ಚಿತ್ರದುರ್ಗ: ಓರ್ವ ಯುವತಿ ಸೇರಿದಂತೆ ಮೂವರು ಮಹಿಳೆಯರು ನಾಪತ್ತೆ
ಚಿತ್ರದುರ್ಗ, ಅಕ್ಟೋಬರ್, 18: ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ (21 ವರ್ಷ) ಎಂಬ ಯುವತಿ ಕಾಣೆಯಾದ ಕುರಿತು ಸೆಪ್ಟೆಂಬರ್ 19ರಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ರೇಣುಕಮ್ಮ 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಬಿಳಿ ಮಿಶ್ರಿತ ಬೂದು ಬಣ್ಣದ ನೈಟಿ ಧರಿಸಿರುತ್ತಾರೆ.
* ಹೊಳಲ್ಕೆರೆ ತಾಲ್ಲೂಕಿನ ನಂದನ ಹೊಸೂರು ಗ್ರಾಮದ ನಿವಾಸಿ ವಿಜಯಮ್ಮ (35 ವರ್ಷ) ಎಂಬ ಮಹಿಳೆ ಸೆಪ್ಟೆಂಬರ್ 19ರಂದು ಕಾಣೆಯಾದ ಬಗ್ಗೆ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ವಿಜಯಮ್ಮ 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರಾಗಿದ್ದಾರೆ. ಬಲಗಣ್ಣು ಚಿಕ್ಕದಾಗಿದ್ದು, ಕಣ್ಣಿನಲ್ಲಿ ಬಿಳಿ ಹೂ ಇರುತ್ತದೆ. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ನೈಟಿ ಧರಿಸಿರುತ್ತಾರೆ.
* ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ಪ್ರಕಾಶ್ ಎಂಬುವವರ ಮಗಳು ದೀಪಾ (20) ಎಂಬ ಯುವತಿ ಸೆಪ್ಟೆಂಬರ್ 22ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ದೀಪಾ 5.2 ಅಡಿ ಎತ್ತರ, ಕೋಲು ಮುಖ, ಕಪ್ಪುಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವರಾಗಿದ್ದಾ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರದ ಟಾಪ್, ಅರಿಶಿಣ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಕಾಣೆಯಾದವರ ಕುರಿತು ಮಾಹಿತಿ ಕಂಡುಬಂದಲ್ಲಿ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಹೇಳನಕಾರಿ ಹೇಳಿಕೆ: ಗಿಚ್ಚಿಗಿಲಿಗಿಲಿ ವೇದಿಕೆ ಕಾರ್ಯಕ್ರಮದಲ್ಲಿ ಹಾಸ್ಯ ನಟ ಹುಲಿ ಕಾರ್ತೀಕ್ ಅವರು ಬೋವಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಫ್ಐಆರ್ ದಾಖಲಿಸಲಾಗದೆ. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಚಿತ್ರದುರ್ಗ ನಗರದ ಬೋವಿ ಮಠಕ್ಕೆ ಕಾರ್ತಿಕ್ ಭೇಟಿ ನೀಡಿ ಸಮುದಾಯದ ಶ್ರೀಗಳ ಪಾದಕ್ಕೆ ಬಿದ್ದು ಕ್ಷಮೆ ಕೋರಿದ್ದಾರೆ.
ಜಿ ಕನ್ನಡದಲ್ಲಿ ಪ್ರಸಾರವಾಗುವ ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಸ್ಕಿಟ್ ಮಾಡುವ ವೇಳೆ ಹುಲಿ ಕಾರ್ತಿಕ್ ಭೋವಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಹುಲಿ ಕಾರ್ತಿಕ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ಕಾರ್ತಿಕ್ ಅವರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ಬಳಿ ಬಂದು ಕ್ಷಮೆ ಕೇಳಿದ ಘಟನೆ ನಡೆದಿದೆ.
ಬಡವರ ಮಗ ನಾನು ಈಗ ಬೆಳೆಯುತ್ತಿದ್ದೇನೆ, ಈ ರೀತಿ ಎಫ್‌ಐಆರ್ ಆದ್ರೆ ಜೀವನ ಹಾಳಾಗುತ್ತದೆ ಅಂತಾ ಸ್ವಾಮಿಜಿ ಮುಂದೆ ಅಳಲು ತೋಡಿಕೊಂಡರು. ಆಗ "ಬಡವರ ಮಕ್ಕಳು ಎತ್ತರಕ್ಕೆ ಬೆಳೆಯಬೇಕು, ನಮ್ಮ ಮಠದ ಶಿಷ್ಯರಿಂದ ಯಾವುದೇ ತೊಂದರೆಯಾಗುವುದಿಲ್ಲ, ನಾವೂ ಆ ವೀಡಿಯೋ, ಆಡಿಯೋ ನೋಡೀದೀವಿ. ಅದರಲ್ಲಿ ತಾವು ಆ ರೀತಿ ಮಾತನಾಡಿಲ್ಲ ಎಂದು ನಮ್ಮ ಗಮನಕ್ಕೆ ಬಂದಿದೆ ಎಂದು ಸ್ವಾಮೀಜಿ ಹೇಳಿದರು.
ಈಗಾಗಲೇ ಈ ಕುರಿತು ನಮ್ಮ ಭಕ್ತರಿಗೆ ಹೇಳಿದ್ದೇವೆ. ನಿಮಗೆ ನಮ್ಮಿಂದ, ನಮ್ಮ ಭಕ್ತರಿಂದ ಯಾವುದೇ ತೊಂದರೆಯಾಗುವುದಿಲ್ಲ. ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ಎಂದರು. ಅಲ್ಲದೆ, ಇದೇ ವೇಳೆ ಹುಲಿ ಕಾರ್ತಿಕ್ ಸೇರಿದಂತೆ ಕಲಾವಿದರನ್ನು ಹರಸಿ ಆಶೀರ್ವದಿಸಿ, ಕಲಾವಿದರು ನೀವು ಬೆಳೆಯಬೇಕು ಅಂತಾ ಹಾರೈಸಿದರು.












Click it and Unblock the Notifications