Vani Vilasa Sagara Dam: ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ 3,004 ಕ್ಯೂಸೆಕ್ ಒಳಹರಿವು-ನೀರಿನ ಮಟ್ಟ ಎಷ್ಟಿದೆ?

Vani Vilasa Sagara Dam: ಭಾರೀ ಮಳೆಯಿಂದ ಈಗಾಗಲೇ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ತುಂಬಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ. ಹಾಗೆಯೇ ಇದೀಗ ಹಿರಿಯೂರು ತಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾದರೆ ಇದೀಗ ಇದರ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮಧ್ಯ ಕರ್ನಾಟಕ ಏಕೈಕ ರೈತರ ಜೀವನ ರೆಡಿಯಾಗಿರುವ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವು ಮುಂದುವರೆದಿದ್ದು, ಇಂದು (ಆಗಸ್ಟ್‌ 18) ಭಾನುವಾರದ ವರದಿಯಲ್ಲಿ 3,004 ಕ್ಯೈಸೆಕ್‌ ನೀರು ಜಲಾಶಯಕ್ಕೆ ಒಳಹರಿವು ಇದೆ.

Vani Vilasa Sagara Dam inflow is 3 004 cusec Water level details on August 18

ಚಿಕ್ಕಮಗಳೂರು, ಅಜ್ಜಂಪುರ ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಾಣಿ ವಿಲಾಶ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳ ಆಗಿದೆ. ಶನಿವಾರ 2,668 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿತ್ತು. ಇದೀಗ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 116.65 ಅಡಿ ಇದೆ. 30 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ವಾಣಿ ವಿಲಾಸ ಸಾಗರದಲ್ಲಿ ಸದ್ಯ 19.97 ಟಿಎಂಸಿ ನೀರು ಇದೆ.

ಡ್ಯಾಂ ಒಟ್ಟು 135 ಅಡಿ ಎತ್ತರದಲ್ಲಿದ್ದು, ಕಳೆದ 2022ರಲ್ಲಿ ಡ್ಯಾಂ ಕೋಡಿ ಬಿದ್ದಿತ್ತು. 2023ರಲ್ಲಿ ಮಳೆ ಇಲ್ಲದ ಕಾರಣ ಡ್ಯಾಂಗೆ ಯಾವುದೇ ಹೇಳಿಕೊಳ್ಳುವಂತಹ ಒಳಹರಿವು ನೀರು ಬಂದಿರಲಿಲ್ಲ. ಇದೀಗ ಈ ವರ್ಷದಲ್ಲಿ ಸುಮಾರು 4ರಿಂದ 5 ಅಡಿ ನೀರು ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ ನೀರಿನ ಅಭಾವ ಹೆಚ್ಚಿದ್ದ ನಿಟ್ಟಿನಲ್ಲಿ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಣಿ ವಿಲಾಸಪುರ ಬಳಿ ವೇದಾವತಿ ನದಿಗೆ ಅಡ್ಡಲಾಗಿ 1,907ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜಲಾಶಯ ನಿರ್ಮಾಣ ಮಾಡಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಗಿರಿ ಕಂದಕಗಳಲ್ಲಿ ಹುಟ್ಟುವ ವೇದಾವತಿ ನದಿಗೆ ಅಡ್ಡಲಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಬಳಿ ಮರಿಕಣಿವೆ ಅಥವಾ ವಾಣಿ ವಿಲಾಸ ಸಾಗರ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ವಾಣಿ ವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್‌ಪೀಸ್ ಎಂದು ಗುರುತಿಸಲಾಗಿದೆ.

ಈ ಅಣೆಕಟ್ಟನ್ನು ಮೈಸೂರಿನ ಶ್ರೀ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ 'ತಾರಾ ಚಾಂದ್ ದಲಾಲ್' ಎಂಬ ಎಂಜಿನಿಯರ್ ನೇತೃತ್ವದ ತಂಡವು ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿದೆ. ಅಲ್ಲದೇ ಮೈಸೂರಿನಲ್ಲಿ ಇರುವ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಾಣಿ ವಿಲಾಸ ಸಾಗರದ ನೀಲಿನಕ್ಷೆಯೇ ಮೂಲ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+