Dasarahalli Karnataka Elections 2023: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಪರಿಚಯ
ಮುಂಬರುವ ಸಾರ್ವತ್ರಿಕ ಚುನಾವಣಾ ಸಮರಕ್ಕೆ ಸಜ್ಜಾಗಿರುವ ದಾಸರಹಳ್ಳಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಮಂಜುನಾಥ್ ಜಯ ಗಳಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಎಸ್ ಮುನಿರಾಜು 10675 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ದಾಸರಹಳ್ಳಿ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ದಕ್ಷಿಣ ಏಷ್ಯಾದಲ್ಲಿಯೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶವನ್ನು ಒಳಗೊಂಡಿರುವ ಕ್ಷೇತ್ರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ. ಅಸಂಖ್ಯಾತ ಜನರಿಗೆ ಉದ್ಯೋಗ ಕೊಟ್ಟಿರುವ ಕೈಗಾರಿಕಾ ಪ್ರದೇಶ, ಹತ್ತು ಹಲವು ಸಮಸ್ಯೆಗಳನ್ನು ಹೊತ್ತಿದೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಗನ್ ಮ್ಯಾನ್ ಆಗಿದ್ದ ಮಂಜುನಾಥ್ 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಬಹುಮತದಿಂದ ಜಯ ಸಾಧಿಸಿದರು. ಈ ಹಿಂದೆ ಎರಡು ಬಾರಿ ಬಿಜೆಪಿಯಿಂದ ಗೆದ್ದಿದ್ದ ಮುನಿರಾಜು ಅವರ ಹ್ಯಾಟ್ರಿಕ್ ಗೆಲುವಿನ ಕನಸನ್ನು ಭಗ್ನಗೊಳಿಸಿದ್ದರು. ಇವರು ಸರಳ ವ್ಯಕ್ತಿತ್ವ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎನ್ನುವುದು ಜನರ ಅಭಿಪ್ರಾಯ. ವಿಧಾನಸಭೆಯಲ್ಲಿ ಕ್ಷೇತ್ರದ ಸಮಸ್ಯೆ ಹೇಳಿಕೊಳ್ಳುತ್ತಾರೆ ಎನ್ನುವುದು ಸ್ಥಳೀಯರ ನಂಬಿಕೆ. ಆದರೆ ಮಾಜಿ ಶಾಸಕ ಮುನಿರಾಜು ಅವರು ಸೋತ ಮೇಲೆ ಕ್ಷೇತ್ರದಲ್ಲಿ ಕಾಣಿಸಿಕೊಂಡಿಲ್ಲ ಎನ್ನಲಾಗಿದೆ. ಸೋತ ಮೇಲೆ ಕ್ಷೇತ್ರವನ್ನೇ ಮರೆತಂತಿದ್ದಾರೆ ಅಂತ ವಿರೋಧಿಗಳ ಆರೋಪ.
ರಾಜಕೀಯ ಇತಿಹಾಸ
ಕ್ಷೇತ್ರ ಪುನರ್ ವಿಂಗಡಣೆಯಾದ ಬಳಿಕ 2008ರಲ್ಲಿ ಈ ಕ್ಷೇತ್ರದಲ್ಲಿ ಮೊದಲ ಬಾರಿ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಅವರು 2008ರಲ್ಲಿ ಈ ಕ್ಷೇತ್ರದಲ್ಲಿ ಮೊದಲ ಬಾರಿ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಅವರು 2008 ಮತ್ತು 2013ರಲ್ಲಿ ಎರಡು ಬಾರಿ ಗೆದ್ದಿದ್ದರು. 2008ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೆ.ಸಿ. ಅಶೋಕ್ ಅವರನ್ನು ಸೋಲಿಸಿದ್ದ ಮುನಿರಾಜು ಅವರು 2013ರಲ್ಲಿ ವಿಧಾಸಪರಿಷತ್‌ನ ಮಾಜಿ ಸಭಾಪತಿ, ಸಂಸದೀಯ ಪಟು ಬಿ.ಎಲ್ ಶಂಕರ್ ಅವರನ್ನು ಪರಾಭವಗೊಳಿಸಿದ್ದರು. ಆದರೆ, 2008ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಆರ್. ಮಂಜುನಾಥ್ ವಿರುದ್ಧ ಸುಮಾರು ಹತ್ತು ಸಾವಿರ ಮತಗಳ ಅಂತರದಿಂದ ಬಿಜೆಪಿಯ ಮುನಿರಾಜು ಸೋಲು ಕಂಡರು. ಇದರಿಂದ ಅವರ ಹ್ಯಾಟ್ರಿಕ್ ಕನಸು ಭಗ್ನಗೊಂಡಿತ್ತು. ಈ ಬಾರಿಯೂ ಚುನಾವಣಾ ಅಖಾಡಕ್ಕಿಳಿಯಲು ರೆಡಿಯಾಗುತ್ತಿರುವ ಮುನಿರಾಜು, ಕ್ಷೇತ್ರದಲ್ಲಿ ಸುತ್ತುತ್ತಿದ್ದಾರೆ.
Dasarahalli Karnataka Elections
| ವರ್ಷ | ಗೆದ್ದವರು | ಮತಗಳು | ಸೋತವರು | ಮತಗಳು |
| 2008 | ಎಸ್.ಮುನಿರಾಜು(ಬಿಜೆಪಿ) | 59,004 | ಕೆ.ಸಿ.ಅಶೋಕ(ಕಾಂಗ್ರೆಸ್) | 36,849 |
| 2013 | ಎಸ್.ಮುನಿರಾಜು(ಬಿಜೆಪಿ) | 57,562 | ಕೆ.ಸಿ.ಅಶೋಕ(ಕಾಂಗ್ರೆಸ್) | 46,734 |
| 2018 | ಮಂಜುನಾಥ್(ಜೆಡಿಎಸ್) | 94,044 | ಎಸ್.ಮುನಿರಾಜು(ಬಿಜೆಪಿ) | 83,369 |
ದಾಸರಹಳ್ಳಿ ಕ್ಷೇತ್ರದಲ್ಲಿ 2008ರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ನಡೆದಿತ್ತು. 2013ರಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ 2018ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆದಿತ್ತು.

ಈ ಬಾರಿ ಟಿಕೆಟ್ ಯಾರಿಗೆ?
ಈ ಬಾರಿ ಜೆಡಿಎಸ್‌ನಿಂದ ಹಾಲಿ ಶಾಸಕ ಮಂಜುನಾಥ್ ಅವರೇ ಟಿಕೆಟ್ ಬಯಸಿದ್ದಾರೆ. ಈಗಾಗಲೇ ಎರಡು ಬಾರಿ ಗೆದ್ದು, ಒಂದು ಬಾರಿ ಸೋತಿರುವ ಮುನಿರಾಜು ಮತ್ತೊಮ್ಮೆ ಬಿಜೆಪಿ ಟಿಕೆಟ್ ಬಯಸುತ್ತಿದ್ದಾರೆ. ಅತ್ತ ಕಾಂಗ್ರೆಸ್‌ನಲ್ಲಿ ಪೈಪೋಟಿ ಜೋರಾಗಿದೆ. ಈ ಹಿಂದೆ ಪರಾಭವಗೊಂಡಿದ್ದ ಕಾಂಗ್ರೆಸ್ ಮುಖಂಡ ಪಿಎನ್ ಕೃಷ್ಣಮೂರ್ತಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ತಯಾರಾಗಿದ್ದಾರೆ. ಮತ್ತೊಂದೆಡೆ ಗೀತಾ ಶಿವರಾಮ್ ಎಂಬುವರು ಟಿಕೆಟ್ ಬಯಸಿದ್ದು, ಈಗಾಗಲೇ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ.
ಮತದಾರರ ಸಂಖ್ಯೆ
ದಾಸರಹಳ್ಳಿಯಲ್ಲಿ ಒಟ್ಟು 4,37,077 ಮತದಾರರಿದ್ದಾರೆ. ಈ ಪೈಕಿ 1,70,000 ಜನ ಒಕ್ಕಲಿಗರು ಇದ್ದರೆ 43,000 ಜನ ಲಿಂಗಾಯತರು, 90,000 ಜನ ಎಸ್‌ಸಿ-ಎಸ್‌ಟಿ, 25,000 ಬ್ರಾಹ್ಮಣರು, ಒಬಿಸಿ 80,000 ಹಾಗೂ ಇತರೇ 29,000 ಮತದಾರರಿದ್ದಾರೆ.ನಾಲ್ಕನೇ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಮೂರು ಪಕ್ಷಗಳು ಬಲ ಪ್ರದರ್ಶನಕ್ಕೆ ಸಜ್ಜಾಗುತ್ತಿದ್ದು, ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್ ಸಹ ತನ್ನ ಮತ ಬ್ಯಾಂಕ್ ಬಲಪಡಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ನೇರ ನೇರ ಹಣಾಹಣಿಯೇ ಅಥವಾ ತ್ರಿಕೋನ ಸ್ಪರ್ಧೆ ಏರ್ಪಡುವುದೇ ಎಂಬುದು ಕಾದು ನೋಡಬೇಕಿದೆ.

ದಾಸರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಮಸ್ಯೆಗಳು
ದಾಸರಹಳ್ಳಿ ಉದ್ಯೋಗವನ್ನರಸಿ ಪರ ಊರುಗಳೀಮದ ಬಂದಂತಹ ಬಡ ಮತ್ತು ಮಧ್ಯಮ ವರ್ಗದ ವಲಸಿಗರಿಂದಲೇ ತುಂಬಿ ತುಳುಕುವ ಕ್ಷೇತ್ರ. ಬಿಬಿಎಂಪಿಗೆ ಸೇರ್ಪಡೆಗೊಂಡ ನಂತರ ಕ್ಷೇತ್ರದ ಚಿತ್ರಣ ಬದಲಾದರೂ ಜನರ ನಿರೀಕ್ಷೆಗಳು ಮಾತ್ರ ಇನ್ನೂ ಬೆಟ್ಟದಷ್ಟಿದೆ. ಹೆಚ್ಚಿನ ಜನರಿಗೆ ಉದ್ಯೋಗ ನೀಡಿ, ರಾಜಧಾನಿಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ ದಾಸರಹಳ್ಳಿಯಲ್ಲಿ ಅನೇಕ ಸಮಸ್ಯೆಗಳು ಇವೆ. ಕ್ಷೇತ್ರದಲ್ಲಿ ರಸ್ತೆ, ಬಳಖ ಮುಖ್ಯವಾಗಿ ಸಂಚಾರ ದಟ್ಟಣೆ ಹೆಚ್ಚಿದೆ. ಕುಡಿಯುವ ನೀರಿನ ಸಮಸ್ಯೆಗಳು, ಒಳಚರಂಡಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಕೈಗಾರಿಕಾ ಪ್ರದೇಶವಾಗಿರುವುದರಿಂದ ವಾಹನಗಳ ಸಂಚಾರ ದಟ್ಟವಾಗಿರುತ್ತದೆ. ಇದರಿಂದ ಸಂಚಾರ ಸಮಸ್ಯೆ ಹೆಚ್ಚಿದೆ. ಹೀಗಾಗಿ ಕ್ಷೇತ್ರಕ್ಕೆ ಬೇಕಾದ ಅನುದಾನ ಸಿಕ್ಕಿಲ್ಲ ಎನ್ನುವುದು ಹಲವರ ಆರೋಪವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಎಚ್.ಡಿ ಕುಮಾರಸ್ವಾಮಿ ದಾಸರಹಳ್ಳಿ ಕ್ಷೇತ್ರಕ್ಕೆ ಸುಮಾರು 700 ಕೋಟಿ ರೂ. ಅನುದಾನ ನೀಡಿದ್ದರು. ನಂತರ ಬಂದ ಬಿಜೆಪಿ ಸರ್ಕಾರ ಅನುದಾನವನ್ನು ತಡೆ ಹಿಡಿದಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications