ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೀಸಲಾತಿ ಹೋರಾಟ; ಚಿತ್ರದುರ್ಗದಲ್ಲಿ ಕಾಡುಗೊಲ್ಲರ ಉರುಳು ಸೇವೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 15; ರಾಜ್ಯದಲ್ಲಿ ಮೀಸಲಾತಿ ವಿಷಯ ಬಾರಿ ಸದ್ದು ಮಾಡುತ್ತಿದೆ. ಕೋಟೆ ನಾಡು ಚಿತ್ರದುರ್ಗದಲ್ಲಿ ಬುಡಕಟ್ಟು ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಉರುಳುಸೇವೆ ಮೂಲಕ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಸಮಾಜದ ಮುಖಂಡರು ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಉರುಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಒತ್ತಾಯಿಸಿದರು.

ಮೀಸಲಾತಿ ಹೋರಾಟ; ಸಿದ್ದರಾಮಯ್ಯ ಸರಣಿ ಟ್ವೀಟ್, ಬಿಜೆಪಿಗೆ ಪ್ರಶ್ನೆಗಳು!ಮೀಸಲಾತಿ ಹೋರಾಟ; ಸಿದ್ದರಾಮಯ್ಯ ಸರಣಿ ಟ್ವೀಟ್, ಬಿಜೆಪಿಗೆ ಪ್ರಶ್ನೆಗಳು!

ಕಾಡುಗೊಲ್ಲ ಜನಾಂಗ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದಾರೆ. ನಮ್ಮ ಸಮಾಜವನ್ನು ಎಲ್ಲ ರಾಜಕೀಯ ಪಕ್ಷಗಳು ಕೇವಲ ಚುನಾವಣೆ ಮಾತ್ರ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರವೇ ಅಧ್ಯಕ್ಷರ ನೇಮಕ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರವೇ ಅಧ್ಯಕ್ಷರ ನೇಮಕ

Chitradurga Urulu Seve To Demand Add Kadugolla To Scheduled Caste

ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಿ. ಶಿವು ಯಾದವ್, "ನಾವು ಸರ್ಕಾರಕ್ಕೆ ಭಿಕ್ಷೆ ಕೇಳುತ್ತಿಲ್ಲ, ಸಂವಿಧಾನ ಬದ್ದ ಹಕ್ಕನ್ನು ಕೇಳುತ್ತಿದ್ದೇವೆ. ಸಂವಿಧಾನ ಬದ್ದ ಹಕ್ಕನ್ನು ಕರ್ನಾಟಕ ಕಾಡುಗೊಲ್ಲ ಕೇಳುತ್ತಿದ್ದೇವೆ" ಎಂದರು.

 ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮೇಲೆ ಶಿರಾ ಉಪಚುನಾವಣೆ ಗೆಲುವು? ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮೇಲೆ ಶಿರಾ ಉಪಚುನಾವಣೆ ಗೆಲುವು?

"ಇದು ಯಾರ ಪರವೂ ಅಲ್ಲ, ಯಾರ ವಿರುದ್ಧದ ಹೋರಾಟವೂ ಅಲ್ಲ. ಬುಡಕಟ್ಟು ಕಾಡುಗೊಲ್ಲ ಸಮುದಾಯದ ಉಳಿವಿಗಾಗಿ, ಮುಂದಿನ ಮಕ್ಕಳ ಭವಿಷ್ಯಕ್ಕಾಗಿ, ಜನಾಂಗದ ಅಭಿವೃದ್ಧಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ" ಎಂದು ಹೇಳಿದರು.

"ಈಗಾಗಲೇ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕಡತವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಆರು ವರ್ಷ ಕಳೆದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ" ಎಂದು ಕೇಂದ್ರ ಸರ್ಕಾರ ವಿರುದ್ಧ ಆರೋಪಿಸಿದರು.

"ದುಡ್ಡು ಇರುವವರು, ಸರ್ಕಾರ ಇರುವವರು, ಮಠ ಮಂದಿರಗಳು ಇರುವವರು ನಡೆದುಕೊಂಡು ಹೋಗುತ್ತಾರೆ. ನಾವು ಹಿಂದುಳಿದ ಬುಡಕಟ್ಟು ಕಾಡುಗೊಲ್ಲ ಜನಾಂಗ ಕಾಡಿನಿಂದ ನಾಡಿಗೆ ಇವಾಗ ಬರುತ್ತಿದ್ದೇವೆ. ನಮ್ಮಲ್ಲಿ ಹಣಕಾಸಿನ ತೊಂದರೆ ಇದೆ. ಅದಕ್ಕೆ ನಾವು ಉರುಳುಸೇವೆ ಮಾಡುತ್ತಿದ್ದೇವೆ. ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲು ಸಾಧ್ಯವಿಲ್ಲ" ಎಂದು ತಿಳಿಸಿದರು.

Recommended Video

ಎಲ್‌ಪಿಜಿ ಸಿಲಿಂಡರ್‌ ಬೆಲೆ 50ರೂ ಹೆಚ್ಚಳ..!ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ | Oneindia Kannada

"ಸಮಾಜಮುಖಿಯಿಂದ ಕಾಡುಗೊಲ್ಲರು ದೂರ ಉಳಿದಿದ್ದು, ನಮ್ಮಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ. ಆಚಾರ, ವಿಚಾರ, ಉಟ್ಟು, ಮುಟ್ಟು ತುಂಬಿರುವ ಜನಾಂಗ ಎಂದು ಕುಲ ಶಾಸ್ತ್ರೀಯ ಅಧ್ಯಯನ ಹೇಳುತ್ತಿದೆ. ಸರ್ಕಾರ ಕೂಡಲೇ ನಮ್ಮ ಕಡೆ ಗಮನ ಹರಿಸಬೇಕು ಹಾಗೂ ಕೇಂದ್ರ ಸರ್ಕಾರ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು" ಎಂದರು.

English summary
Kadugolla community members urulu seve in Chitradurga and demand to add them for Scheduled Caste.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X