2018ರ ಚುನಾವಣೆ: ಜನವರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ

Posted By:
Subscribe to Oneindia Kannada

ದಾವಣಗೆರೆ, ನವೆಂಬರ್ 18: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಕಾರ್ಯ ಚಟುವಟಿಕೆಗಳು ಬಿರುಸುಗೊಂಡಿವೆ.

ಸಿ ಫೋರ್ ಸಮೀಕ್ಷೆ : ಸಿದ್ದರಾಮಯ್ಯ -ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ಬಹುಮತ

ಅಂದ ಹಾಗೆ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿಯಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

2018 assembly election: Congress candidates list will be released in january says Siddaramaiah

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಏಪ್ರಿಲ್, ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಜನವರಿಯಲ್ಲಿ ನಮ್ಮ ಅಭ್ಯರ್ಥಿಗಳ ಪಟ್ಟಿ ಘೋಷಿಸಿ, ಫೆಬ್ರುವರಿನಲ್ಲಿ ರಾಜ್ಯ ಬಜೆಟ್ ಮಂಡಿಸಲಿದ್ದೇನೆ" ಎಂದು ಹೇಳಿದರು.

ಬಿಜೆಪಿ ಅತ್ಯಂತ ದುರ್ಬಲ ಪಕ್ಷ, ಅವರಲ್ಲಿ ಅಭ್ಯರ್ಥಿಗಳೆ ಸಿಗುತ್ತಿಲ್ಲ. ಕಾಂಗ್ರೆಸ್ 224 ಅಲ್ಲ 480 ಅಭ್ಯರ್ಥಿಗಳನ್ನು ಹುಡುಕಲು ಸಿದ್ಧ. ಬಿಜೆಪಿ ಪರಿವರ್ತನಾ ಯಾತ್ರೆ ಅಟ್ಟರ್ ಪ್ಲಾಪ್ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka assembly elections 2018 : Congress candidates list will be released in january and present budget in february said Chief Minister Siddaramaiah in Channagiri, Davanagere ditrict on November 18.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ