• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಳ್ಳಕೆರೆಯಲ್ಲಿ ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆ ಕೊಲೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಸೆಪ್ಟೆಂಬರ್ 9: ಸುತ್ತಿಗೆಯಿಂದ ಜಜ್ಜಿ ಅಪರಿಚಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಂಗಾರದೇವರಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಂಗಾರದೇವರಹಟ್ಟಿ ಸಮೀಪದ ಸರ್ಕಾರಿ ಜಾಗದಲ್ಲಿ ಶವ ಪತ್ತೆಯಾಗಿದೆ.

ಪಬ್ ಜಿ ಆಡದಂತೆ ಬುದ್ಧಿವಾದ ಹೇಳಿದ ತಂದೆಯ ಹತ್ಯೆ!

ಕೊಲೆಯಾದ ಮಹಿಳೆ ಕವಿತಾ ಬಾಯಿ (25) ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆಯಿಂದ ಬಂದಿದ್ದ ಈ ಮಹಿಳೆ ಕಲ್ಲಿನ ಕ್ವಾರಿಯಲ್ಲಿ ಕಲ್ಲು ಒಡೆಯುವ ಕೆಲಸ ಮಾಡುತ್ತಿದ್ದಳು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಜೊತೆಯಲ್ಲಿದ್ದವರೇ ಕೊಲೆ ಮಾಡಿ ಪರಾರಿಯಾಗಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಕೊಲೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಚಳ್ಳಕೆರೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣ ಮುಂದುವರಿದಿದೆ.

English summary
An incident of murdering an unknown woman with a hammer took place at Bangaradevarahatti village in Challakere taluk of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X