ದಾವಣಗೆರೆ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 3.98 ಲಕ್ಷ ಹಣ ಮತ್ತು 21 ಮೊಬೈಲ್ ಫೋನ್ ವಶ
ದಾವಣಗೆರೆ, ಮಾರ್ಚ್, 20: ಲೋಕಸಭಾ ಚುನಾವಣೆ ಹಿನ್ನೆಲೆ ಈ ಸಮಯದಲ್ಲೇ ಹೆಚ್ಚಾಗಿ ಹಣ ಸಾಗಿಸುವುದು ಸೇರಿದಂತೆ ಇನ್ನಿತರ ಪ್ರಕ್ರಿಯಗಳು ನಡೆಯುತ್ತಿರುತ್ತವೆ. ಆದ್ದರಿಂದ ಪೊಲೀಸರು ಇಂತಹ ಕತರ್ನಾಕ್ ಕೆಲಸ ನಡೆಯುತ್ತವೆ ಅಂತಲೇ ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ ಬರುವ ವಾಹನಗಳ ಮೇಲೆ ನೀಗಾ ಇಟ್ಟಿದ್ದಾರೆ. ಇದೀಗ ಇಂದು (ಮಾರ್ಚ್ 20) ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್‌ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 3.98 ಲಕ್ಷ ಹಣ ಮತ್ತು 21 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 3.98 ಲಕ್ಷ ನಗದು ಮತ್ತು 21 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಡಿವಿಜಿ ಸುದ್ದಿ ವರದಿ ಮಾಡಿದೆ. ಇನ್ನು ಈ ಕುರಿತು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಮಾಹಿತಿ ನೀಡಿದ್ದಾರೆ ಅಂತಾ ವರದಿ ಮಾಡಿದೆ.

ದಾಖಲೆ ಇಲ್ಲದ ಹಣ ವಶ: ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 1 ಲಕ್ಷ ರೂಪಾಯಿ ಹಣವನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ದಾಸನಪುರ ಚೆಕ್ ಪೋಸ್ಟ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದಾಸನಪುರ ಚೆಕ್ ಪೋಸ್ಟ್‌ನಲ್ಲಿ ಬೆಂಗಳೂರಿನಿಂದ ಕೊಳ್ಳೇಗಾಲದ ಕಡೆ ಬರುತ್ತಿದ್ದ ಕಾರನ್ನು (KA-51-MW-330) ತಪಾಸಣೆ ಮಾಡಿದ ವೇಳೆ ದಾಖಲೆ ಇಲ್ಲದೆ 1 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಇನ್ನು ಈ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.












Click it and Unblock the Notifications