ಚಿತ್ರದುರ್ಗದಲ್ಲಿ KSRTC ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು
ಚಿತ್ರದುರ್ಗ, ಡಿಸೆಂಬರ್ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.
ಹಿರಿಯೂರಿನ ಚಳ್ಳಕೆರೆ ರಸ್ತೆಯ ಶಿವಮೂರ್ತಿ ನಗರ ಬಳಿ ಭಾನುವಾರ ಮುಂಜಾನೆ 4.30ರ ಸಮಯಕ್ಕೆ ಘಟನೆ ನಡೆದಿದೆ. ಶಹಾಪುರದಿಂದ ಬೆಂಗಳೂರು ಕಡೆಗೆ ಹೋಗುವಾಗ ಕೆಎಎಸ್ ಆರ್ ಟಿಸಿ ಬಸ್ ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸಿದ್ದು, ಬಸ್ ರಸ್ತೆಯ ಎಡಭಾಗಕ್ಕೆ ಪಲ್ಟಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಸುಮಾರು 50 ಜನರಿದ್ದರು ಎಂದು ತಿಳಿದುಬಂದಿದೆ. ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಬಸ್ ಚಾಲಕ ಮತ್ತು ನಿರ್ವಾಹಕ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ; ಗಾಯಾಳುಗಳ ಸ್ಥಿತಿ ಚಿಂತಾಜನಕ
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಓರ್ವ ಯುವಕನ ಕಾಲು ಕತ್ತರಿಸಿ, ಮತ್ತಿತರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡ್ - ಗೊರವಿಗೊಂಡನಹಳ್ಳಿ ಬಳಿ ನಡೆದಿದೆ. ಶನಿವಾರ ರಾತ್ರಿ 8.30 ಸುಮಾರಿಗೆ ಅಪಘಾತ ಸಂಭವಿಸಿದೆ. ಪಲ್ಸರ್ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿದೆ.
ಶ್ರೀನಿವಾಸ್ (21), ರಾಘು (21), ಪ್ರಜ್ವಲ್ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಒಂದೇ ಬೈಕಿನಲ್ಲಿ ಮೂವರು ಹೊಸದುರ್ಗದಿಂದ ಕೆಲ್ಲೋಡಿಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications