• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರಿನಲ್ಲಿ ಲಾರಿ, ಕಾರು ಅಪಘಾತ; ಒಂದೇ ಕುಟುಂಬದ ಮೂವರ ಸಾವು

|

ಚಿತ್ರದುರ್ಗ, ಅಕ್ಟೋಬರ್ 10: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಇಂದು ನಡೆದಿದೆ.

ಹಿರಿಯೂರು ತಾಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ನಡುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; 7 ಕಾರ್ಮಿಕರ ಸಾವು

ಮೃತರನ್ನು ಕಾರು ಚಾಲಕ ಪ್ರಭಾಕರ್ (38), ವೇಣು (20), ನಾಗವೇಣಿ (45) ಎಂದು ಗುರುತಿಸಲಾಗಿದೆ. ವಿಶಾಲಮ್ಮ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದವರು ಎಂದು ತಿಳಿದುಬಂದಿದೆ. ಇವರು ಚಳ್ಳಕೆರೆಯಿಂದ ಬೆಂಗಳೂರಿನ ಕಡೆಗೆ ಹೋಗುವಾಗ, ಹಿರಿಯೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ.

   Nithish Rana ರನ್ ಔಟ್ ಅದ ರೀತಿ ನೊಡಿದರೆ ನಗು ಬರುತ್ತೆ | Oneindia Kannada

   ಅಪಘಾತ ಸಂಭವಿಸಿದ ವಿಷಯ ತಿಳಿದು ಸ್ಥಳಕ್ಕೆ ಪಿಎಸ್ಐ ಪರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

   English summary
   Three people of same family dies in an accident between car and lorry near hiriyur of chitradurga district,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X