ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮದುವೆ ಮುಗಿಸಿ ವಾಪಸ್ ಆಗುವ ವೇಳೆ ಆಘಾತ
ಚಿತ್ರದುರ್ಗ, ಫೆಬ್ರವರಿ 02: ಕೆಎಸ್ಆರ್‌ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿಯಾದ ಘಟನೆ ಇಂದು (ಫೆಬ್ರವರಿ 02) ಮುಂಜಾನೆ
ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಡೆದಿದೆ. ಚಲಿಸುತ್ತಿದ್ದ ಟ್ರಾಕ್ಟರ್‌ಗೆ ರಾಜಹಂಸ ಬಸ್ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದು, 3 ಮಂದಿ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರುನಿಂದ ಕಲಬುರಗಿಗೆ ಮದುವೆ ಟ್ರಿಪ್ ಹೋಗಿದ್ದಾಗ ಅಪಘಾತವಾಗಿದೆ. ರಾಜಹಂಸ ಬಸ್ನಲ್ಲಿದ್ದವರು ಮದುವೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಗೆ ರಾಜಹಂಸ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು, ಟ್ರಾಕ್ಟರ್ ಪಲ್ಟಿಯಾಗಿದೆ.
ಬಸ್ಸಿನಲ್ಲಿದ್ದ ಎಲ್ಲರೂ ಕೂಡಾ ಒಂದೇ ಕುಟುಂಬದವರಾಗಿದ್ದು, ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಚಳ್ಳಕೆರೆ ಮತ್ತು ಚಿತ್ರದುರ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಗಾದಿಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಅಸುನೀಗಿದ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪದ ಈ ಅವಘಡ ಸಂಭವಿಸಿದೆ. ಮೃತರನ್ನು ಚಳ್ಳಕೆರೆಯ ವೆಂಕಟೇಶ( 57 )ವರ್ಷ, ಚಿತ್ರಯ್ಯನಟ್ಟಿ ವೆಂಕಟೇಶ್ (55 )ವರ್ಷ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿವಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications