ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ; ಬಿಜೆಪಿಯಲ್ಲಿ ಈಗ ಅಸಮಾಧಾನ ಸ್ಪೋಟ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 27: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಇಂದು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

Recommended Video

EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಚಿತ್ರದುರ್ಗ ಶಾಸಕ ಜಿ.ಎಚ್ ತಿಪ್ಪಾರೆಡ್ಡಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಹಿರಿಯ ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ, ನನ್ನ ನಿರೀಕ್ಷೆಯೇ ಬೇರೆ ಇತ್ತು. ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗದ ರೈತ ಮಹಿಳೆಗೆ ಸಿಎಂಯಿಂದ ನೀರಾವರಿ ಸೌಲಭ್ಯದ ಆಶ್ವಾಸನೆಚಿತ್ರದುರ್ಗದ ರೈತ ಮಹಿಳೆಗೆ ಸಿಎಂಯಿಂದ ನೀರಾವರಿ ಸೌಲಭ್ಯದ ಆಶ್ವಾಸನೆ

ಅವಮಾನ ಮಾಡಲೆಂದೇ ಈ ಸ್ಥಾನ ನೀಡಲಾಗಿದೆ. ಇದು ನನಗೆ ನೋವಿನ ಸಂಗತಿ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾತನಾಡಲು ಸಾಧ್ಯವಾಗಿಲ್ಲ, ಅವರಿಗೆ ನೂರಾರು ಸಮಸ್ಯೆಗಳಿವೆ ಎಂದರು.

 Two MLAs In The Chitradurga District Appointed As Chiefs Of Corporations

ನಾನು 1994 ರಲ್ಲೇ ನಾನು ಗೃಹ ಮಂಡಳಿ ಅಧ್ಯಕ್ಷನಾಗಿದ್ದವನು. ಆಗ ನಾನು ಕೇಳದಿದ್ದರೂ ಜೆ.ಎಚ್ ಪಟೇಲರು ನನಗೆ ಗೃಹ ಮಂಡಳಿ ಸ್ಥಾನ ನೀಡಿದ್ದರು. ಈಗ ನನಗೆ ಬಹಳ ಅವಮಾನವಾಗಿದೆ, ರಾಜಕೀಯಕ್ಕೆ ಬಂದಿದ್ದೇ ತಪ್ಪು ಎಂಬ ಭಾವನೆ ಬಂದಿದೆ ಎಂದು ಸರ್ಕಾರದ ಒಂದು ವರ್ಷದ ಸಂಭ್ರಮದ ದಿನವೇ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

English summary
Holalkere MLA M Chandrapappa of Chitradurga district and GH Thippareddy of Chitradurga MLA have been given the chairmanship of the corporation board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X