• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿಗೆ ಬಲಿಯಾದ 8 ತಿಂಗಳ ಗರ್ಭಿಣಿ ಪೊಲೀಸ್ ಪೇದೆ!

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 8: ಕೊರೊನಾ ಸೋಂಕಿಗೆ ತುತ್ತಾಗಿದ್ದ 8 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಮಂಗಳವಾರ ಶಿವಮೊಗ್ಗದ ನಾರಾಯಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಿಪಿಐ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಪೇದೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹದಿನೈದು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳಾ ಪೇದೆ ಗರ್ಭಿಣಿಯಾಗಿದ್ದ ಕಾರಣ ತೀವ್ರ ಅಸ್ವಸ್ಥಗೊಂಡಿದ್ದರು.

8 ತಿಂಗಳ ಗರ್ಭಿಣಿ ಪೇದೆಗೆ ಕಳೆದ ಹದಿನೈದು ದಿನಗಳಿಂದಲೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ ಮಾಡಲಾಗಿತ್ತು.

Recommended Video

   ದಕ್ಷಿಣ ಆಫ್ರಿಕಾದ ನ್ಯಾಯಾಲಯದಿಂದ 7 ವರ್ಷ ಶಿಕ್ಷೆ! | Oneindia Kannada

   ಆದರೆ, ಮಹಿಳಾ ಪೇದೆಗೆ ಚಿಕಿತ್ಸೆ ಫಲಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಎರಡನೇ ಅಲೆ ಆರಂಭವಾದ ಬಳಿಕ ದಾವಣಗೆರೆ ಜಿಲ್ಲೆಯ ಪೊಲೀಸ್ ಇಲಾಖೆಯ ಸಿಬ್ಬಂದಿಯ ಮೊದಲ ಬಲಿಯಾದಂತಾಗಿದೆ. ಇನ್ನು ಮಹಿಳಾ ಪೇದೆ ಸಾವಿಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಕಂಬನಿ‌ ಮಿಡಿದಿದ್ದಾರೆ.

   English summary
   An 8-month-old pregnant woman police constable who was infected with covid-19 dies at Narayana Hospital in Shivamogga on Tuesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X