ತಿರುಪತಿಯಿಂದ ವಾಪಸ್ಸಾಗುತ್ತಿದ್ದಾಗ ಚಿತ್ರದುರ್ಗದಲ್ಲಿ ಅಪಘಾತ; ಇಬ್ಬರ ಸಾವು
ಚಿತ್ರದುರ್ಗ, ಜುಲೈ 24: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ಇಂದು ನಡೆದಿದೆ.
Recommended Video
The Indian Premier League (IPL) 2020 is all set to kick-off | Oneindia Kannada
ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಸಮೀಪ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಅಪಘಾತ ಸಂಭವಿಸಿದೆ. ಪುಣೆ ಮೂಲದ ಸಾಯಿ (18) ಸಂತೋಷ್ ನಾಯಕವಾಡಿ (51) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ರೇಣುಶ್ರೀ, ದಾಕ್ಷಾಯಿಣಿ, ಚಾಲಕ ಕೈಲಾಸ್ ಮಗರ್ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿರುಪತಿಯಿಂದ ಪುಣೆಗೆ ವಾಪಸ್ ತೆರಳುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications