Vani Vilasa Sagara Dam: ಮಳೆ ಇಲ್ಲದಿದ್ದರೂ 120 ಅಡಿ ತಲುಪಿದ ಹಿರಿಯೂರಿನ ವಿವಿ ಸಾಗರ ಜಲಾಶಯ-ಹೇಗೆ ಸಾಧ್ಯ
Vani Vilasa Sagara Dam: ಮಳೆ ಇಲ್ಲದಿದ್ದರೂ ಮಧ್ಯ ಕರ್ನಾಟಕದ ರೈತರ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶನಿವಾರ 120 ಅಡಿ ತಲುಪಿದೆ. ಇನ್ನು 10 ಅಡಿ ನೀರು ಹರಿದು ಬಂದರೇ ಪ್ರಸಕ್ತ ಸಾಲಿನಲ್ಲಿ ಕೋಡಿ ಬೀಳಲಿದೆ. ಹಾಗಾದರೆ ಇಷ್ಟು ನೀರು ಬಂದಿದ್ದು ಎಲ್ಲಿಂದ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಎಲ್ಲಾ ಕೆಲವು ಜಿಲ್ಲೆಗಳನ್ನೂ ಹೊರತುಪಡಿಸಿದರೆ, ಈ ಬಾರಿ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಪರಿಣಾಮ ಕೆರೆ, ಕಟ್ಟೆ, ಹಳ್ಳಗಳು ತುಂಬಿ ಹರಿದಿದ್ದವು. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಈ ಬಾರಿ ಹೇಳಿಕೊಳ್ಳುವಂತಹ ಮಳೆಯೇನು ಆಗಿಲ್ಲ. ಅದರಲ್ಲೂ ಜಿಲ್ಲೆಯ ಜೀವನಾಡಿಯಾಗಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಅಷ್ಟೇನು ನೀರು ಬಂದಿರಲಿಲ್ಲ.

ಆದರೆ ಇದೀಗ ಮಳೆಯಿಲ್ಲದಿದ್ದರೂ ಕೂಡ ಇಂದು (ಶನಿವಾರ, ಸೆಪ್ಟೆಂಬರ್ 21) ಬತ್ತುವ ಹಂತದಲ್ಲಿದ್ದ ಜಲಾಶಯದ ನೀರಿನ ಮಟ್ಟ 120 ಅಡಿ ತಲುಪಿದೆ. ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಸಾಮಾನ್ಯವಾಗಿ ಎಲ್ಲರನ್ನು ಕಾಡುತ್ತದೆ. ಡ್ಯಾಂಗೆ ಇಷ್ಟೊಂದು ನೀರು ಹರಿದುಬಂದಿದ್ದೇಗೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿದಿನ 693 ಕ್ಯೂಸೆಕ್ ಒಳಹರಿವು ನೀರು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 120 ಅಡಿಗೆ ತಲುಪಿದೆ. ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಬೀಳುತ್ತದೆ. ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.
1908ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ನಿರ್ಮಾಣಗೊಂಡ ವಾಣಿವಿಲಾಸ ಜಲಾಶಯ 1933ರಲ್ಲಿ ಮಾತ್ರ ಕೊಡಿ ಬಿದ್ದಿತ್ತು. ನಂತರ 89 ವರ್ಷದ ಬಳಿಕ ಅಂದರೆ 2022ರಲ್ಲಿ ಎರಡನೇ ಬಾರಿಗೆ ಕೋಡಿಯಲ್ಲಿ ನೀರು ಹರಿದಿತ್ತು. ಇದೀಗ ಹೆಚ್ಚು ನೀರು ಬಂದಲ್ಲಿ ಡ್ಯಾಂ ಈ ಬಾರಿ ಕೋಡಿ ಬೀಳುವುದು ಬಹುತೇಕ ಖಚಿತವಾಗಿದೆ.
1932ರಲ್ಲಿ 125.50 ಅಡಿ, 1933 ರಲ್ಲಿ 135.25 ಅಡಿ, 1934 ರಲ್ಲಿ 130.24 ಅಡಿ ನೀರು ಸಂಗ್ರಹವಾಗಿ ಇತಿಹಾಸ ನಿರ್ಮಿಸಿತ್ತು. ತದನಂತರ 1956ರಲ್ಲಿ 125 ಅಡಿ, 1957ರಲ್ಲಿ 125.05 ಅಡಿ, 1958 ರಲ್ಲಿ 124.25 ಅಡಿ ನೀರು ಸಂಗ್ರಹವಾಗಿತ್ತು. ಇದಾದ ಬಳಿಕ 2000ದಲ್ಲಿ 122.50 ಅಡಿ, 2021ರಲ್ಲಿ 125.50 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿ ದಾಖಲೆ ಬರೆದಿತ್ತು. 2022ರಲ್ಲಿ 130 ಅಡಿ ತಲುಪುವ ಮೂಲಕ ಎರಡನೇ ಬಾರಿಗೆ ಡ್ಯಾಂ ಕೋಡಿ ಬಿದ್ದಿತ್ತು.
1907ರಲ್ಲಿ ಈ ಜಲಾಶಯವನ್ನು ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಹಿರಿಯೂರು ತಾಲೂಕಿನ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರಿನ ಅನುಕೂಲವಾಗುವ ದೃಷ್ಟಿಯಿಂದ ಜಲಾಶಯ ನಿರ್ಮಾಣ ಮಾಡಿದ್ದರು. ಚಿಕ್ಕಮಗಳೂರು ಜಿಲ್ಲೆಯ ಗಿರಿ ಕಂದಕಗಳಲ್ಲಿ ಹುಟ್ಟುವ ವೇದಾವತಿ ನದಿಗೆ ಅಡ್ಡಲಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಬಳಿ ಮರಿಕಣಿವೆ ಅಥವಾ ವಾಣಿವಿಲಾಸಸಾಗರ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ.
ವಾಣಿ ವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್‌ಪೀಸ್ ಎಂದು ಗುರುತಿಸಲಾಗಿದೆ. ಈ ಅಣೆಕಟ್ಟನ್ನು ಮೈಸೂರಿನ ಶ್ರೀ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪರಾಜಮ್ಮಣಿ ಆದೇಶದ ಮೇರೆಗೆ 'ತಾರಾ ಚಾಂದ್ ದಲಾಲ್' ಎಂಬ ಎಂಜಿನಿಯರ್ ನೇತೃತ್ವದ ತಂಡವು ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿದೆ. ಅಲ್ಲದೇ ಮೈಸೂರಿನಲ್ಲಿ ಇರುವ ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ವಾಣಿವಿಲಾಸ ಸಾಗರದ ನೀಲಿನಕ್ಷೆಯೇ ಮೂಲ ಎಂದು ಹೇಳಲಾಗುತ್ತದೆ.
ಜಲಾಶಯ ನೋಡಲು ಬಯಸುವ ಪ್ರವಾಸಿಗರು ಹಿರಿಯೂರು ನಗರದಿಂದ ಹೊಸದುರ್ಗ ರಸ್ತೆ ಮಾರ್ಗವಾಗಿ 18 ಕಿಲೋ ಮೀಟರ್ ದೂರದ ಎಡಭಾಗಕ್ಕೆ ಜಲಾಶಯ ತಲುಪಬಹುದು. ಬೆಂಗಳೂರು, ತುಮಕೂರಿನಿಂದ ಹಿರಿಯೂರು ನಗರದ ಮೂಲಕ ಡ್ಯಾಂ ಪ್ರವೇಶಿಸಬಹುದು. ಹುಬ್ಬಳ್ಳಿ, ದಾವಣಗೆರೆಯಿಂದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಲಭಾಗದ ವಿವಿ ಪುರ ಕ್ರಾಸ್ ಮೂಲಕ ಜಲಾಶಯಕ್ಕೆ ತೆರಳಿ ಡ್ಯಾಂ ವೀಕ್ಷಣೆ ಮಾಡಬಹುದಾಗಿದೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral












Click it and Unblock the Notifications