ಮೈದುನನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಮಹಿಳೆ
ಚಿತ್ರದುರ್ಗ, ಡಿಸೆಂಬರ್ 24: ಮೈದುನನ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜ್ಯೋತಿ (35) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು. ತನ್ನ ಮೈದುನ ಪ್ರಭು ತನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಭು, ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ ಅವರ ಕಾರು ಚಾಲಕನಾಗಿದ್ದು, ತನ್ನ ಅಣ್ಣ ಮಹಾಲಿಂಗಪ್ಪನ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಎಂದು ತಿಳಿದುಬಂದಿದೆ. ಈ ಕಾರಣಕ್ಕೇ ತಮ್ಮ ಕುಟುಂಬಕ್ಕೆ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications