Vani Vilasa Sagar : 89 ವರ್ಷಗಳ ಬಳಿಕ ಕೋಡಿ ಬಿದ್ದ ವಿವಿ ಸಾಗರ ಜಲಾಶಯ ..!
ಚಿತ್ರದುರ್ಗ, ಸೆಪ್ಟೆಂಬರ್ 1: ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಬರೋಬ್ಬರಿ 89 ವರ್ಷಗಳ ಬಳಿಕ ಕೋಡಿ ಬಿದ್ದು ಹರಿದು ಇತಿಹಾಸ ನಿರ್ಮಿಸಿದೆ. ಇತ್ತ ಕೋಡಿ ಬಿದ್ದ ಡ್ಯಾಂ ನೋಡಲು ಜನಸಾಗರವೇ ಹರಿದು ಬರುತ್ತಿದೆ.
ಪ್ರಸ್ತುತ ಜಲಾಶಯದ ನೀರಿನ ಗರಿಷ್ಠ 130 ಅಡಿ ಸಂಗ್ರಹವಾಗಿದ್ದು, 1933 ರಲ್ಲಿ 130.25 ಅಡಿ ನೀರು ಸಂಗ್ರಹವಾಗಿ ಕೋಡಿ ಬಿದ್ದಿತ್ತು. ಇದೀಗ 2022 ರಲ್ಲಿ ಭರ್ತಿಯಾಗಿ ಎರಡನೇ ಬಾರಿಗೆ ಕೋಡಿ ಬಿದ್ದು ದಾಖಲೆ ನಿರ್ಮಿಸಿದೆ.
ಕಳೆದ ಎರಡು ತಿಂಗಳಿಂದ ಸುರಿದ ಮಳೆಯಿಂದಾಗಿ ಈ ವರ್ಷ ಜಲಾಶಯಕ್ಕೆ ಸುಮಾರು 10 ಅಡಿಗಳಷ್ಟು ಮಳೆ ನೀರು ಸಂಗ್ರಹವಾಗಿದೆ. 1932 ರಲ್ಲಿ 125.50 ಅಡಿ, 1933 ರಲ್ಲಿ 135.25 ಅಡಿ, 1934 ರಲ್ಲಿ 130.24 ಅಡಿ ನೀರು ಸಂಗ್ರಹವಾಗಿ ಇತಿಹಾಸ ನಿರ್ಮಿಸಿತ್ತು. ತದನಂತರ 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958 ರಲ್ಲಿ 124.25 ಅಡಿ ನೀರು ಸಂಗ್ರಹವಾಗಿತ್ತು. ಇದಾದ ಬಳಿಕ 2000ನೇ ಇಸವಿಯಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿ ದಾಖಲೆ ಬರೆದಿತ್ತು. ಇದೀಗ 1958ರ ದಾಖಲೆಯನ್ನು ಹಿಂದಿಕ್ಕಿ ಡ್ಯಾಂ ನೀರಿನ ಮಟ್ಟ 125.50 ಅಡಿ ದಾಟಿ ಹೊಸ ದಾಖಲೆಯನ್ನು ನಿರ್ಮಿಸಿದೆ.

ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್
ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ ವೇದಾ ಎಂಬ ನದಿ ಕಡೂರಿನ ಬಳಿ ಅವತಿ ಎಂಬ ನದಿಯನ್ನು ಸೇರಿ ಅವು ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನೂ ವಾಣಿವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ.

1907 ರಲ್ಲಿ ಕಾಮಗಾರಿ ಪೂರ್ಣ
ಈ ಅಣೆಕಟ್ಟನ್ನು 1897ರಲ್ಲಿ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ 'ತಾರಾ ಚಾಂದ್ ದಲಾಲ್' ಎಂಬ ಇಂಜಿನಿಯರ್ ನೇತೃತ್ವದ ತಂಡವು ಆಗಿನ ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಮುಂದಾಳತ್ವದಲ್ಲಿ ನಿರ್ಮಿಸಿ, 1907 ರಲ್ಲಿ ಕಾಮಗಾರಿ ಪೂರ್ಣಗೊಳಿಸಿದರು. ಅಲ್ಲದೇ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಿವಿ ಸಾಗರದ ನೀಲಿನಕ್ಷೆಯೇ ಮೂಲ ಎಂದು ಹೇಳಲಾಗುತ್ತದೆ.
ಹೊಸದುರ್ಗ, ಹಿರಿಯೂರು ಚಿತ್ರದುರ್ಗ ಭಾಗದಲ್ಲಿ 800 ರಿಂದ 1000 ಅಡಿ ಬೋರ್ ವೆಲ್ ಕೊರೆಸಿದರು ನೀರು ಸಿಗುತ್ತಿರಲಿಲ್ಲ. ಆದರೆ ವಾಣಿವಿಲಾಸ ಜಲಾಶಯದಲ್ಲಿ ನೀರು ಸಂಗ್ರಹವಾಗುತ್ತಿದ್ದಂತೆ ಡ್ಯಾಂ ಸುತ್ತ ಮುತ್ತಲಿನ ಜಮೀನು ಪ್ರದೇಶಗಳಲ್ಲಿ, ಕೊಳವೆ ಬಾವಿಗಳಲ್ಲಿ ನೀರು ಉಕ್ಕಿ ಬರುತ್ತಿವೆ. ಹೊಸದುರ್ಗ, ಹಿರಿಯೂರು ತಾಲೂಕಿನ ಕೆಲ ಭಾಗಗಳಲ್ಲಿ ಕೇವಲ 50 ರಿಂದ 200 ಅಡಿಗೆ ನೀರು ಸಿಗುತ್ತಿದೆ.
ರೈತ ಸಮುದಾಯದಲ್ಲಿ ಚೈತನ್ಯ
ಜಿಲ್ಲೆಯ ಹಲವು ಭಾಗಗಳಲ್ಲಿ ಕೃಷಿ, ಚಟುವಟಿಕೆಗಳು ಸಂಭ್ರಮದಿಂದ ಗರಿಗೆದರಿದ್ದು ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಜಲಾಶಯದಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸುತ್ತಲಿನ ಪರಿಸರ ರಮ್ಯ ರಮಣೀಯವಾಗಿ ನೋಡುಗರನ್ನು ಆಕರ್ಷಿಸುತ್ತಿದೆ. ಜಲಾಶಯ ತುಂಬು ಹಂತಕ್ಕೆ ಬಂದಿರೋದು, ರೈತ ಸಮುದಾಯದಲ್ಲಿ ಚೈತನ್ಯ ಮೂಡಿಸಿದರೆ ಮತ್ತೊಂದು ಕಡೆ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರಿನ ದಾಹ ನೀಗಿದಂತಾಗಿದೆ.

ಪ್ರವಾಸಿಗರನ್ನು ಸೆಳೆಯುತ್ತಿರುವ ಜಲಾಶಯ
ಜಲಾಶಯ ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು. ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಿ ಡ್ಯಾಂ ವೀಕ್ಷಿಸಬಹುದಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications