Vani Vilasa Sagara Dam: ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಎಷ್ಟಿದೆ?
Vani Vilasa Sagara Dam: ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಸಾಗರ ಡ್ಯಾಂ ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾಗಿದೆ. ಈಗಾಗಲೇ ವರ್ಷದಲ್ಲೇ ಎರಡು ಬಾರಿ ಭರ್ತಿಯಾಗಿ ಡ್ಯಾಂ ಹೊಸ ಇತಿಹಾಸವನ್ನು ನಿರ್ಮಿಸಿದೆ. ಹಾಗಾದ್ರೆ ಇಂದು (ನವೆಂಬರ್ 2) ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೋಟೆನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿರುವ ಈ ಜಲಾಶಯ ಈಗಾಗಲೇ 2025ರ ಜನವರಿಯಲ್ಲಿ ಮೊದಲ ಬಾರಿಗೆ ಭರ್ತಿಯಾಗಿತ್ತು. ಮತ್ತೆ ಅಕ್ಟೋಬರ್‌ನಲ್ಲಿ ಮತ್ತೆ ಕೋಡಿ ಬಿದ್ದಿದ್ದು, ಈ ಮೂಲಕ ಇದೇ ವರ್ಷದಲ್ಲಿ ಎರಡನೇ ಬಾರಿ ತುಂಬಿದೆ. ಮತ್ತೊಂದೆಡೆ, ಇದುವರೆಗೆ ನಾಲ್ಕನೇ ಬಾರಿಗೆ ಕೋಡಿ ಬಿದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ವಾಣಿ ವಿಲಾಸ ಸಾಗರ ಜಲಾಶಯವನ್ನು 'ಮಾರಿಕಣಿವೆ' ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಇದನ್ನು ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಇದೀಗ ಈ ಜಲಾಶಯ ಇದುವರೆಗೂ ನಾಲ್ಕನೇ ಬಾರಿಗೆ ಭರ್ತಿಯಾಗಿ ಹೊಸ ಇತಿಹಾಸ ಸೃಷ್ಟಿದೆ.
2025ರ ಆರಂಭದಲ್ಲಿ ಅಂದರೆ ಜನವರಿಯಲ್ಲಿ ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿತ್ತು. ಅದು ಮಳೆ ನೀರಿನಿಂದಲ್ಲ, ಭದ್ರ ಡ್ಯಾಂನಿಂದ ಬಿಟ್ಟ ನೀರಿನಿಂದ. ಇನ್ನೂ ಇತ್ತೀಚೆಗಷ್ಟೇ ಮತ್ತೆ ಭರ್ತಿಯಾಗಿ ಕೋಡಿ ಬಿದ್ದಿದೆ. ಪ್ರಸ್ತುತ ನೀರಿನ ಮಟ್ಟ 132.60 ಅಡಿಯಿದೆ. ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 30 ಟಿಎಂಸಿ ಆಗಿದೆ. ಒಳಹರಿವು 652 ಕ್ಯೂಸೆಕ್ ಇದ್ದರೆ, 4,488 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಡ್ಯಾಂ ಯಾವ್ಯಾವಾಗ ಭರ್ತಿ?: 1933ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹ ಆಗುವ ಮೂಲಕ ಮೊದಲ ಬಾರಿಗೆ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ 2022ರಲ್ಲಿ 135, 2025ರ ಜನವರಿ ತಿಂಗಳಲ್ಲಿ 130 ಅಡಿ ನೀರು ಬಂದಿದ್ದು, ಈ ವೇಳೆ ಕೋಡಿ ಬಿದ್ದು ಮೂರನೇ ಬಾರಿ ದಾಖಲೆ ಸೃಷ್ಟಿಸಿತ್ತು. ಇದೀಗ ಮತ್ತೆ ಇದೇ ವರ್ಷದ ಅಕ್ಟೋಬರ್‌ನಲ್ಲಿ ಭರ್ತಿಯಾಗಿದೆ. ಈ ಮೂಲಕ ಇದೇ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದ ಹೆಗ್ಗಳಿಗೆ ಪಡೆದುಕೊಂಡಿದೆ.
ಯಾವ್ಯಾವ ವರ್ಷ ನೀರಿನ ಮಟ್ಟ ಎಷ್ಟು?: 1917ರಲ್ಲಿ 120.60 ಅಡಿ, 1918 - 121.30, 1919-128.30, 1920 - 125.50, 1932 - 125.50, ಅಡಿ, 1933 - 135.25 ಅಡಿ, 1934 - 130.24 ಅಡಿ, 1935 - 123.22 ಅಡಿ, 1956 - 125 ಅಡಿ, 1957 - 125.05 ಅಡಿ, 1958 - 124.50 ಅಡಿ, 2000 - 122.50 ಅಡಿ, 2021 - 125.50 ಅಡಿ, 2022 - 135 ಅಡಿ, 2024ರಲ್ಲಿ 128.40 ಅಡಿ, 2025 ಜನವರಿಯಲ್ಲಿ 130 ಅಡಿ, 2025ರ ಅಕ್ಟೋಬರ್‌ನಲ್ಲಿ 132 ಅಡಿ ನೀರು ಸಂಗ್ರವಾಗಿ ದಾಖಲೆ ನಿರ್ಮಿಸಿದೆ.
1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸ ಇದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಹುಟ್ಟುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇದು ಕೋಟೆನಾಡು ಚಿತ್ರದುರ್ಗ ಜಿಲ್ಲೆ ಜನರ ಜೀವನಾಡಿ ಅಂತಲೂ ಹೇಳಲಾಗುತ್ತದೆ. ಸದ್ಯ ಇದೀಗ ಮಳೆರಾಯನ ಆರ್ಭಟ ತಗ್ಗಿದೆ. ಒಟ್ಟಿನಲ್ಲಿ ಜಲಾಶಯ ಕೋಡಿಬಿದ್ದ ಹಿನ್ನೆಲೆ ಜಿಲ್ಲೆ ಜನರಿಗೆ ಸಂತಸ ಮೂಡಿಸಿದೆ.












Click it and Unblock the Notifications