ಚಿತ್ರದುರ್ಗ: ವಿಷ ಆಹಾರ ಸೇವಿಸಿ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿತ್ರದುರ್ಗ, ಜುಲೈ 13: ವಿಷಾಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.

Recommended Video

      ಚಿತ್ರದುರ್ಗ: ವಿಷಯುಕ್ತ ಆಹಾರ ಸೇವನೆ- ಒಂದೇ ಮನೆಯ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ!

      ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಇಸಾಮುದ್ರ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷಾಹಾರ ಸೇವಿಸಿದ್ದಾರೆ. ಈ ವೇಳೆ ವಿಷಾಹಾರ ಸೇವಿಸಿದ ಮೂವರು ಸಾವನ್ನಪ್ಪಿದ್ದು, ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

      Chitradurga: Three Persons Died And Two Are Serious After Consuming Poison Food

      ಸೋಮವಾರ ರಾತ್ರಿ ರಾಗಿಮುದ್ದೆ, ಸಾಂಬಾರು ಸೇವನೆ ಬಳಿಕ ಅಸ್ವಸ್ಥರಾಗಿದ್ದು, ಕೂಡಲೇ ಅಸ್ವಸ್ಥರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ (43) ಹಾಗೂ ವೃದ್ಧೆ ಗುಂಡಿ ಬಾಯಿ (75) ಮೃತಪಟ್ಟಿದ್ದಾರೆ.

      Chitradurga: Three Persons Died And Two Are Serious After Consuming Poison Food

      ವಿಷಾಹಾರ ಸೇವಿಸಿ ರಾಹುಲ್ (18) ಹಾಗೂ ರಮ್ಯಾ (16) ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+