ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನ್ ಲಾಕ್ 4.0: ಚಿತ್ರದುರ್ಗದಲ್ಲಿ ಖಾಸಗಿ ಬಸ್ ಸಂಚಾರ ಆರಂಭ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 1: ಕೊರೊನಾ ವೈರಸ್ ನಿಯಂತ್ರಿಸುವ ದೃಷ್ಟಿಯಿಂದ ಕಳೆದ ಐದು ತಿಂಗಳಿನಿಂದ ನಿಲ್ಲಿಸಲಾಗಿದ್ದ ಖಾಸಗಿ ಬಸ್ ಸಂಚಾರವನ್ನು ಇಂದಿನಿಂದ ಮತ್ತೆ ಪ್ರಾರಂಭಿಸಲಾಗಿದೆ.

Recommended Video

Covid 19 ಲಸಿಕೆಗಾಗಿ ಭಾರತದಲ್ಲಿ Bangladesh ಹೂಡಿಕೆ | Oneindia Kannada

ಕೇಂದ್ರ ಸರ್ಕಾರದಿಂದ ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟಗೊಂಡ ಹಿನ್ನೆಲೆ ಸೆಪ್ಟೆಂಬರ್ 1 ರಿಂದ ಖಾಸಗಿ ಬಸ್ ಸಂಚಾರವನ್ನು ಪ್ರಾರಂಭಿಸಲಾಯಿತು. ಬರೋಬ್ಬರಿ ಐದು ತಿಂಗಳ ಬಳಿಕ ಖಾಸಗಿ ಬಸ್ ಗಳು ರಸ್ತೆಗೆ ಇಳಿದಿವೆ.

ಕರ್ನಾಟಕ ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಇರುವುದೇನು? ಕರ್ನಾಟಕ ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಇರುವುದೇನು?

ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸಲಾಗಿದ್ದು, ಇಲ್ಲಿಂದ ಶಿವಮೊಗ್ಗ, ಬಳ್ಳಾರಿ, ಬೆಂಗಳೂರು, ದಾವಣಗೆರೆ, ಅನಂತಪುರ ಮಾರ್ಗಗಳಲ್ಲಿ ಖಾಸಗಿ ಬಸ್ ಸಂಚಾರ ಮಾಡಲಿವೆ.

Unlock 4.0: Private Bus Traffic Started In Chitradurga From September 1

ರಾಜ್ಯದಲ್ಲಿನ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿದಂತೆ ಉಳಿದ ಪ್ರದೇಶಗಳಲ್ಲಿ ಕೆಲವು ಚಟುವಟಿಕೆಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.

ರಾಜ್ಯದೊಳಗೆ ಮತ್ತು ರಾಜ್ಯದ ಹೊರಗೆ ಸಂಚರಿಸಲು ಮುಕ್ತ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಸರ್ಕಾರದಿಂದ ಯಾವುದೇ ಅನುಮತಿ ಪಡೆಯುವ ಅಗತ್ಯವಿರುವುದಿಲ್ಲ. ಆದರೆ ಶಾಲಾ-ಕಾಲೇಜು, ಸಿನಿಮಾ ಮಂದಿರ, ಈಜುಕೊಳ, ರಂಗಮಂದಿರ ಮತ್ತು ಪಾರ್ಕ್ ಗಳು ಎಂದಿನಂತೆ ಬಂದ್ ಆಗಿರಲಿವೆ. ಕಂಟೈನ್ಮೆಂಟ್ ವಲಯಗಳಲ್ಲಿ ಮೊದಲಿನಂತೆ ನಿರ್ಬಂಧಗಳು ಮುಂದುವರಿಯಲಿದೆ.

ರಾಜ್ಯದೊಳಗೆ ಹಾಗೂ ರಾಜ್ಯದ ಹೊರಗೆ ವ್ಯಕ್ತಿಗಳ ಓಡಾಟಕ್ಕೆ ಹಾಗೂ ಸರಕುಗಳ ಸಾಗಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಇಂತಹ ಓಡಾಟಕ್ಕೆ ಯಾವುದೇ ಪ್ರತ್ಯೇಕ ಅನುಮತಿ, ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿರುವುದಿಲ್ಲ. ಆದರೆ ಕರ್ನಾಟಕಕ್ಕೆ ಅನ್ಯ ರಾಜ್ಯಗಳಿಂದ ಆಗಮಿಸುವವರು ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.

English summary
Private bus traffic was Start from September 1 In Chitradurga District, following the publication of Unlock 4.0 Guidelines by the Central Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X