ಬಟ್ಟೆ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿದ ಅಂಗವಿಕಲರು
ಚಿತ್ರದುರ್ಗ, ಸೆಪ್ಟೆಂಬರ್ 28: ಬಟ್ಟೆ ತೊಳೆಯಲು ಹೋಗಿದ್ದ ಅಂಗವಿಕಲರಿಬ್ಬರು ಕಾಲು ಜಾರಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಸಂತ್ (35), ಆಂಜಿನಪ್ಪ (25) ಎಂದು ಗುರುತಿಸಲಾಗಿದೆ. ಇವರಿಬ್ಬರು ಜಾಲಿಕಟ್ಟೆ ಗ್ರಾಮದ ನಿವಾಸಿಗಳಾಗಿದ್ದು, ಗ್ರಾಮದ ಹೊರವಲಯದ ನೀರಿನ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದಾಗ ಮುಳುಗಿ ದುರ್ಮರಣ ಹೊಂದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications