Vani Vilasa Sagara Dam: 3ನೇ ಬಾರಿ ಇತಿಹಾಸ ಸೃಷ್ಟಿಸಿದ ವಾಣಿ ವಿಲಾಸ ಜಲಾಶಯ: ಬಾಗಿನ ಅರ್ಪಣೆಗೆ ದಿನಾಂಕ ಫಿಕ್ಸ್
Vani Vilasa Sagara Dam: ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾಗಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಜಲಾಶಯ ಭರ್ತಿಯಾಗಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಕೋಡಿ ಬೀದ್ದಿದ್ದು, ಬಾಗಿನ ಅರ್ಪಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಹಾಗಾದರೆ ಈಗ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಅಂಕಿ ಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಸಂಪೂರ್ಣ ಭರ್ತಿಯಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ಇದೇ ಜನವರಿ 18ರಂದು ಗಂಗೆ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

2022ರಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ ಎರಡನೇ ಬಾರಿಗೆ 135 ಅಡಿ ನೀರು ಸಂಗ್ರಹವಾಗಿ ಡ್ಯಾಂ ಕೋಡಿ ಬಿದ್ದು ಐತಿಹಾಸಿಕ ಸಾಧನೆಗೆ ಕಾರಣವಾಗಿತ್ತು. ಈಗ ಮಳೆಯಿಲ್ಲದಿದ್ದರೂ ಕೂಡ 3ನೇ ಬಾರಿಗೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದೆ. ಈ ಬಾರಿ ಜಲಾಶಯ ತುಂಬಲು ಪ್ರಮುಖ ಕಾರಣವೇ ಭದ್ರಾ ಜಲಾಶಯದಿಂದ ನೀರು ಬಿಟ್ಟಿರುವುದಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ 2024ರಲ್ಲಿ ಹೇಳಿಕೊಳ್ಳುವಂತಹ ಮಳೆಯೇನು ಆಗಿಲ್ಲ. ಅದೇ ವರ್ಷದ ಜುಲೈ ಅಂತ್ಯದಲ್ಲಿ ವಾಣಿ ವಿಲಾಸ ಜಲಾಶಯದಲ್ಲಿ 113.8 ಅಡಿ ನೀರು ಸಂಗ್ರವಾಗಿತ್ತು. ಬಳಿಕ ಭದ್ರಾ ಜಲಾಶಯದಿಂದ ನಿತ್ಯವೂ 693 ಕ್ಯೂಸೆಕ್ ನೀರು ಹರಿಸಲಾಗಿದ್ದು, ಈ ಹಿನ್ನೆಲೆ 2025ರ ಜನವರಿವರಿ 13ರ ವೇಳಗೆ 130 ಅಡಿ ತಲುಪಿದೆ. ಈ ಮೂಲಕ ಮೂರನೇ ಬಾರಿಗೆ ಜಲಾಶಯ ಭರ್ತಿಯಾಗಿ ಇತಿಹಾಸ ಸೃಷ್ಟಿಸಿದೆ.
ಜಲಾಶಯ ಒಟ್ಟು 135 ಅಡಿ ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿದ್ದು, 130 ಅಡಿಗೆ ಡ್ಯಾಂ ಕೋಡಿ ಬೀಳಲಿದೆ. ಇದೀಗ ಕೋಡಿ ಬಿದ್ದಿದ್ದು, ಬಾಗಿನ ಅರ್ಪಣೆಗೆ ಸಜ್ಜಾಗಿದೆ. ಇನ್ನು ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಜನತೆಗೆ ನೀರಿನ ಸಮಸ್ಯೆ ದೂರವಾಗಿದೆ. ಬೇಸಿಗೆ ಹಂಗಾಮಿನಲ್ಲಿ ಎಡ ಮತ್ತು ಬಲನಾಲೆ ಮೂಲಕ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಹರಿಸಲು ತುಂಬಾ ಸಹಾಯ ಆದಂತಾಗಿದೆ.
1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 118 ವರ್ಷಗಳ ಕಾಲ ಇತಿಹಾಸವಿದೆ. 1935ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹವಾಗುವ ಮೂಲಕ ಮೊದಲ ಬಾರಿಗೆ ಡ್ಯಾಂ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ ಕಳೆದ ವರ್ಷ 2022ರಲ್ಲಿ ಎರಡನೇ ಬಾರಿಗೆ 135 ಅಡಿ ನೀರು ಸಂಗ್ರಹವಾಗಿ ಡ್ಯಾಂ ಕೋಡಿ ಬಿದ್ದು ಐತಿಹಾಸಿಕ ಸಾಧನೆಗೆ ಕಾರಣವಾಗಿತ್ತು. ಇದೀಗ 2025ರಲ್ಲಿ 130 ಅಡಿ ನೀರು ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ.
ಮೂರು ದಾಖಲೆಗಳು
* 1935 - 135.25 ಅಡಿ
* 2022 - 135 ಅಡಿ
* 2025 - 130 ಅಡಿ ide sir 3
ಯಾವ ವರ್ಷ ಎಷ್ಟು ನೀರು ಸಂಗ್ರಹ?: 1917ರಲ್ಲಿ 120.60 ಅಡಿ, 1918ರಲ್ಲಿ 121.30, 1919ರಲ್ಲಿ 128.30, 1920ರಲ್ಲಿ 125.50, 1932ರಲ್ಲಿ 125.50, ಅಡಿ, 1933ರಲ್ಲಿ 135.25 ಅಡಿ, 1934ರಲ್ಲಿ 130.24 ಅಡಿ, 1935ರಲ್ಲಿ 123,22 ಅಡಿ, 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2000ರಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ, 2024ರ ಅಂತ್ಯದವರೆಗೂ 128.40 ಅಡಿ ನೀರು ಸಂಗ್ರಹವಾಗಿತ್ತು.
1907ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿರಿಯೂರು ಪ್ರದೇಶದ ಅಚ್ಚುಕಟ್ಟುದಾರರಿಗೆ ಅನುಕೂಲ ಆಗಲಿ ಎನ್ನುವ ದೃಷ್ಟಿಯಿಂದ ವೇದಾವತಿ ನದಿಗೆ ಅಡ್ಡಲಾಗಿ ಮಾರಿ ಕಣಿವೆ ಬಳಿ ವಿವಿ ಸಾಗರ ಜಲಾಶಯವನ್ನು ನಿರ್ಮಾಣ ಮಾಡಿದರು. ಈ ಜಲಾಶಯ ನಿರ್ಮಾಣವಾಗಿ ಸುಮಾರು 118 ವರ್ಷ ಕಳೆದಿದೆ. ಇದು ಹಿರಿಯೂರು, ಚಿತ್ರದುರ್ಗ, ಚಳ್ಳೆಕೆರೆ ಸೇರಿದಂತೆ ಡಿಆರ್‌ಡಿಓಗೆ ಕುಡಿಯುವ ನೀರಿನ ಮೂಲವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇನ್ನು ವಾಣಿ ವಿಲಾಸ ಜಲಾಶಯವನ್ನು ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು.












Click it and Unblock the Notifications