ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ...

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 24: ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಮಹಿಳೆಯೊಬ್ಬರು ಏಕಕಾಲಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯದಿಂದಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಹಳ್ಳಿ ಗ್ರಾಮದ ಹುಸೇನ್ ಎಂಬುವವರ ಪತ್ನಿ ಸುಮಯ್ಯಗೆ ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಅವರು ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸುಮಯ್ಯ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ, ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ

ಜನವರಿಯಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿಯ ಬಿ.ಎಸ್.ಮಂಜುಳಾ ಎಂಬುವವರೂ ಕೂಡ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. 34 ವರ್ಷದ ಮಂಜುಳಾ ಅವರು ಒಂದು ಗಂಡು ಹಾಗೂ ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದರು.

Woman gives birth 3 babies at once in district hospital

ಶಿವಮೊಗ್ಗದಲ್ಲಿ ನಾಲ್ಕು ಮಕ್ಕಳ ಜನನ:
ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಬಗ್ಗೆ ವರದಿಯಾಗಿತ್ತು. ಇದರಲ್ಲಿ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿದ್ದವು.ಜಿಲ್ಲೆಯ ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್ ಎಂಬುವವರ ಪತ್ನಿ ಅಲ್ಮಾಜಾ ಬಾನುಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು.

Woman gives birth 3 babies at once in district hospital

ನಾಲ್ಕು ಮಕ್ಕಳು ಜನಿಸುವುದು ವಿರಳ: ಏಕಕಾಲಕ್ಕೆ ಎರಡು, ಮೂರು ಮಕ್ಕಳು ಜನಿಸುತ್ತವೆ. ಆದರೆ ನಾಲ್ಕು ಮಕ್ಕಳು ಜನಿಸುವುದು ತುಂಬಾ ವಿರಳ ಎನ್ನಬಹುದು. ಇನ್ನು ವೈದ್ಯಕೀಯ ಕ್ಷೇತ್ರದ ಪ್ರಕಾರ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ತುಂಬಾ ಅಪರೂಪ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ 4 ಮಕ್ಕಳಿಗೆ ಜನ್ಮ ನೀಡುವುದನ್ನು ಗಮನಿಸಬಹುದಾಗಿದೆ. ಇನ್ನು ನಾಲ್ಕು ಮಕ್ಕಳಾಗುವುದಕ್ಕೆ ಅನುವಂಶಿಯ ಅಂಶಗಳೇ ಕಾರಣ ಇರಬಹುದು ಎನ್ನಬಹುದು ಎಂದು ಅಂದಾಜಿಸಲಾಗಿದೆ.

English summary
A woman gave birth to 3 children at once in district hospital at Chitradurga. Doctors says three children and mother are stable condition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X