ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ಜಿಲ್ಲೆಯಲ್ಲಿ ಅಕಾಲಿಕ ಮಳೆ: ತುಂಬಿ ಹರಿದ ಮಲ್ಲಾಪುರ ಕೆರೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 7: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ 8 ಗಂಟೆಯಿಂದ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಹ ವರುಣ ಅಬ್ಬರಿಸಿದ್ದಾನೆ.

ಮೇಲ್ಮೈ ಸುಳಿಗಾಳಿ: ಜನವರಿ 8ರವರೆಗೂ ರಾಜ್ಯದಲ್ಲಿ ಭಾರಿ ಮಳೆಮೇಲ್ಮೈ ಸುಳಿಗಾಳಿ: ಜನವರಿ 8ರವರೆಗೂ ರಾಜ್ಯದಲ್ಲಿ ಭಾರಿ ಮಳೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ರಾತ್ರಿ 8 ಗಂಟೆಯಿಂದ ಮಳೆ ಪ್ರಾರಂಭವಾಗಿದ್ದು, ಸುಮಾರು 12 ಗಂಟೆಯವರೆಗೆ ಉತ್ತಮ ಮಳೆ ಸುರಿದಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಕೆರೆ ತುಂಬಿ ರಸ್ತೆಯಲ್ಲಿ ನೀರು ಹರಿದು ಹೋಗುತ್ತಿದೆ.

ಇನ್ನು ಚಳ್ಳಕೆರೆ, ಹೊಸದುರ್ಗ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಮಳೆಯಾಗಿರುವುದು ತಿಳಿದುಬಂದಿದೆ. ರಾತ್ರಿ ಸುರಿದ ಮಳೆಗೆ ಸಣ್ಣದಾಗಿ ರಸ್ತೆಯಲ್ಲಿ ನೀರು ಹರಿದಿದ್ದು, ಅಲ್ಲಲ್ಲಿ ಸಣ್ಣ ಪುಟ್ಟ ಗುಂಡಿಗಳು ತುಂಬಿವೆ ಎನ್ನಲಾಗಿದೆ. ಇದಲ್ಲದೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 Chitradurga: Untimely Rains In Chitradurga District: Overflowing Mallapur Lake

ಜ.8 ಮತ್ತು 9 ರಂದು ಕೂಡ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಸಾಧಾರಣೆ ಮಳೆಯಾಗುವ ನಿರೀಕ್ಷೆಯಿದೆ.

 Chitradurga: Untimely Rains In Chitradurga District: Overflowing Mallapur Lake

Recommended Video

ಕರ್ನಾಟಕದಲ್ಲಿ ಮುಂದಿನ ಎರೆಡು ದಿನ ಮಳೆ | Karnataka Rain | Oneindia Kannada

ಗುರುವಾರ ಸಹ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಪೂರ್ವದಿಂದ ಬೀಸುವ ಗಾಳಿಯೇ ಈ ದಿಢೀರ್ ಮಳೆಗೆ ಕಾರಣವಾಗಿದೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ಜನವರಿ ಹಾಗೂ ಫೆಬ್ರವರಿಯಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸುವುದರಿಂದ ಆಗಾಗ ಮಳೆ ಸುರಿಯುತ್ತದೆ ಎನ್ನಲಾಗಿದೆ.

English summary
Untimely rains in many districts of the state, Rainfalling also in the Chitradurga district from 8pm on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X