ದಾವಣಗೆರೆಯಲ್ಲಿ ಮತ್ತೆ 2 ಕೇಸ್; ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆ
ದಾವಣಗೆರೆ, ಮೇ 13: ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಇಂದು ಕೂಡ 2 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಇಂದು 2 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಪಿ-695 ಪಾಸಿಟಿವ್ ಪ್ರಕರಣದಿಂದಲೇ 33 ವರ್ಷದ ಮಹಿಳೆ ಹಾಗೂ 11 ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ನಿನ್ನೆ ಸೋಂಕಿತರ ಸಂಖ್ಯೆ 83 ಆಗಿತ್ತು. ಜಾಲಿನಗರದಲ್ಲಿಯೇ ಸೋಂಕಿತರ ಸಂಖ್ಯೆ 49 ಆಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗುಣಮುಖರಾಗಿದ್ದಾರೆ. 79 ಪಾಸಿಟಿವ್ ಕೇಸ್ ಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ. ಕಂಟೈಮೆಂಟ್ ಜೋನ್ ನಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ.











Click it and Unblock the Notifications