Vani Vilasa Sagara Dam: ಆಗಸ್ಟ್ 13ರಂದು ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಎಷ್ಟಿದೆ.?-ಇಲ್ಲಿದೆ ವಿವರ
Vani Vilasa Sagara Dam: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ ಪ್ರಖು ಜಲಾಶಯಗಳು ಮೈದುಂಬಿ ಹರಿಯುತ್ತಿವೆ. ಹಾಗೆಯೇ ಇದೀಗ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆ ಇಲ್ಲದ ಕಾರಣ ಡ್ಯಾಂಗೆ ನೀರು ಹರಿದು ಬರುತ್ತಿಲ್ಲ. ವಾಣಿವಿಲಾಸ ಜಲಾಶಯದ ಪ್ರಸ್ತುತ ನೀರಿನ ಮಟ್ಟ 115.60 ಅಡಿ ತಲುಪಿದೆ. ಜಲಾಶಯ ಕೊಡಿ ಬೀಳಲು ಇನ್ನು 15 ಅಡಿ ನೀರು ಬರಬೇಕಿದೆ. ಪ್ರತಿದಿನ ಭದ್ರಾ ಜಲಾಶಯದಿಂದ ವಿವಿ ಸಾಗರ ಡ್ಯಾಂಗೆ 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನೂ ವಾಣಿ ವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ. 1906ರಲ್ಲಿ ಮೈಸೂರು ಒಡೆಯರ ಕಾಲದಲ್ಲಿ ಹಿರಿಯೂರು ತಾಲ್ಲೂಕಿನ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಅನುಕೂಲ ಆಗುವಂತೆ ವಾಣಿವಿಲಾಸಪುರ ಬಳಿ ವಾಣಿ ವಿಲಾಸ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ.
(ಸುಮಾರು 12,000 ಹೆಕ್ಟೇರ್ ಪ್ರದೇಶ) ಜೊತೆಗೆ ಹಿರಿಯೂರು, ಚಳ್ಳಕೆರೆ ಮತ್ತು ಚಿತ್ರದುರ್ಗ ನಗರಗಳಿಗೆ ಕುಡಿಯುವ ನೀರನ್ನೂ ಒದಗಿಸುತ್ತದೆ. ಸಿಮೆಂಟ್ ಉಪಯೋಗ ಇಲ್ಲದೆ, ಕೇವಲ ಗಾರೆಯಿಂದಲೇ ಇದನ್ನು ಕಟ್ಟಲಾಗಿದೆ. ಒಂದು ಬದಿಯಿಂದ ನೋಡಿದರೆ 'ಭಾರತದ ಭೂಪಟ'ವನ್ನು ಓಲುವ ದೃಶ್ಯ ಕಾಣುತ್ತದೆ.
ವಾಣಿ ವಿಲಾಸ ಸಾಗರ ಜಲಾಶಯದಲ್ಲಿ 1933ರಲ್ಲಿ 135.25 ಅಡಿ ನೀರು ಸಂಗ್ರಹ ಆಗಿದ್ದು, 1934ರಲ್ಲಿ 130.24 ಅಡಿ ನೀರು ಹರಿದು ಬಂದಿತ್ತು. 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ ನೀರು ಸಂಗ್ರಹ ಆಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿತ್ತು.
ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ ವೇದಾ ಎಂಬ ನದಿ ಕಡೂರಿನ ಬಳಿ ಅವತಿ ಎಂಬ ನದಿಯನ್ನು ಸೇರಿ ಅವು ಮುಂದೆ ವೇದಾವತಿ ನದಿಯಾಗಿ ಹರಿಯುತ್ತದೆ.











Click it and Unblock the Notifications