Accident: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ, ಮೂವರು ಸಾವು
ಚಿತ್ರದುರ್ಗ, ಏಪ್ರಿಲ್ 07: ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ನಡೆದಿದೆ. ಅಪಘಾತದಲ್ಲಿ 8 ಜನರ ಪರಿಸ್ಥಿತಿ ಗಂಭೀರವಾಗಿದ್ದು, 33ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡೊದ್ದಾರೆ.
ಇಂದು(ಏಪ್ರಿಲ್ 07) ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಪಲ್ಟಿ ಹೊಡೆದಿದೆ. ಅಪಘಾತದ ಭೀಕರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ ಪಲ್ಟಿ ಹೊಡೆದ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸದ್ಯ ಮೂವರು ಮೃತದೇಹಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಒಟ್ಟು 33 ಜನ ಗಾಯಾಳುಗಳಾಗಿದ್ದು, ಇದರಲ್ಲಿ 18 ಜನರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 6 ಜನರನ್ನು ದಾವಣಗೆರೆ ಮತ್ತು 9 ಜನರನ್ನು ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.
ಅಪಘಾತ ಬಗ್ಗೆ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್‌ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.












Click it and Unblock the Notifications