ಹಿರಿಯೂರು: ಕಂತೆ ಕಂತೆ ನೋಟು..ಕೆಜಿ ಬೆಳ್ಳಿ ಬಂಗಾರ, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದೇನು..?

ಚಿತ್ರದುರ್ಗ ಅಕ್ಟೋಬರ್‌ 31: ಹಿರಿಯೂರು ನಗರದಲ್ಲಿ ಬೆಳ್ಳಂ ಬೆಳಿಗ್ಗೆಯೇ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದ ಘಟನೆ ಸೋಮವಾರ ನಡೆದಿತ್ತು. ಸಂಜೆ ಸುಮಾರು 7ಗಂಟೆಯವರೆಗೂ ಮನೆಯಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದರು.

ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ ಕೃಷ್ಣಮೂರ್ತಿ ಅವರ ಕುವೆಂಪು ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 600 ಗ್ರಾಂ ಚಿನ್ನ, 2ಕೆಜಿ ಬೆಳ್ಳಿ, 2ಕಾರು ಹಾಗೂ 10 ನಿವೇಶನಗಳು ಪತ್ತೆಯಾಗಿವೆ.

What Did The Lokayukta Officers Find In The House Of Hiriyur Officials?

ಚಿತ್ರದುರ್ಗ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯಕ ಅವರ ಚಂದ್ರಾ ಲೇಔಟ್‌ನಲ್ಲಿರುವ ಮನೆಯಲ್ಲಿ 650 ಗ್ರಾಂ ಚಿನ್ನ, 4ಕೆಜಿ ಬೆಳ್ಳಿ, 2ಲಕ್ಷ ನಗದು, 11ನಿವೇಶನಗಳು ಹಾಗೂ ಇನ್ನೋವಾ ಸೇರಿದಂತೆ ಎರಡು ಕಾರುಗಳು ಇರುವುದು ಪತ್ತೆಯಾಗಿದೆ.

ಸೋಮವಾರ ಬೆಳಗ್ಗೆ ಹಿರಿಯೂರು ನಗರದಲ್ಲಿರುವ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪ್ರತ್ಯೇಕ ತಂಡವಾಗಿ ಆಗಮಿಸಿ, ಮನೆ ಮೇಲೆ ದಾಳಿ ನಡೆಸಿದ್ದರು.

What Did The Lokayukta Officers Find In The House Of Hiriyur Officials?

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಸೇರಿದಂತೆ, ತುಮಕೂರು, ಹಾವೇರಿ, ಬಳ್ಳಾರಿ, ರಾಯಚೂರು,ಹಾಸನ, ತುಮಕೂರು, ಬೆಂಗಳೂರು ನಗರ, ಮಂಡ್ಯ, ಕಲ್ಬುರ್ಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ಸೇರಿ 35.54 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ.

ಇಂದು ಉಡುಪಿಯಲ್ಲಿ ಐಟಿ ದಾಳಿ

ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಮಂಗಳೂರಿನ ಕದ್ರಿಯ ಬಳಿಯ ಶಿವಭಾಗ್‌ನ ಆಭರಣ ಜ್ಯುವೆಲ್ಲರಿಯ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದು, ಬೆಳಗ್ಗಿನಿಂದ ದಾಖಲೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ. ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಅವರ ಮಾಲೀಕತ್ವದಲ್ಲಿ ಆಭರಣ ಜ್ಯುವೆಲ್ಲರಿ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿವೆ. ಇನ್ನು ಉಡುಪಿಯಲ್ಲೂ ಹಲವು ಕಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ.

ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+