ಹಿಂದೂಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದವನ ಗತಿ ಏನಾಯ್ತು ಗೊತ್ತಾ?
ದಾವಣಗೆರೆ, ಅಕ್ಟೋಬರ್ 20: ಇತ್ತೀಚಿನ ದಿನಗಳಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಲಿವೆ. ಈ ನಡುವೆಯೇ ಮುಸ್ಲಿಂ ವ್ಯಕ್ತಯೋರ್ವ ಹಿಂದೂಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಹಾಗಾದ್ರೆ, ಎಲ್ಲಿ ಹಾಗೂ ವಿಡಿಯೋದಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮೊಹ್ಮದ್ ಖಾಲೀದ್ (50) ಎಂಬ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ಹಿಂದೂಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ ಎಂದು ಧಮ್ಕಿ ಹಾಕಿದ್ದಾನೆ. ಈ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವನಾಗಿದ್ದು, ಸಾರ್ವಜನಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಈ ವ್ಯಕ್ತ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನು ಗಮನಿಸಿದ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆತನ ಕುಟುಂಬದ ಪ್ರಕಾರ, ಖಾಲೀದ್ ಮಾನಸಿಕ ಅಸ್ವಸ್ಥನಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ: ಇನ್ನೂ ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ, ಭ್ರಷ್ಠ ಹಾಗೂ ಅಭಿವೃದ್ದಿ ಶೂನ್ಯ ಸರ್ಕಾರವಾಗಿದೆ. ಒಂದು ರೀತಿಯಲ್ಲಿ ತೋಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹೊನ್ನಾಳಿ ತಾಲೂಕಿನಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವೆಉ, ರಾಷ್ಟ್ರೀಯ ಸಂಘ ಪರಿವಾರ ರಾಷ್ಟ್ರಮಟ್ಟದ ಸಂಸ್ಥೆ ಹಾಗೂ ರಾಷ್ಠ್ರಭಕ್ತರ ಸಂಘ ಆಗಿದೆ. ಇದರ ಸ್ವಯಂ ಸೇವಕರು ತಮ್ಮ ಹಿತಾಸಕ್ತಿ ಮರೆತು ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ ಜನರ ಹಿತಕ್ಕಾಗಿ ನಿಸ್ವಾರ್ಥ ಸೇವೆ ಮಾಡುವ ಸಂಘವಾಗಿದೆ ಎಂದು ಹೇಳಿದರು.
ಆದರೆ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆಯವರು ತಾನು ಕಾಂಗ್ರೆಸ್ ಪಕ್ಷದ ವರಿಷ್ಠ ಮಲ್ಲಿಕಾರ್ಜನ ಖರ್ಗೆಯವರ ಮಗ ಎಂಬ ಕಾರಣಕ್ಕೆ ರಾಜ್ಯದಲ್ಲಿ ಒಂದು ರೀತಿಯ ಸೂಪರ್ ಸಿಎಂನಂತೆ ವರ್ತಿಸುತ್ತ ಆರ್‌ಎಸ್‌ಎಸ್ ಬಗ್ಗೆ ಏನೇನೋ ಮಾತನಾಡುತ್ತಿದ್ಧಾರೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪೂರ್ವಾನುಮತಿ ಪಡೆದಿದ್ದರೂ ಸಹ ರಾತ್ರೋರಾತ್ರಿ ಆರ್‌ಎಸ್‌ಎಸ್‌ನ ಬಂಟಿಂಗ್ಸ್, ಭಗವಾಧ್ವಜ, ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರುವುಗೊಳಿಸಿದ್ದಾರೆ. ಇದು ನಿಮಗೆ ಹಾಗೂ ನಿಮ್ಮ ಸರ್ಕಾರಕ್ಕೆ ಶೋಭೆತರುವ ಕೆಲಸವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾರನ್ನ ಓಲೈಸುವ ಕೆಲಸ ಮಾಡುತ್ತಾ, ವೋಟ್ ಬ್ಯಾಂಕ್ ರಾಜಕಾರಣವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಈ ಮೂಲಕ ಹಿಂದೂ ಮತ್ತು ಹಿಂದುಪರ ಸಂಘಟನೆಗಳ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ, ಅವರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.












Click it and Unblock the Notifications