ಸರಿಯಾಗದ ಆರೋಗ್ಯ; ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟ ಮೊಳಕಾಲ್ಮೂರು ಯುವಕ
ಚಿತ್ರದುರ್ಗ, ಫೆಬ್ರವರಿ 03: ತನ್ನ ಅನಾರೋಗ್ಯದಿಂದಾಗಿ ಬೇಸತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದ ರೈಲು ನಿಲ್ದಾಣದ ಬಳಿ ನಡೆದಿದೆ.
ಮೊಳಕಾಲ್ಮೂರು ತಾಲೂಕಿನ ಕುರಾಕಲಹಟ್ಟಿ ಗ್ರಾಮದ ಉಮೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. ಉಮೇಶನಿಗೆ ಆರೋಗ್ಯ ಸರಿ ಇಲ್ಲದ ಕಾರಣ ಆಗಾಗ ಚಿಕಿತ್ಸೆ ಪಡೆಯುತಿದ್ದ. ಎಷ್ಟೇ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ.

ಹೀಗಾಗಿ ಉಮೇಶ್ ಮನನೊಂದು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೊಳಕಾಲ್ಮೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications