ಕೇರಳದಲ್ಲಿ ಅಪಘಾತ: ಹಿರಿಯೂರು ನಗರಸಭೆ ಸದಸ್ಯ ಸಾವು
ಚಿತ್ರದುರ್ಗ, ಜನವರಿ 15: ಕೇರಳಕ್ಕೆ ಪ್ರವಾಸ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗದ ಇಬ್ಬರು ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳಲ್ಲಿ ಒಬ್ಬರು ಹಿರಿಯೂರು ನಗರಸಭೆಯ ಜೆಡಿಎಸ್ ಸದಸ್ಯರಾಗಿದ್ದಾರೆ.
ಕೇರಳದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗದ ಪಾಂಡುರಂಗ (35) ಮತ್ತು ಐಮಂಗಲ ಹೋಬಳಿಯ ಪ್ರಭಾಕರ್ ಎಂಬುವವರು ಮೃತಪಟ್ಟಿದ್ದಾರೆ. ಕೇರಳಕ್ಕೆ ಪ್ರವಾಸ ತೆರಳುತ್ತಿದ್ದ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಪ್ರವಾಸಿಗರು ಇದ್ದ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಒಬ್ಬರಾದ ಪಾಂಡುರಂಗ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆಯ ಏಳನೇ ವಾರ್ಡ್‌ನ ಜೆಡಿಎಸ್ ಸದಸ್ಯರಾಗಿದ್ದಾರೆ.

ಹಿರಿಯೂರು ನಗರಸಭೆ ಚುನಾವಣೆಗೆ ಮುನ್ನವೇ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಕಳೆದ ವರ್ಷದ ಮೇ 29ರಂದು ಇಲ್ಲಿ ಚುನಾವಣೆ ನಡೆದಿತ್ತು. ಆದರೆ ಜೆಡಿಎಸ್‌ನ ಪಾಂಡುರಂಗ ಅವರ ಎದುರು ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣೆಗೂ ಮುನ್ನವೇ ಪಕ್ಷೇತರ ಅಭ್ಯರ್ಥಿ ನಾಮಪತ್ರ ಹಿಂದಕ್ಕೆಪಡೆದುಕೊಂಡಿದ್ದರಿಂದ ಪಾಂಡುರಂಗ ಅವಿರೋಧವಾಗಿ ಆಯ್ಕೆಯಾಗಿದ್ದರು.












Click it and Unblock the Notifications