ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಏಳು ವರ್ಷ ಶಿಕ್ಷೆ

Posted By:
Subscribe to Oneindia Kannada

ದಾವಣಗೆರೆ, ಸೆಪ್ಟೆಂಬರ್ 8: ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವ ಉದ್ದೇಶದಿಂದ ಅಪಹರಿಸಿ, ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ ಮೂವತ್ತು ಸಾವಿರ ರುಪಾಯಿ ದಂಡ ವಿಧಿಸಿ ಬುಧವಾರ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಲ್ಲಿನ ಎರಡನೇ ಹೆಚ್ಚುವರಿ ಸೆಷನ್ಸ್ ಮತ್ತು ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ ಅಡಿ ಈ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಜಾಗೃತ ಮಹಿಳಾ ಸಂಘದ ಆಪ್ತ ಸಮಾಲೋಚಕ ಗೋವಿಂದರಾಜು ಅವರು ಬಾಲಕಿ ಅಪಹರಣದ ಬಗ್ಗೆ 2014 ರ ಅಕ್ಟೋಬರ್ 23ರಂದು ದೂರು ದಾಖಲಿಸಿದ್ದರು. ಬೆಂಗಳೂರಿನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು ನಗರಕ್ಕೆ ವಾಪಸ್ ಕರೆತಂದಿದ್ದರು.[ಚಿರತೆಗೆ ವಿಷಪ್ರಾಶನ: ಇಬ್ಬರು ಆರೋಪಿಗಳ ಬಂಧನ]

7 years imprisonment in sexual harrasment case

ಆರೋಪಿಯು ನನಗೆ ಲೈಂಗಿಕ ದೌರ್ಜನ್ಯ ನೀಡಿದ ಎಂದು ಬಾಲಕಿ ಹೇಳಿಕೆ ನೀಡಿದ್ದಳು. ಅದರ ಆಧಾರದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಅರ್ಜುಮನ್ ಬಾನು ಆರೋಪಿಯ ವಿರುದ್ಧ ಬಾಲಕಿ ಅಪಹರಣ ಹಾಗೂ ಪೋಕ್ಸೊ ಕಾಯ್ದೆಯಡಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು, ಅಪಹರಣ ಪ್ರಕರಣದಲ್ಲಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ, ಹತ್ತು ಸಾವಿರ ರುಪಾಯಿ ದಂಡ ಹಾಗೂ ಪೋಕ್ಸೋ ಕಾಯ್ದೆಯಡಿ ಒಟ್ಟಾರೆ ಏಳು ವರ್ಷ ಶಿಕ್ಷೆ, ಇಪ್ಪತ್ತು ಸಾವಿರ ರುಪಾಯಿ ದಂಡ ವಿಧಿಸಿದರು.

ದಂಡದ ಮೊತ್ತದಲ್ಲಿ ಸಂತ್ರಸ್ತ ಬಾಲಕಿಗೆ ಇಪ್ಪತ್ತೈದು ಸಾವಿರ ರುಪಾಯಿ ಪರಿಹಾರ ನೀಡುವಂತೆ ಆದೇಶಿಸಲಾಯಿತು.

Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ

ಇಬ್ಬರ ಸಾವು: ಮನೆಯ ಅಂಗಳದಲ್ಲಿ ಕುಡಿಯುವ ನೀರಿನ ತೊಟ್ಟಿಯ ಸೆಂಟ್ರಿಂಗ್ ತೆಗೆಯುವಾಗ ಇಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥರಾದ ಘಟನೆ ದಾವಣಗೆರೆಯ ಶಿವಕುಮಾರಸ್ವಾಮಿ ಲೇಔಟ್ ನಲ್ಲಿ ಬುಧವಾರ ಸಂಭವಿಸಿದೆ.[ಬೆಳಗಾವಿ ಯುವತಿ ಮೇಲೆ ಎರಡು ತಿಂಗಳು ಅತ್ಯಾಚಾರ]

ಕುಂದವಾಡದ ರಾಜೇಂದ್ರ, ಚಂದ್ರಪ್ಪ, ರಾಜೇಂದ್ರ ಮೃತಪಟ್ಟವರು. ರಾಜೇಂದ್ರ ಬಡಾವಣೆಯ ಶಿವಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಟಿಜೆ ನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
7 years imprisonment and 30 thosand fine to a person who booked in sexual harrasment case, under pocso act in Davanagere. Two people died in a building under construction in Shivakumar layout.
Please Wait while comments are loading...