ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ವಿಶೇಷ; ಇಬ್ಬರು ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 21; 2023ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಬಿಜೆಪಿ ಪಕ್ಷದ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ಬಿಜೆಪಿ ನಾಯಕರಿಂದಲೇ ಬಹಿರಂಗವಾಗಿದೆ. ಜೆಡಿಎಸ್ ಶಾಸಕರನ್ನು ಸೆಳೆಯಲು ಸಹ ಪ್ರಯತ್ನ ನಡೆದಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ.

ಈಗಾಗಲೇ ಶಿವಮೊಗ್ಗದ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಶಾಸಕ ಜಿ. ಟಿ. ದೇವೆಗೌಡ, ಕೆ. ಶ್ರೀನಿವಾಸ ಗೌಡ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನೂ ಕೆಲವು ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿರಬಹುದು.

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ; ಜೆಡಿಎಸ್ ಶಾಸಕನಿಗೆ ಸವಾಲು! ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ; ಜೆಡಿಎಸ್ ಶಾಸಕನಿಗೆ ಸವಾಲು!

ಚಿತ್ರದುರ್ಗ ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿ ಬರುತ್ತಿವೆ. ಕಳೆದ ವಿಧಾನಸಭಾ ಸಭೆ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಕಾಂಗ್ರೆಸ್ ತಿದ್ದಿಕೊಳ್ಳಲು ಮೆಗಾ ಪ್ಲಾನ್ ಸಿದ್ಧಗೊಳಿಸುತ್ತಿದೆ. ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ. ಶೇಖರ್‌ರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ.

ಒಂದೇ ದಿನ ಕಾಂಗ್ರೆಸ್‌ ನಾಯಕರನ್ನು ಭೇಟಿಯಾದ ಇಬ್ಬರು ಜೆಡಿಎಸ್ ಶಾಸಕರು! ಒಂದೇ ದಿನ ಕಾಂಗ್ರೆಸ್‌ ನಾಯಕರನ್ನು ಭೇಟಿಯಾದ ಇಬ್ಬರು ಜೆಡಿಎಸ್ ಶಾಸಕರು!

 Two Chitradurga BJP MLAs May Join Congress

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಗೊಲ್ಲ ಸಮಾಜದ ಡಾ. ಸಾಸಲು ಸತೀಶ್‌ಗೆ ಟಿಕೆಟ್ ನೀಡುತ್ತೇವೆ ಎಂದು ಹೇಳಿ ಕೊನೆ ಗಳಿಗೆಯಲ್ಲಿ ಮಾಜಿ ಸಚಿವ ಜಯಚಂದ್ರ ಪುತ್ರ ಸಂತೋಷ್‌ಗೆ ಟಿಕೆಟ್ ನೀಡಿಲಾಗಿತ್ತು.

ಕಾಂಗ್ರೆಸ್ ಸೇರುವುದಾಗಿ ಮತ್ತೊಬ್ಬ ಜೆಡಿಎಸ್ ಶಾಸಕನ ಘೋಷಣೆ! ಕಾಂಗ್ರೆಸ್ ಸೇರುವುದಾಗಿ ಮತ್ತೊಬ್ಬ ಜೆಡಿಎಸ್ ಶಾಸಕನ ಘೋಷಣೆ!

ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ತುಮಕೂರು ಭಾಗದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೀನಾಯವಾಗಿ ಸೋಲು ಕಂಡಿದ್ದರು. ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಸೋಲು ಕಂಡಿತ್ತು. ಅದರಲ್ಲೂ ತುಮಕೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಚ್. ಡಿ. ದೇವೇಗೌಡರು ಸೋತಿದ್ದರು.

ಕಾಂಗ್ರೆಸ್ ಪಕ್ಷ ಈ ಬಾರಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲ ಗೊಲ್ಲ ಸಮುದಾಯದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗಿದೆ. ಈ ಮೇಲಿನ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ದೃಷ್ಟಿಯಿಂದ ಹಿರಿಯೂರು ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ ಎನ್ನುವ ಮಾತು ಕೇಳಿ ಬರುತ್ತಿದೆ.

ಕಾಂಗ್ರೆಸ್‌ಗೆ ಸೆಳೆಯಲು ಕಸರತ್ತು; ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರಾಗಿ, ಹಿಂದುಳಿದ ವರ್ಗದ ನಾಯಕನಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ದಿ. ಎ. ಕೃಷ್ಣಪ್ಪ ಪುತ್ರಿ ಹಿರಿಯೂರು ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್‌ರನ್ನು ಪಕ್ಷಕ್ಕೆ ಕರೆತರಲು ಕೈ ನಾಯಕರು ಮೆಗಾ ಪ್ಲಾನ್ ಮಾಡಿದ್ದಾರೆ.

ಎರಡು ಬಾರಿ ಕೊನೆ ಸಮಯದಲ್ಲಿ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪೂರ್ಣಿಮಾ ಶ್ರೀನಿವಾಸ್ ಕೂಡ ಅಸಮಾಧಾನಗೊಂಡಿದ್ದಾರೆ. ಇದರ ಜೊತೆಗೆ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ. ಟಿ. ಶ್ರೀನಿವಾಸ್ ಕೂಡ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ನಿರಾಸೆಯಾಗಿತ್ತು.

ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋಲುಂಡಿದ್ದರು. ಬಿಜೆಪಿ ಪಕ್ಷದಿಂದಲೂ ಉಚ್ಚಾಟನೆಗೊಂಡಿದ್ದರು. ಇದನ್ನೇ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್‌ಗೆ ಸೆಳೆಯುವ ತಂತ್ರ ನಡೆದಿದ್ದು, ಈಗಾಗಲೇ ಪೂರ್ಣಿಮಾ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎಂಬುದು ಉನ್ನತ ಮೂಲಗಳ ಮಾಹಿತಿ.

ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್‌ಗೆ ಬಂದರೆ ಹಿರಿಯೂರು ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಹೊಸದುರ್ಗ, ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ‌ಮತ್ತು ತುಮಕೂರು ಭಾಗದ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಲಾಭವಾಗುತ್ತದೆ ಎನ್ನುವುದು ಲೆಕ್ಕಾಚಾರ. ಪೂರ್ಣಿಮಾ ಕಾಂಗ್ರೆಸ್‌ ಪಕ್ಷಕ್ಕೆ ಬಂದರೆ ನಾವು ಕೂಡ ಮತ್ತೆ ರಾಜಕೀಯದಲ್ಲಿ ಭವಿಷ್ಯ ಕಾಣಬಹುದು ಎನ್ನುತ್ತಾರೆ ಹಿಂದೆ ಸೋಲು ಕಂಡಿದ್ದ ಎಚ್. ಆಂಜನೇಯ, ಮಾಜಿ ಶಾಸಕ ಬಿ. ಜಿ. ಗೋವಿಂದಪ್ಪ, ಮಾಜಿ ಸಂಸದ ಬಿ. ಎನ್. ಚಂದ್ರಪ್ಪ.

2008ರಲ್ಲಿ ಹಿರಿಯೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡು ನಂತರ ಕಾಂಗ್ರೆಸ್ ಸೇರ್ಪಡೆಗೊಂಡು 2014 ರಲ್ಲಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದ ಡಿ. ಸುಧಾಕರ್‌ರನ್ನು ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕಿಳಿಸಲಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸುತ್ತಿದ್ದಾರೆ. ಒಂದು ವೇಳೆ ಹಿರಿಯೂರಿನಲ್ಲಿ ಗೊಲ್ಲರಿಗೆ ಟಿಕೆಟ್ ತಪ್ಪಿಸಿದರೆ ಏಳೆಂಟು ಸ್ಥಾನಗಳನ್ನು ಕಳೆದುಕೊಳ್ಳುವುದುಕ್ಕಿಂತ ಒಂದು ಕ್ಷೇತ್ರ ಕಳೆದುಕೊಳ್ಳುವುದೇ ವಾಸಿ ಎನ್ನುತ್ತಾರೆ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು.

ಗೂಳಿಹಟ್ಟಿ ಶೇಖರ್; ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ರನ್ನು ಕಾಂಗ್ರೆಸ್‌ಗೆ ಕರೆತರಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಂತ್ರ ರೂಪಿಸಿದ್ದಾರೆ. ಪಕ್ಷದ ನಡೆಗೆ ಅಸಮಾಧಾನಗೊಂಡಿರುವ ಗೂಳಿಹಟ್ಟಿ ಶೇಖರ್, ಬಹಿರಂಗವಾಗಿಯೇ ಬಿಎಸ್‌ವೈ ಪುತ್ರನ ಹಸ್ತಕ್ಷೇಪದ ಬಗ್ಗೆ ಹೇಳಿಕೆ ನೀಡಿದ್ದರು.

Recommended Video

ಕಾಂಗ್ರೆಸ್ಸ್ ಗೆ ಮುಖ ಭಂಗ | Oneindia Kannada

ಇನ್ನು ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಬಿಜೆಪಿ ವಿರುದ್ಧ ಸಿಡಿದೆದ್ದಿದ್ದರು. ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ನಾನು ಪ್ರಮುಖ ಕಾರಣ ಎಂದು ಅಸಮಾಧಾನ ಹೊರಹಾಕಿದ್ದರು.

English summary
Congress trying to attack Two BJP MLA's of Chitradurga district. Ahead of the 2023 assembly elections. It is the part of Congress strategy and tactics for win more seats in assembly polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X