"ದಾವಣಗೆರೆ-ತುಮಕೂರು ರೈಲು ಮಾರ್ಗ ಯೋಜನೆ ಪ್ರಸ್ತಾಪಿಸಿಲ್ಲ ಏಕೆ?"
ಚಿತ್ರದುರ್ಗ, ಜುಲೈ, 24: ಈ ಹಿಂದೆ ಎಲ್ಲ ಬಜೆಟ್‌ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯದ್ದು ಕನ್ನಡಿಗರ ಪಾಲಿಗೆ ಕರಾಳ ಬಜೆಟ್ ಎಂದು ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ಹೆಚ್.ಆಂಜನೇಯ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ಕಾರಣಕ್ಕೆ ಅಸೂಯೆಗೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ, ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಮುಂದಾಗಿದೆ. ದ್ವೇಷದ ರಾಜಕಾರಣಕ್ಕೆ ಬಜೆಟ್ ಅನ್ನು ಬಳಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ವಿಧಾನಸಭಾ ಚುನಾವಣೆ ಮುನ್ನ ನಿರ್ಮಲಾ ಸೀತರಾಮನ್ ಮಂಡಿಸಿದ್ದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಬಿಡುಗಡೆಗೆ ಯಾವುದೇ ರೀತಿ ಆಶಾಭಾವನೆ ಮೂಡಿಸದಿರುವುದು ವಂಚನೆ ನಡೆ ಆಗಿದೆ. ದಾವಣಗೆರೆ-ತುಮಕೂರು ರೈಲು ಮಾರ್ಗ, ಕೈಗಾರಿಕೆಗಳ ಸ್ಥಾಪನೆ, ಭದ್ರಾ ಮೇಲ್ದಂಡೆ ಯೋಜನೆ ಹೀಗೆ ಅನೇಕ ಯೋಜನೆಗಳಿಗೆ ಈ ಬಜೆಟ್ ಉತ್ತರ ಕೊಡಲಿದೆ ಎಂಬ ನಿರೀಕ್ಷೆ ಹುಸಿ ಆಗಿದೆ ಎಂದರು.
ಒಟ್ಟಾರೆ ರಾಜ್ಯದ ಪಾಲಿಗೆ ಸಣ್ಣ ಬೆಳಕು ಕೂಡ ಆಗದ ಈ ಬಜೆಟ್ ಕತ್ತಲಿಗೆ ದೂಡಿದೆ. ಚುನಾವಣೆ ಸಂದರ್ಭ ಚಂದ್ರಲೋಕವನ್ನೇ ತರುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರ ಮಾತು ಜನರನ್ನು ಮೋಸದ ಜಾಲಕ್ಕೆ ತಳ್ಳುವ ಕುತಂತ್ರವಾಗಿದೆ. ಬಿಜೆಪಿಯ ಈ ದ್ವೇಷದ ನಡೆಗೆ ಕನ್ನಡಿಗರು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.
ಕೈಗಾರಿಕಾ ಕಾರಿಡಾರ್ ನಿರ್ಮಾಣ: ಜುಲೈ 23ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್‌ನಲ್ಲಿ ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಬಜೆಟ್ ಮಂಡನೆ ವೇಳೆ ವಿವಿಧ ಕೈಗಾರಿಕಾ ಕಾರಿಡಾರ್‌ಗಳ ಉಲ್ಲೇಖಸಿದ್ದು, ಇದೇ ವೇಳೆ ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದರು. ಸುಮಾರು 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳನ್ನೂ ಆರಂಭಿಸುವುದಾಗಿಯೂ ತಿಳಿಸಿದ್ದಾರೆ.
ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. 26,000 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್‌ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.
ಈ ಕಾರಿಡಾರ್ ನಿರ್ಮಾಣವಾದರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಎರಡು ಪ್ರಮುಖ ರಾಜ್ಯಗಳ ನಡುವೆ ನಿರ್ಮಿಸಲು ಉದ್ದೇಶಿಸಲಾಗಿರುವ ಮೆಗಾ ಇಂಡಸ್ಟ್ರಿಯಲ್ ಹಬ್. ಇದು ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಿಂದ ಆರಂಭವಾಗಿ ಬೆಂಗಳೂರಿನವರೆಗೆ ಇರಲಿದೆ. ನ್ಯಾಷನಲ್ ಇಂಡಸ್ಟ್ರಿಯಲ್ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಠಾನ ಟ್ರಸ್ಟ್ ವತಿಯಿಂದ ನಡೆಯುವ ಬೃಹತ್ ಯೋಜನೆ ಆಗಿದೆ.












Click it and Unblock the Notifications