Vani Vilasa Sagara Dam: ವಾಣಿ ವಿಲಾಸ ಡ್ಯಾಂ ತುಂಬಲು ಕೇವಲ 4 ಅಡಿ ಮಾತ್ರ ಬಾಕಿ.! ನೀರಿನ ಮಟ್ಟ ಎಷ್ಟಿದೆ.?

Vani Vilasa Sagara Dam: ಈಗಾಗಲೇ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಇದೀಗ ಮತ್ತೆ ಮಳೆರಾಯ ಆರ್ಭಟ ಮುಂದುವರೆದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗುವ ಹಂತವನ್ನು ತಲುಪಿದೆ. ಹಾಗಾದರೆ ಪ್ರಸ್ತುತ ಡ್ಯಾಂ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಪರಿಣಾಮ ಇದೀಗ ಹಲವು ಜಲಾಶಯಗಳು ಮತ್ತೆ ತುಂಬುವ ಮೂಲಕ ಇತಿಹಾಸ ಸೃಷ್ಟಿಸಿವೆ. ಹಾಗೆಯೇ ಇದೀಗ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯ ಎರಡು ವರ್ಷಗಳ ಬಳಿಕ ಭರ್ತಿಯಾಗುವ ಹಂತವನ್ನು ತಲುಪಿದ್ದು, ಮತ್ತ ಇತಿಹಾಸ ನಿರ್ಮಾಣ ಮಾಡಲು ಮುಂದಾಗಿದೆ.

Vani Vilasa Sagara Dam inflow increase Know water levele statistics on october 24

ಇದೀಹ ಹಿರಿಯೂರು ತಾಲ್ಲಾಕಿನ ವಾಣಿ ವಿಲಾಸ ಸಾಗರ ಜಲಾಶಯಕ್ಕೆ 7,741 ಕ್ಯೂಸೆಕ್ ನೀರು ದಾಖಲೆ ಪ್ರಮಾಣದಲ್ಲಿ ಹರಿದು ಬಂದಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 125.50 ಅಡಿ ತಲುಪಿದ್ದು, ಭರ್ತಿಗೆ ಕೇವಲ 4.30 ಅಡಿ ಅಷ್ಟೇ ಬಾಕಿ ಇದೆ. ಹಾಗಾದರೆ ಯಾವ್ಯಾವ ವರ್ಷ ದಾಖಲೆ ನಿರ್ಮಾಣವಾಗಿದೆ ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.

ಎಷ್ಟು ಅಡಿಕೆ ಕೋಡಿ ಬೀಳಲಿದೆ?: ಜಲಾಶಯದ ಮೇಲ್ಭಾಗದಲ್ಲಿ ಮಳೆ ಆಗುತ್ತಿರುವದರಿಂದ ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಒಳಹರಿವು ಏರಿಕೆಯಾಗಿದೆ. 2024ರ ಮಳೆಗಾಲದಲ್ಲಿ ಜಲಾಶಯಕ್ಕೆ 7,741ಕ್ಯೂಸೆಕ್ ನೀರು ಹರಿದು ಬಂದಿದೆ. ಡ್ಯಾಂ ಒಟ್ಟು 135 ಅಡಿ ಎತ್ತರ ಇದ್ದು, 130 ಅಡಿಗೆ ಡ್ಯಾಂ ಕೋಡಿ ಬೀಳಲಿದೆ.

ಜಲಾಶಯಕ್ಕೆ ಇನ್ನೂ ಕೇವಲ ನಾಲ್ಕೂವರೆ ಅಡಿ ನೀರು ಬಂದರೆ ಈ ಬಾರಿ ಕೋಡಿ ಬೀಳಲಿದೆ. 89 ವರ್ಷಗಳ ಬಳಿಕ 2022ರಲ್ಲಿ ಡ್ಯಾಂ ಎರಡನೇ ಬಾರಿಗೆ ಕೋಡಿ ಬಿದ್ದು, ಸುಮಾರು ಎರಡು ತಿಂಗಳ ಕಾಲ ವೇದಾವತಿ ನದಿಯಲ್ಲಿ ನೀರು ಹರಿದಿತ್ತು. ಇದೀಗ ಮೂರನೇ ಬಾರಿಗೆ ಕೋಡಿ ಬೀಳಲು ಕ್ಷಣಗಣನೆ ಆರಂಭವಾಗಿದೆ.

ಹೆಚ್ಚು ನೀರು ಸಂಗ್ರಹವಾದ ವರ್ಷ: 1933ರಲ್ಲಿ ಮೊದಲ ಬಾರಿಗೆ ಡ್ಯಾಂ ಕೋಡಿ ಬಿದ್ದಿತ್ತು. ವಾಣಿ ವಿಲಾಸ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹವಾದ ವರ್ಷ 1917ರಲ್ಲಿ 120.60 ಅಡಿ, 1918ರಲ್ಲಿ 121.30 ಅಡಿ, 1919ರಲ್ಲಿ 128.30, 1920ರಲ್ಲಿ 125.50, 1932ರಲ್ಲಿ 125.50, ಅಡಿ, 1933ರಲ್ಲಿ 135.25 ಅಡಿ ನೀರು ಸಂಗ್ರಹವಾಗಿತ್ತು.

1934ರಲ್ಲಿ 130.24 ಅಡಿ, 1935ರಲ್ಲಿ 123,22 ಅಡಿ, 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2000ರಲ್ಲಿ 122.50ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ, 2024 ( ಈ ವರ್ಷ)ರಲ್ಲಿ 125.60 ಅಡಿ ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+