• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿ.5ರಂದು ಬಂದ್‌ಗೆ ಕರೆ; ಅಖಿಲ ಭಾರತ ಹಿಂದೂ ಮಹಾಸಭಾ ಬೆಂಬಲ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ನವೆಂಬರ್ 19: ವೀರಶೈವ- ಲಿಂಗಾಯತ, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ರಂದು ಕರೆ ನೀಡಲಾಗಿರುವ ಬಂದ್‌ಗೆ ಅಖಿಲ ಭಾರತ ಹಿಂದೂ ಮಹಾಸಭಾ ಬೆಂಬಲ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಸಂಘದ ಕಾರ್ಯಾಧ್ಯಕ್ಷ ರಾಜೇಶ್ ಪವಿತ್ರನ್, ರಾಜ್ಯ ಬಿಜೆಪಿ ಸರ್ಕಾರ ಹಿಂದೂ ಧರ್ಮವನ್ನು ಜಾತಿಯ ಹೆಸರಿನಲ್ಲಿ ಒಡೆದು ಆಳುವ ಪಿತೂರಿ ನಡೆಸುತ್ತಿದೆ. ಇದಕ್ಕೆ ಮಹಾಸಭಾ ಅವಕಾಶ ನೀಡುವುದಿಲ್ಲ. ಆಡಳಿತ ಸರ್ಕಾರ ಹಿಂದೂ ಧರ್ಮದ ವಿಭಜನೆ ಹಾಗೂ ಮುಸ್ಲಿಮರ ಓಲೈಕೆ ಮಾಡುತ್ತಿರುವುದು ಖಂಡನೀಯ. ಈ ನೀತಿಗಳು ಬ್ರಿಟಿಷ್ ಹಾಗೂ ಮೊಘಲರಿಗಿಂತ ಅಪಾಯಕಾರಿಯಾಗಿದೆ. ಕೇವಲ ಅಧಿಕಾರದ ಲಾಲಸೆಯಿಂದ ಜಾತಿಗಳ ಮಧ್ಯೆ ವೈಷಮ್ಯ ತಂದಿಟ್ಟು ಸನಾತನ ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಿಸಿ ಸಂಭ್ರಮಾಚರಣೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಿಸಿ ಸಂಭ್ರಮಾಚರಣೆ

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ನಿಗಮ ರಚಿಸಿ ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸುವುದನ್ನು ಬಿಟ್ಟು ಜಾತಿಯ ಆಧಾರದಲ್ಲಿ ಈ ನಿಗಮಗಳನ್ನು ರಚನೆ ಮಾಡಿರುವುದು ಧರ್ಮ ದ್ರೋಹಕ್ಕೆ ಹಿಡಿದ ಕನ್ನಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

   Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

   ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಡಿ.5 ರಂದು ಕರೆ ನೀಡಲಾಗಿರುವ ಬಂದ್ ಗೆ ಹಿಂದೂ ಮಹಾಸಭಾ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿದೆ ಎಂದರು.

   English summary
   Davanagete Akhila Bharata Hindu Mahasabha supported bandh which was planned to held on dec 5 opposing veerashaiva lingayat development board formation,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X