Vani Vilasa Dam: ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದ ವಾಣಿ ವಿಲಾಸ ಜಲಾಶಯ ತುಂಬಲು ಕೆಲವೇ ಅಡಿ ಬಾಕಿ; ನೀರಿನ ಮಟ್ಟ ಎಷ್ಟಿದೆ?
Vani Vilasa Sagara Dam: ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಮೂರ್ನಾಲ್ಕು ದಿನಗಳಿಂದ ಸ್ಥಗಿತಗೊಂಡಿದ್ದ ಒಳಹರಿವು ಮತ್ತೆ ಆರಂಭವಾಗಿದೆ. ಇನ್ನು ಈ ಜಲಾಶಯ ಕೋಡಿ ಬೀಳಲು ಇನ್ನೂ ಕೆಲವೇ ಅಡಿಗಳು ಮಾತ್ರ ಬಾಕಿಯಿದೆ. ಹಾಗಾದರೆ ಇದೀಗ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ನಿನ್ನೆ (ನವೆಂಬರ್ 07) ಮತ್ತು ಇಂದು (ನವೆಂಬರ್ 08) ಜಲಾಶಯಕ್ಕೆ ಒಳಹರಿವು ಮುಂದುವರೆದಿದೆ. ಇಂದು ಜಲಾಶಯಕ್ಕೆ 924 ಕ್ಯೂಸೆಕ್ ಒಳಹರಿವು ಇದ್ದು, ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 127.40 ಅಡಿ ತಲುಪಿದೆ. ಇನ್ನು ಡ್ಯಾಂ ಭರ್ತಿಯಾಗಿ ಕೋಡಿ ಬೀಳಲು ಕೇವಲ 2.60 ಅಡಿ ನೀರು ಬರಬೇಕಿದೆ ಎಷ್ಟೇ. ಇಷ್ಟು ನೀರು ಬಂದರೆ ಡ್ಯಾಂ ಮೂರನೇ ಬಾರಿಗೆ ಕೋಡಿ ಬೀಳುವ ಮೂಲಕ ಇತಿಹಾಸ ಸೃಷ್ಟಿಸಲಿದೆ.

ಜಲಾಶಯದ ಮೇಲ್ಭಾಗದಲ್ಲಿ ಮಳೆ ಇಲ್ಲದಿರುವುದರಿಂದ ಹರಿದು ಬರುತ್ತಿದ್ದ ಒಳಹರಿವಿನ ಪ್ರಮಾಣ ನಿಂತು ಹೋಗಿದೆ. ಭದ್ರಾ ಜಲಾಶಯದಿಂದ ನೀರು ಪಂಪ್ ಮೂಲಕ ವಾಣಿ ವಿಲಾಸ ಜಲಾಶಯಕ್ಕೆ ಹರಿಸಲಾಗುತ್ತಿದೆ. ಗುರುವಾರ ಮತ್ತು ಇಂದು 924 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ.
ಹಿರಿಯೂರಿನ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತನ್ನ ತಾಯಿಯ ನೆನಪಿಗಾಗಿ 1907ರಲ್ಲಿ ತಾಲ್ಲೂಕಿನ ವಾಣಿ ವಿಲಾಸಪುರ ಗ್ರಾಮದ ಬಳಿ ವೇದಾವತಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲಾಗಿದೆ.
ಯಾವ ವರ್ಷ ಎಷ್ಟು ನೀರು ಸಂಗ್ರಹ?: ವಾಣಿ ವಿಲಾಸ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹವಾದ ವರ್ಷ ಈ ರೀತಿ ಇದೆ. 1917ರಲ್ಲಿ 120.60 ಅಡಿ, 1918ರಲ್ಲಿ 121.30 ಅಡಿ, 1919ರಲ್ಲಿ 128.30, 1920ರಲ್ಲಿ 125.50, 1932ರಲ್ಲಿ 125.50, ಅಡಿ, 1933ರಲ್ಲಿ 135.25 ಅಡಿ, 1934ರಲ್ಲಿ 130.24 ಅಡಿ ನೀರು ಸಂಗ್ರಹವಾಗಿತ್ತು.
1935ರಲ್ಲಿ 123,22 ಅಡಿ, 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2000ರಲ್ಲಿ 122.50ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ, 2024 (ಈ ವರ್ಷ)ರಲ್ಲಿ ಅಂದರೆ ಇದೀಗ ಪ್ರಸ್ತುತ 127.40 ಅಡಿ ನೀರು ಸಂಗ್ರಹವಾಗಿದೆ. ಇನ್ನೂ ಒಳಹರಿವು ಹೀಗೆ ಮುಂದುವರೆದರೆ, ಇನ್ನು ಕೆಲವೇ ದಿನಗಳಲ್ಲಿ ಜಲಾಶಯ ತುಂಬಲಿದೆ.












Click it and Unblock the Notifications