ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಗೆ ಇನ್ನೂ 1.95 ಅಡಿಯಷ್ಟೇ ಬಾಕಿ: ನೀರಿನ ಮಟ್ಟ ಎಷ್ಟಿದೆ.?
Vani Vilasa Sagara Dam: ಚಿತ್ರದುರ್ಗ ಜಿಲ್ಲೆಯ ರೈತರ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಡ್ಯಾಂ ಮೂರನೇ ಬಾರಿಗೆ ಕೋಡಿ ಬೀಳಳು ಇನ್ನೂ ಕೆಲವೇ ಕ್ಷಣಗಳಷ್ಟೇ ಬಾಕಿಯಿದೆ. ಹಾಗಾದರೆ ಇದೀಗ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಶಅಂಶಗಳ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಬಾರೀ ಚಿತ್ರದುರ್ಗ ಜಿಲ್ಲೆಯಲ್ಲಿ ಹೇಳಿಕೊಳ್ಳುವಷ್ಟೇನು ಮಳೆಯಾಗಿಲ್ಲ. ಆದರೂ ಜಲಾಶಯ ಭರ್ತಿಯಾಗುವ ಹಂತವನ್ನು ತಲುಪಿದೆ. ಹಾಗಾದರೆ ಜಲಾಶಯಕ್ಕೆ ಇಷ್ಟೊಂದು ನೀರು ಬಂದಿದ್ದು ಹೇಗೆ ಎನ್ನುವ ಪ್ರಶ್ನಗಳು ಹಲವರಲ್ಲಿ ಮೂಡಿರುತ್ತದೆ. ನಿಮ್ಮೆಲ್ಲ ಪ್ರಶ್ನಗಳಿಗೂ ಉತ್ತರ ಇಲ್ಲಿ ಗಮನಿಸಿ.

ಅಂದಹಾಗೆ ಜಲಾಶಯಕ್ಕೆ 924 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು, ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 128.05 ಅಡಿ ತಲುಪಿದೆ. ಇನ್ನೂ ಕೇವಲ 1.95 ಅಡಿ ಅಷ್ಟೇ ನೀರು ಹರಿದು ಬಂದರೆ ಜಲಾಶಯ ಮೂರನೇ ಬಾರಿಗೆ ಕೋಡಿ ಬೀಳಲಿದೆ. ಈ ಮೂಲಕ ಮತ್ತೆ ದಾಖಲೆ ಸೃಷ್ಟಿಸಲು ಸಜ್ಜಾಗಿದೆ.
ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಪುರ ಬಳಿ ವೇದಾವತಿ ನದಿಗೆ ಅಡ್ಡಲಾಗಿ ವಾಣಿ ವಿಲಾಸ ಸಾಗರ ಡ್ಯಾಂ ನಿರ್ಮಾಣ ಮಾಡಲಾಗಿದೆ. 1907ರಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ. ಜಲಾಶಯ ಒಟ್ಟು 135 ಅಡಿ ಎತ್ತರದ ಹೊಂದಿದ್ದು, 130 ಅಡಿಗೆ ಡ್ಯಾಂ ಕೋಡಿ ಬೀಳಲಿದೆ.
ಈ ಬಾರೀ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಮುಂಗಾರು ಮಳೆ ಆರ್ಭಟಿಸಿ ಕಾರಣ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಮಳೆ ಕಡಿಮೆ. ಇನ್ನು ಇಲ್ಲಿನ ಜೀವನಾಡಿಯಾಗಿರುವ ವಿವಿ ಸಾಗರ ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗಿರುವುದೇ ಕಡಿಮೆ ಪ್ರಮಾಣದಲ್ಲಿ. ಆದರೆ, ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬಂದಿರುವುದು ಭದ್ರಾ ಜಲಾಶಯದಿಂದ. ಆದ್ದರಿಂದ ಡ್ಯಾಂ ಭರ್ತಿಯಾಗುವ ಮಟ್ಟವನ್ನು ತಲುಪಲು ಸಾಧ್ಯವಾಗಿದೆ.
ಪ್ರಸಕ್ತ ಸಾಲಿನ ಸುಮಾರು ಸುಮಾರು 15 ಅಡಿಗಳಷ್ಟು ನೀರು ಬಂದಿದೆ. ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚು ಇರುವುದರಿಂದ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು ಜನತೆಗೆ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ಬೇಸಿಗೆ ಹಂಗಾಮಿನಲ್ಲಿ ಎಡನಾಲ ಮತ್ತು ಬಲನಾಲ ಮೂಲಕ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಹರಿಸಲಾಗುತ್ತದೆ.
ಹಳೆಯ ಅಣೆಕಟ್ಟುಗಳಲ್ಲಿ ವಿವಿ ಸಾಗರ ಡ್ಯಾಂ ಕೂಡ ಒಂದಾಗಿದೆ. 1907ರಲ್ಲಿ ನಿರ್ಮಾಣವಾಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸವಿದೆ. 1935ರಲ್ಲಿ 135.25 ಅಡಿ ನೀರು ಸಂಗ್ರಹವಾಗುವ ಮೂಲಕ ಮೊದಲ ಬಾರಿಗೆ ಡ್ಯಾಂ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ ಕಳೆದ ವರ್ಷ 2022ರಲ್ಲಿ ಎರಡನೇ ಬಾರಿಗೆ 135 ಅಡಿ ನೀರು ಸಂಗ್ರಹವಾಗಿ ಕೋಡಿ ಬಿದ್ದು, ಐತಿಹಾಸಿಕ ಸಾಧನೆಗೆ ಕಾರಣವಾಗಿತ್ತು. ಈ ವರ್ಷದಲ್ಲಿ 5 ಅಡಿ ನೀರು ಬಂದರೆ ಡ್ಯಾಂ ಕೋಡಿ ಬೀಳಲಿದೆ.
ಹೆಚ್ಚು ನೀರು ಸಂಗ್ರಹವಾದ ವರ್ಷ: 1917ರಲ್ಲಿ 120.60 ಅಡಿ, 1918ರಲ್ಲಿ 121.30 ಅಡಿ, 1919ರಲ್ಲಿ 128.30, 1920ರಲ್ಲಿ 125.50, 1932ರಲ್ಲಿ 125.50 ಅಡಿ, 1933ರಲ್ಲಿ 135.25 ಅಡಿ, 1934ರಲ್ಲಿ 130.24 ಅಡಿ, 1935ರಲ್ಲಿ 123,22 ಅಡಿ, 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2000ರಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ, 2024 (ಈ ವರ್ಷ)ರಲ್ಲಿ 128.05 ಅಡಿ ನೀರು ಸಂಗ್ರಹವಾಗಿದೆ.
ಭೇಟಿ ನೀಡುವ ಮಾರ್ಗಗಳ ವಿವರ: ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇನ್ನು ವಾಣಿ ವಿಲಾಸ ಜಲಾಶಯವನ್ನು ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು.
ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಬಹುದು. ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಪ್ರವಾಸಿಗರು ಹೊಸದುರ್ಗದಿಂದ ಹಿರಿಯೂರು ಮಾರ್ಗವಾಗಿ ಬಲಭಾಗದ ಮೂಲಕ ತೆರಳಿ ಡ್ಯಾಂ ವೀಕ್ಷಿಸಬಹುದಾಗಿದೆ.












Click it and Unblock the Notifications