Yediyurappa POCSO Case: ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಚಿತ್ರದುರ್ಗ, ಮಾರ್ಚ್, 15: ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೂ ಪ್ರಕರಣ ದಾಖಲಾದ ವಿಚಾರಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಗೃಹ ಸಚಿವರು ಇದನ್ನು ಜವಾಬ್ದಾರಿಯಿಂದ ತನಿಖೆ ಮಾಡಬೇಕು ಅಂತಾ ಹೇಳಿದ್ದಾರೆ ಅಂತಾ ಹೇಳಿದ್ದಾರೆ. ಹಾಗಾದರೆ ಈ ಬಗ್ಗೆ ಇನ್ನೇನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೂರು ಕೊಟ್ಟವರು ಈ ಹಿಂದೆ ಬೇರೆಯವರ ಮೇಲೆ ದೂರು ಕೊಟ್ಟಿದ್ದು, ಅವರ ಮಾನಸಿಕ ಅಸ್ವಸ್ಥತೆ ಕುರಿತು ವಿಚಾರಣೆ ಮಾಡೋದಾಗಿ ಹೇಳಿದ್ದಾರೆ. ಇನ್ನು ರಾಜಕಾರಣದಲ್ಲಿ ಹೆಸರಿಗೆ ಕಳಂಕ ತರುವುದಕ್ಕೆ ಪ್ರಯತ್ನ ಮಾಡುತ್ತಾರೆ. ಇದರಲ್ಲಿ ಯಾವುದೇ ಸದುದ್ದೇಶ ಇಲ್ಲ, ನನಗೆ ಗೊತ್ತಿದೆ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ. ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಸತ್ಯಕ್ಕೆ ಯಾವತ್ತಿದ್ದರೂ ಜಯವಾಗುತ್ತದೆ ಎಂದು ಹೇಳಿದ್ದಾರೆ.

ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದು, ಈ ವೇಳೆ ಅವರು ನಮಗೆ ಒಳ್ಳೆಯ ಕಾರ್ಯ ಮಾಡುವಂತೆ ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದರು. ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಆಗದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹಮಂತ್ರಿ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಬಾಕಿಯಿದೆ ಎಂದರು.
ನಾಳೆ, ನಾಡಿದ್ದು ಉಳಿದ ಕ್ಷೇತ್ರಗಳ ಹೆಸರು ಪ್ರಕಟಣೆ ಆಗುತ್ತವೆ. ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನೋ ವಿಚಾರ ಊಹಾಪೋಹವಾಗಿದೆ ಎಂದು ಹೇಳಿದರು. ಇನ್ನು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಸಭೆ ಕರೆದಿದ್ದಾರೆ. ಈಗಾಗಲೇ ನಾನು, ನಮ್ಮ ವರಿಷ್ಠರು ಅವರೊಂದಿಗೆ ಮಾತನಾಡಿದ್ದೇವೆ, ಎಲ್ಲಾ ಸರಿಹೋಗತ್ತದೆ ಎಂದರು.
ಉದಾಸಿ ಕೂಡ ನಮ್ಮ ಜೊತೆಗೆ ಬರುತ್ತಾರೆ. ನಾನು ಕಳೆದ 34 ವರ್ಷಗಳಿಂದ ರಾಜಕಾರಣದಲ್ಲಿದ್ದೀನಿ. ನನಗೆ ದೊಡ್ಡ ಪ್ರಮಾಣದ ಬೆಂಬಲಿಗರಿದ್ದಾರೆ. ಇನ್ನು ನಾವು ಎಲ್ಲಾ ನಿಷ್ಠಾವಂತರಿಗೆ ಟಿಕೆಟ್ ಕೊಟ್ಟಿದ್ದೀವಿ. ಟಿಕೆಟ್ ಸಿಗದ ಸಂಸದರು ನಿಷ್ಠಾವಂತರಲ್ಲ ಅಂತಾ ಪರೋಕ್ಷವಾಗಿ ಟಾಂಗ್ ಕೊಟ್ಟರು.











Click it and Unblock the Notifications