನಿಕ ಪರೀಕ್ಷಣಾ ಕ್ಷೇತ್ರದಲ್ಲಿ ಈ ವಿಮಾನ ಹಾರಾಟದ ಪ್ರಾಯೋಗಿಕ ಪರೀಕ್ಷೆ ನಡೆದಿತ್ತು. ಈ ಯುದ್ಧ ವಿಮಾನ 1000 ಕಿ.ಮೀ ದೂರ ಕ್ರಮಿಸುವ ಹಾಗೂ ಸತತ 24 ಗಂಟೆ ಹಾರಾಟ ನಡೆಸುವ ಸಾಮಾರ್ಥ್ಯ ಹೊಂದಿದೆ.

 150 ಬಾರಿ ಯುದ್ದ ವಿಮಾನಗಳ ಪರೀಕ್ಷಾರ್ಥ ಹಾರಾಟ

150 ಬಾರಿ ಯುದ್ದ ವಿಮಾನಗಳ ಪರೀಕ್ಷಾರ್ಥ ಹಾರಾಟ

2016ರಲ್ಲಿ ರೂ. 384 ಕೋಟಿ ವೆಚ್ಚದಲ್ಲಿ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪ ಡಿಆರ್‌ಡಿಓ ವೈಮಾನಿಕ ಪರೀಕ್ಷಣಾ ಕ್ಷೇತ್ರ ನಿರ್ಮಿಸಲಾಗಿದೆ. ಇಲ್ಲಿ ಒಂದು ರೇಜ್ ಕಂಟ್ರೋಲರ್, 2 ವಿಮಾನ ಹ್ಯಾಂಗರ್ ಘಟಕಗಳಿವೆ. 10 ಮಾನವ ರಹಿತ ಯುದ್ದ ವಿಮಾನಗಳಿವೆ. ಯುದ್ದ ವಿಮಾನಗಳ ರಿಪೇರಿ ಹಾಗೂ ಆಧುನೀಕರಣ ಮಾಡಲಾಗುವುದು. ಇದುವರೆಗೆ ಒಟ್ಟು 150 ಬಾರಿ ಯುದ್ದ ವಿಮಾನಗಳ ಪರೀಕ್ಷಾರ್ಥ ಹಾರಾಟ ನಡೆಸಲಾಗಿದೆ. ಟಾಟಾ ಹಾಗೂ ಎಲ್ ಅಂಡ್ ಟಿ ಡೆಫೆನ್ಸ್ ಕಂಪನಿಗಳು ಇಲ್ಲಿ ಒಪ್ಪಂದ ಕರಾರಿನ ಮೇರೆಗೆ ದ್ರೋಣ್ ಹಾಗೂ ಯುದ್ದ ವಿಮಾನಗಳ ಸಂಶೋಧನೆ ನಡೆಸುತ್ತಿವೆ.

 ನಾಗರಿಕ ವಿಮಾನ ನಿಲ್ದಾಣಕ್ಕೆ ಚಿಂತನೆ

ನಾಗರಿಕ ವಿಮಾನ ನಿಲ್ದಾಣಕ್ಕೆ ಚಿಂತನೆ

ರಕ್ಷಣಾ ಇಲಾಖೆ ಅನುಮತಿ ಪಡೆದು ವೈಮಾನಿಕ ಪರೀಕ್ಷಣಾ ಕ್ಷೇತ್ರವನ್ನು ಬಳಸಿಕೊಂಡು ನಾಗರಿಕ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಲು ಚಿಂತನೆ ನಡೆದಿದೆ. ಸದ್ಯ ವೈಮಾನಿಕ ಪರೀಕ್ಷಣಾ ಕ್ಷೇತ್ರದ ವಿಮಾನ ನಿಲ್ದಾಣದ ರನ್ ವೇ 40 ಟನ್ ಸಾಮಾರ್ಥ್ಯದ ವಿಮಾನಗಳಿಗೆ ಸೂಕ್ತವಾಗಿದೆ. ನಾಗರಿಕ ವಿಮಾನ ಯಾನ ಆರಂಭಿಸಲು ಕನಿಷ್ಠ 60 ಟನ್ ಸಾಮಾರ್ಥ್ಯ ಇರಬೇಕು. ಇದನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ಮಾರ್ಗವಿದೆ. ಆದರೆ ಮಾನವ ರಹಿತ ಯುದ್ದ ವಿಮಾನ ಪರೀಕ್ಷೆಗೆ ಇಡೀ ದೇಶದಲ್ಲಿ ಮೀಸಲಿರುವ ಏಕೈಕ ವೈಮಾನಿಕ ಪರೀಕ್ಷಣಾ ಕೇಂದ್ರ ಇದಾಗಿದೆ. ಆದ್ದರಿಂದ ಈ ಕುರಿತು ಮತ್ತೊಮ್ಮೆ ಚರ್ಚಿಸುವುದು ಅಗತ್ಯವಿದೆ ಎಂದರು.

Recommended Video

Zameer Ahmed ಅವರಿಗೆ ಸಂಬಂಧಿಸಿದ 5 ಜಾಗಗಳ ಮೇಲೆ ACB ದಾಳಿ | *Politics | OneIndia Kannada

English summary
We are thinking to opening manufacturing plant along with unmanned combat aircraft research in Chitradurga, said central minister A Narayanaswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X