Vani Vilasa Sagara Dam: ಮುಂಗಾರಿನಲ್ಲಿ ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಜಲಾಶಯದ ನೀರಿನ ಮಟ್ಟದ ವಿವರ

Vani Vilasa Sagara Dam: ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಸಾಗರ ಡ್ಯಾಂ ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾಗಿದೆ. ಈ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೋಟೆನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿರುವ ಈ ಇತಿಹಾಸ ಪ್ರಸಿದ್ಧ ಜಲಾಶಯ 2025ರ ಒಂದೇ ವರ್ಷದಲ್ಲಿ ಎರಡು ಬಾರಿ ಭರ್ತಿಯಾಗಿದ್ದು, ಹೊಸ ಇತಿಹಾಸ ಸೃಷ್ಟಿಯಾಗಿತ್ತು. ಒಟ್ಟು ಈವರೆಗೆ ನಾಲ್ಕು ಬಾರಿ ಕೋಡಿ ಬಿದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ನೀರಿನ ಮಟ್ಟದ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Vani Vilasa Sagara Dam Current Water Level of Marikanive Reservoir Know Statistics details

ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 130 ಅಡಿ (30 ಟಿಎಂಸಿ) ಆಗಿದ್ದು, ಇದೀಗ ಸೋಮವಾರ (ಜುಲೈ 20) ನೀರಿನ ಮಟ್ಟ 123 ಅಡಿ ಇದೆ. ಈ ಬಾರಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆ ಡ್ಯಾಂನಲ್ಲಿ ನೀರಿನ ಪ್ರಮಾಣ ತಗ್ಗಿದೆ. ಯಾವುದೇ ಒಳಹರಿವು, ಹೊರಹರಿವು ಕೂಡ ಇಲ್ಲದಂತಾಗಿದೆ. ಒಂದು ವೇಳೆ ಭದ್ರಾ ಜಲಾಶಯದಿಂದ ನೀರು ಬಿಟ್ಟರೆ ಅಥವಾ ಭಾರಿ ಮಳೆ ಸುರಿದರೆ ಜೀವಕಳೆ ಬಂದಂತಾಗಲಿದೆ.

ಒಂದೇ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದು ಇತಿಹಾಸ ಸೃಷ್ಟಿ

ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ವಾಣಿ ವಿಲಾಸ ಸಾಗರ ಜಲಾಶಯವನ್ನು ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಇನ್ನು ಇದು 2025ರಲ್ಲಿ ಎರಡು ಬಾರಿ ಕೋಡಿ ಬಿದ್ದಿತ್ತು. ಜನವರಿಯಲ್ಲಿ ಭದ್ರಾ ಡ್ಯಾಂನಿಂದ ಬಿಟ್ಟ ನೀರಿನಿಂದ ಕೋಡಿ ಬಿದ್ದರೆ, ಅಕ್ಟೋಬರ್‌ನಲ್ಲಿ ಮಳೆ ನೀರಿನಿಂದ ಕೋಡಿ ಬಿದ್ದು ಇತಿಹಾಸ ನಿರ್ಮಾಣವಾಗಿತ್ತು. ಆ ವೇಳೆ ಜಲಾಶಯದ ನೀರಿನ ಮಟ್ಟ 131.65 ಅಡಿ ಇತ್ತು.

ಯಾವಗೆಲ್ಲಾ ಡ್ಯಾಂ ಭರ್ತಿ?

1933ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹ ಆಗುವ ಮೂಲಕ ಮೊದಲ ಬಾರಿಗೆ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ 2022ರಲ್ಲಿ 135, 2025ರ ಜನವರಿ ತಿಂಗಳಲ್ಲಿ 130 ಅಡಿ ನೀರು ಬಂದಿದ್ದು, ಈ ವೇಳೆ ಕೋಡಿ ಬಿದ್ದು ಮೂರನೇ ಬಾರಿ ದಾಖಲೆ ಸೃಷ್ಟಿಸಿತ್ತು. ಮತ್ತೆ 2025ರ ಜನವರಿ ಹಾಗೂ ಅಕ್ಟೋಬರ್‌ನಲ್ಲಿ ಭರ್ತಿಯಾಗಿತ್ತು. ಈ ಮೂಲಕ ಒಂದೇ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದ ಹೆಗ್ಗಳಿಗೆ ಪಾತ್ರವಾಗಿದೆ.

ಯಾವ ವರ್ಷ ನೀರಿನ ಮಟ್ಟ ಎಷ್ಟು?

1917ರಲ್ಲಿ 120.60 ಅಡಿ, 1918 - 121.30, 1919 - 128.30, 1920 - 125.50, 1932 - 125.50, ಅಡಿ, 1933 - 135.25 ಅಡಿ, 1934 - 130.24 ಅಡಿ, 1935 - 123.22 ಅಡಿ, 1956 - 125 ಅಡಿ, 1957 - 125.05 ಅಡಿ, 1958 - 124.50 ಅಡಿ, 2000 - 122.50 ಅಡಿ, 2021 - 125.50 ಅಡಿ, 2022 - 135 ಅಡಿ, 2024ರಲ್ಲಿ 128.40 ಅಡಿ, 2025 ಜನವರಿಯಲ್ಲಿ 130 ಅಡಿ, 2025ರ ಅಕ್ಟೋಬರ್‌ನಲ್ಲಿ 130 ಅಡಿ ನೀರು ಸಂಗ್ರ ಆಗಿತ್ತು.

ಪ್ರಸ್ತುತ ನೀರಿನ ಮಟ್ಟ

* ನೀರಿನ ಸಂಗ್ರಹಣಾ ಸಾಮರ್ಥ್ಯ: 130 ಅಡಿ
* ಪ್ರಸ್ತುತ ನೀರಿನ ಮಟ್ಟ: 123 ಅಡಿ
* ಒಳಹರಿವು: 00 ಕ್ಯೂಸೆಕ್
* ಹೊರಹರಿವು: 00 ಕ್ಯೂಸೆಕ್

1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸ ಇದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ 'ವೇದಾ' ನದಿ ಕಡೂರಿನ ಬಳಿ 'ಅವತಿ' ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜೀವನಾಡಿ ಆಗಿದೆ. ಈ ಡ್ಯಾಂ ವಿನ್ಯಾಸ ಇಂಡಿಯಾ ಭೂಪಟದಂತೆ ಇದ್ದು, ಇದೇ ಪ್ರವಾಸಿಗರ ಪ್ರಮುಖ ಆಕರ್ಷಣೆ ಆಗಿದೆ. ಒಟ್ಟಿನಲ್ಲಿ ಹೇಳುವುದಾದರೆ ಈ ಬಾರಿ ಮುಂಗಾರು ಮಳೆ ತಗ್ಗಿದ ಹಿನ್ನೆಲೆ ಜಲಾಶಯಕ್ಕೆ ಒಳಹರಿವು ಇಲ್ಲದಂತಾಗಿದ್ದು, ಇಲ್ಲಿನ ರೈತರು ಹಾಗೂ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+