ಚಿತ್ರದುರ್ಗ: ನರೇಗಾದಡಿ ಕೆಲಸ ಕೊಡ್ತೇವೆ, ಯಾರೂ ಗುಳೇ ಹೋಗಬಬೇಡಿ: ಜಿಲ್ಲಾ ಪಂಚಾಯತಿ ಸಿಇಒ ಮನವಿ
ಚಿತ್ರದುರ್ಗ, ಮಾರ್ಚ್, 14: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದು, ಕೂಲಿ ಕೆಲಸ ಅರಸಿಕೊಂಡು, ಯಾರೂ ಕೂಡ ಗುಳೇ ಹೋಗಬೇಡಿ. ನರೇಗಾ ಯೋಜನೆಯಡಿ ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೂಲಿ ಕೆಲಸ ಕೊಟ್ಟು, ಸಕಾಲದಲ್ಲಿಯೇ ಕೂಲಿ ಹಣ ನೀಡುತ್ತೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಹೊಳಲ್ಕೆರೆ ತಾಲ್ಲೂಕು ಹಿರೇ ಎಮ್ಮಿಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಲ್ಯಾಣಿ ಅಭಿವೃದ್ಧಿ, ಗ್ರಾಮೀಣ ಉದ್ಯಾನವನ, ಚರಂಡಿ, ರಸ್ತೆ ಕಾಮಗಾರಿಗಳನ್ನು ಗುರುವಾರ ವೀಕ್ಷಿಸಿ, ಬಳಿಕ ಅವರು ಮಾತನಾಡಿದರು.

ಮಳೆಯ ಕೊರತೆಯಿಂದಾಗಿ ಈ ಬಾರಿ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಯೋಜನೆಯಡಿ ಕೂಲಿ ಆಧಾರಿತ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಂಡಿದ್ದೇವೆ. ಉದ್ಯೋಗವನ್ನು ಅರಸಿಕೊಂಡು ಯಾರೂ ಕೂಡ ಗುಳೇ ಹೋಗಬಾರದು. ತಮ್ಮ ತಮ್ಮ ಗ್ರಾಮಗಳಲ್ಲಿಯೇ ನರೇಗಾದಡಿ ನೀಡುವ ಉದ್ಯೋಗವನ್ನು ನೀಡುತ್ತೇವೆ. ಕೆಲಸ ಅಗತ್ಯವಿರುವವರು ಕೂಡಲೆ ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ತಿಳಿಸಬೇಕು.
ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೂಲಿ ಕೆಲಸ ನೀಡುತ್ತೇವೆ. ಅಲ್ಲದೆ ಸಕಾಲಕ್ಕೆ ಕೂಲಿ ಹಣವನ್ನು ಕೂಡ ಪಾವತಿಸಲಾಗುವುದು. ಗ್ರಾಮೀಣ ಭಾಗದ ಮಹಿಳಾ ಕೂಲಿಕಾರರು ಹೆಚ್ಚು ಹೆಚ್ಚು ನರೇಗಾ ಯೋಜನೆಯ ಸದ್ಬಳಕೆ ಮಾಡಿಕೊಂಡು, ಬರ ಪರಿಸ್ಥಿತಿಯಲ್ಲಿಯೇ ಆರ್ಥಿಕವಾಗಿ ಸದೃಢರಾಗಬೇಕು. ಅಧಿಕಾರಿಗಳು ನರೇಗಾ ಯೋಜನೆ ಅನುಷ್ಠಾನಗೊಳಿಸುವಾಗ 60:40 ಅನುಪಾತವನ್ನು ತಪ್ಪದೆ ಪಾಲಿಸಬೇಕು. ಈ ಮೂಲಕ ಇನ್ನೂ ಹೆಚ್ಚು ಉತ್ತಮ ಗುಣಮಟ್ಟದ ಆಸ್ತಿಗಳ ಸೃಜನೆಯನ್ನು ಮಾಡಬೇಕು ಎಂದು ಸಿಇಒ ಸೋಮಶೇಖರ್ ಹೇಳಿದರು.
ನಂತರ ಇದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ವಹಿಸುತ್ತಿರುವ ಕೂಸಿನ ಮನೆಗೆ ಭೇಟಿ ನೀಡಿದ ಅವರು, ಮಕ್ಕಳಿಗೆ ಸರಿಯಾದ ಸಮಯಕ್ಕೆ ಆಹಾರ ವಿತರಣೆ ಆಗಬೇಕು. ಗುಣಮಟ್ಟದ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಬೇಕು ಮತ್ತು ಮಕ್ಕಳ ಆರೋಗ್ಯವನ್ನು ತುಂಬಾ ಜಾಗರೂಕತೆಯಿಂದ ಕಾಳಜಿ ವಹಿಸಿ ನೋಡಿಕೊಳ್ಳುವಂತೆ ಕೂಸಿನ ಮನೆ ನಿರ್ವಾಹಕರಿಗೆ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 7 ಗ್ರಾಮಗಳಿದ್ದು, ಕಡೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಸಿಇಒ ಅವರ ಗಮನಕ್ಕೆ ತಂದರು. ಸ್ಪಂದಿಸಿದ ಸಿಇಒ ಅವರು, ಅತ್ಯಂತ ತುರ್ತಾಗಿ ಸ್ಥಳೀಯ ಖಾಸಗಿ ಬೋರ್‌ವೆಲ್ ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ಕುಡಿಯುವ ನೀರನ ಸಮಸೆಯನ್ನು ಪರಿಹರಿಸುವಂತೆ ಸೂಚಿಸಿದರು.
ಹಿರೇ ಎಮ್ಮಿಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 7,000 ಸಾವಿರ ಜನಸಂಖ್ಯೆಯಿದ್ದು, 17 ಗ್ರಾಮ ಪಂಚಾಯಿತಿಯ ಸದಸ್ಯರಿದ್ದಾರೆ. ಹೀಗಾಗಿ ಈ ಗ್ರಾಮ ಪಂಚಾಯಿತಿಯನ್ನು ಗ್ರೇಡ್ 1 ಗ್ರಾಮ ಪಂಚಾಯಿತಿಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
ಗ್ರಾಮ ಪಂಚಾಯತಿ ಕಟ್ಟಡ 30 ವರ್ಷ ಹಳೆಯದಾಗಿದ್ದು, ಶಿಥಿಲವಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸದಸ್ಯರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಸದಸ್ಯರ ಶಿಫಾರಸ್ಸಿನಂತೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ 20,00000 ರೂಪಾಯಿ ಅನುದಾನ ಬಳಕೆಗೆ ಅವಕಾಶವಿದ್ದು, ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆ ಪಡೆದು, ಹೊಸ ಕಟ್ಟಡ ನಿರ್ಮಿಸಿಕೊಳ್ಳಲು ಸೂಚಿಸಿದರು.
ಗ್ರಾಮ ಪಂಚಾಯಿತಿಯು ಕರವಸೂಲಿಯಲ್ಲಿ ಅತ್ಯಂತ ಹಿಂದುಳಿದಿದ್ದು, ಅರೇ ಮಲೆನಾಡಿನ ಭಾಗ ಆಗಿರುವುದರಿಂದ ಅತೀ ಹೆಚ್ಚಿನ ವಸೂಲಾತಿಯನ್ನು ಮಾಡಿ, ಗ್ರಾಮ ಪಂಚಾಯಿತಿಯ ಸಂಪನ್ಮೂಲ ಹೆಚ್ಚು ಮಾಡಿಕೊಂಡು ಗ್ರಾಮಗಳ ಅಭಿವೃದ್ದಿ ಮಾಡುವಂತೆ ಸೂಚನೆ ನೀಡಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications