ಗೆಲುವು ಶಾಶ್ವತವಲ್ಲ, ಸೋಲು ಅಂತ್ಯವಲ್ಲ: ದಾವಣಗೆರೆಯಲ್ಲಿ ಬಿಜೆಪಿ ಆತ್ಮಾವಲೋಕನ ಸಭೆ
ದಾವಣಗೆರೆ, ಮೇ 24: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲ ಅನುಭವಿಸಿದೆ. ದಾವಣಗೆರೆ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಗೆದ್ದಿದೆ. ಅದೂ ಕಡಿಮೆ ಅಂತರದಲ್ಲಿ. ಹರಿಹರ ಹೊರತುಪಡಿಸಿ, ಉಳಿದ ಕಡೆಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು, ಬಿಜೆಪಿ ನಾಯಕರು ಈಗ ಆತ್ಮಾವಲೋಕನ ಮಾಡಿಕೊಳ್ಳಲು ಶುರು ಮಾಡಿದ್ದಾರೆ.
ದಾವಣಗೆರೆಯಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು ಸೋಲಿಗೆ ಏನು ಕಾರಣ ಎಂಬ ಕುರಿತಂತೆ ಎಲ್ಲರ ಅಭಿಪ್ರಾಯ ಪಡೆಯುವ ಪ್ರಯತ್ನ ಮಾಡಿದ್ದಾರೆ. ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ.

ಎರಡೂ ಕ್ಷೇತ್ರಗಳಲ್ಲಿಯೂ 24 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋತಿದೆ. 2018ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಎಸ್. ಎ. ರವೀಂದ್ರನಾಥ್ ಗೆಲುವಿನ ನಗೆ ಬೀರಿದ್ದರು. ಆದ್ರೆ. ಈ ಬಾರಿ ಕ್ಷೇತ್ರ ಕಳೆದುಕೊಳ್ಳಲು ಕಾರಣಗಳು ಏನು ಎಂಬ ಕುರಿತಂತೆ ಚಿಂತನ - ಮಂಥನ ನಡೆಯಿತು.
ಕಳೆದ ಎರಡು ದಿನಗಳ ಹಿಂದೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸೋಲಿನ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾದವು. ಬಿಜೆಪಿ ರಾಜ್ಯ ನಾಯಕರ ಕೆಲ ನಿರ್ಧಾರಗಳು ಸೋಲಿಗೆ ಕಾರಣವಾದರೆ, ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್, ಪದವೀಧರರು, ಡಿಪ್ಲೋಮೋ ಪದವೀಧರರಿಗೆ ಸಹಾಯ ಧನ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೇರಿದಂತೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳು ಕಾಂಗ್ರೆಸ್‌ಗೆ ವರವಾದವು.

ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಮತಗಳು ಜಾಸ್ತಿ ಇವೆ. ಈ ಸಮುದಾಯವು ಮೊದಲಿನಿಂದಲೂ ಕಾಂಗ್ರೆಸ್ ಅನ್ನು ಬೆಂಬಲಿಸಿಕೊಂಡು ಬಂದಿದೆ. ಈ ಬಾರಿಯೂ ಕೈ ಹಿಡಿದಿದೆ. ಮುಸ್ಲಿಂರ ಮೀಸಲಾತಿ ರದ್ದು ಸೇರಿದಂತೆ ಕೆಲ ನಿರ್ಧಾರಗಳು ನಮಗೆ ಮುಳುವಾದವು. ಈ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯ ನಾಯಕರ ಪ್ರಚಾರದ ಕೊರತೆಯೂ ಪರಾಜಯಕ್ಕೆ ಕಾರಣವಾಗಿದೆ ಎಂದು ಕೆಲ ಕಾರ್ಯಕರ್ತರು ಅಭಿಪ್ರಾಯಪಟ್ಟರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಮತಗಳು ಬಂದಿವೆ. ನಮಗೆ ಬಂದಿರುವುದು ಕಡಿಮೆ. 2018ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಗ್ರಾಮೀಣ ಭಾಗದಲ್ಲಿ ಬಂದಿದ್ದವು. ಆದರೆ, ಈ ಬಾರಿ ಕಡಿಮೆ ಆಗಿದೆ. ಇದೂ ಸಹ ಬಿಜೆಪಿ ಹಿನ್ನೆಡೆಗೆ ಕಾರಣ ಎಂದು ವಿಚಾರ ಮಂಡಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿಯೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿನ ಸೋಲಿನ ಕುರಿತಂತೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಬಿಜೆಪಿ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಅವರು, ಗೆಲುವು ಶಾಶ್ವತವಲ್ಲ, ಸೋಲು ಅಂತ್ಯವಲ್ಲ. ಆದರೆ ನಾವು ಮಾಡುವ ಜನಪರ ಕಾರ್ಯಕ್ರಮಗಳು ಮಾತ್ರ ಎಂದಿಗೂ ಶಾಶ್ವತವಾಗಿ ಉಳಿಯುತ್ತವೆ ಎಂದು ಹೇಳಿದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸೋಣ ಎಂಬ ಸಂಕಲ್ಪದೊಂದಿಗೆ ಕಾರ್ಯಕರ್ತರ ಆತ್ಮಾವಲೋಕನ ಸಭೆ ನಡೆಸಲಾಗಿದೆ.
ಈ ಬಾರಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಹೋದ ಕಡೆಗಳೆಲೆಲ್ಲಾ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ವಾರ್ಡ್ ಗಳಲ್ಲಿ ಮುನ್ನಡೆ ದೊರೆತಿದೆ. ಈ ಭಾಗದ ಜನರು ಬಿಜೆಪಿ ಜೊತೆ ಇದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿಗಳು, ಹಣ ಹಂಚಿದ್ದು, ಮೀಸಲಾತಿ ಗೊಂದಲ ಸೇರಿದಂತೆ ಕೆಲ ನಿರ್ಧಾರಗಳೇ ಪಕ್ಷಕ್ಕೆ ಮುಳುವಾದವು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ ಎಂದರು.
ಮಾಜಿ ಶಾಸಕ ಎಸ್. ಎ. ರವೀಂದ್ರನಾಥ್ ಮಾತನಾಡಿ, ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸೋತಿರುವ ಕಾರಣಕ್ಕೆ ಧೃತಿಗೆಡುವುದು ಬೇಡ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ. ಎಸ್. ಜಗದೀಶ್, ಬಸವರಾಜ್ ಪಿ.ಎಸ್., ಹನುಮಂತಪ್ಪ, ಹೆಚ್. ಎನ್. ಶಿವಕುಮಾರ್, ಪಕ್ಷದ ಪ್ರಮುಖರು , ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications