• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಮುರುಘಾ ಮಠದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 15 : ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಶರಣರು ಜೈಲು ಪಾಲಾಗಿ ಕಾನೂರು ಹೋರಾಟ ನಡೆಸುತ್ತಿದ್ದರೆ. ಇತ್ತ ಈಗಾಗಲೇ ಈ ಕಹಿ ಘಟನೆಯ ಮಧ್ಯೆ ಮುರುಘಾ ಮಠದ ಜಯದೇವ ವಿದ್ಯಾರ್ಥಿನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ಕಾಣೆಯಾಗಿದ್ದು, ಮಠಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಅಭಯ್ (13) ಮತ್ತು ಮಲ್ಲಯ್ಯ (11) ಎಂಬ ಮಕ್ಕಳು ಕಾಣೆಯಾಗಿರುವ ಪ್ರಕರಣ ಸೆಪ್ಟಂಬರ್ 12ರಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಾಲೆಗೆ ತೆರಳಿದ ಇವರಿಬ್ಬರು ಹಾಸ್ಟೆಲ್‌ಗೆ ಮರಳಿಲ್ಲ ಎಂದು ತಿಳಿದುಬಂದಿದೆ.

Breaking: ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಸೆ.27ರ ತನಕ ವಿಸ್ತರಣೆBreaking: ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಸೆ.27ರ ತನಕ ವಿಸ್ತರಣೆ

ಕಾಣೆಯಾಗಿರುವ ಅಭಯ್‍ನ ಚಹರೆ ಇಂತಿದೆ. 13 ವರ್ಷದ ಅಭಯ್‌ ದುಂಡುಮುಖ, ಗೋಧಿ ಮೈ ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದಾಗ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮಲ್ಲಯ್ಯನ ಚಹರೆ ಇಂತಿದೆ. ಮಲ್ಲಯ್ಯ ದುಂಡುಮುಖ, ಗೋಧಿ ಮೈ ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು ಕಪ್ಪು ಹಳದಿ ಬಣ್ಣದ ಚೆಕ್ಸ್ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದ, ಇವರಿಬ್ಬರು ಕನ್ನಡ ಭಾಷೆ ಮಾತನಾಡುತ್ತಾರೆ.

ಈ ಮೇಲ್ಕಂಡ ಬಾಲಕರ ಬಗ್ಗೆ ಮಾಹಿತಿ ದೊರೆತ ಕೂಡಲೇ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು 9480803131, 9480803148, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ : 08194-230156 ಸಂಪರ್ಕಿಸಬೇಕೆಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರನ್ನು ಸೆಪ್ಟೆಂಬರ್ 27ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬುಧವಾರ ನ್ಯಾಯಾಂಗ ಬಂಧನ ಮುಕ್ತಾಯವಾದ ನಂತರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತಿರಸಿ ಆದೇಶ ಹೊರಡಿಸಿದೆ.

English summary
Two students are missing from the Jayadeva hostel of Murugha Math, complaint register in Chitradurga police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X