ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಅಗತ್ಯ ವಸ್ತುಗಳ ಖರೀದಿಗೆ 3 ದಿನಗಳ ಅನುಮತಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 07; ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ದಾವಣಗರೆ ಜಿಲ್ಲೆಯಲ್ಲಿ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ವಾರದಲ್ಲಿ ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅನುಮತಿ ನೀಡಿದೆ.‌

ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಜೂನ್ 7, 9 ಹಾಗೂ 11 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ" ಎಂದು ಹೇಳಿದ್ದಾರೆ.

ದಾವಣಗೆರೆ; ಹೇಳಿದಂತೆ ಲಸಿಕೆ‌ ತರಿಸಿದ ಶಾಮನೂರು ಶಿವಶಂಕರಪ್ಪದಾವಣಗೆರೆ; ಹೇಳಿದಂತೆ ಲಸಿಕೆ‌ ತರಿಸಿದ ಶಾಮನೂರು ಶಿವಶಂಕರಪ್ಪ

"ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಜಿಲ್ಲೆಯಲ್ಲಿ ಸತತವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದರು.

ದಾವಣಗೆರೆ; ಜೂನ್ 7ರ ತನಕ ಸಂಪೂರ್ಣ ಲಾಕ್‌ಡೌನ್ ದಾವಣಗೆರೆ; ಜೂನ್ 7ರ ತನಕ ಸಂಪೂರ್ಣ ಲಾಕ್‌ಡೌನ್

Allowed 3 Days To Buy Essential Items In Davanagere

ಮದುವೆಗೆ ನಿಷೇಧ; ಹೊಸ ನಿರ್ಬಂಧಗಳನ್ವಯ ಅನುಮತಿ‌ ನೀಡಿರುವ ಮೂರು ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಹಾಲು, ಮೊಟ್ಟೆ, ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಎಲ್ಲವೂ ಬಂದ್ ಆಗಲಿದೆ.‌ ಜೂ.14 ರವರೆಗೆ ಯಾವುದೇ ಮದುವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ದಾವಣಗೆರೆ; ಸ್ಟಾಫ್‌ನರ್ಸ್‌ ಆತ್ಮಹತ್ಯೆಗೆ ತಿರುವು ಕೊಟ್ಟ ಡೆತ್‌ನೋಟ್ ದಾವಣಗೆರೆ; ಸ್ಟಾಫ್‌ನರ್ಸ್‌ ಆತ್ಮಹತ್ಯೆಗೆ ತಿರುವು ಕೊಟ್ಟ ಡೆತ್‌ನೋಟ್

Recommended Video

Pizza Burger ಮನೆಗೆ ತಲುಪಿಸೋದಾದ್ರೆ ರೇಷನ್ ಯಾಕೆ ಆಗಲ್ಲ : Arvind Kejriwal | Oneindia Kannada

ಟೆಸ್ಟ್ ಹೆಚ್ಚಿಸಿ; ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವ ಮೂಲಕ ಸೋಂಕಿತರನ್ನು ಬೇಗ ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಬೇಕು.‌ ಕೊರೊನಾ ಬಗೆಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುವ ಸಾಧ್ಯತೆಗಳಿರುವ ಬಗೆಗೆ ತಾಂತ್ರಿಕ ಸಮಿತಿಯವರು ಮೂನ್ಸೂಚನೆ ನೀಡಿದ್ದು, ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

English summary
Davanagere district administration allowed 3 days to buy essential items. Lockdown extended till June 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X